AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಲ್ಕಿ 2898 ಎಡಿ’ ಸೀಕ್ವೆಲ್ ಬರೋಕೆ ದಿನಾಂಕ ಫಿಕ್ಸ್? ಅಡೆತಡೆ ದಾಟಿದ ತಂಡ

ಪ್ರಭಾಸ್ ಅಭಿನಯದ ‘ಕಲ್ಕಿ 2898 AD’ ಭರ್ಜರಿ ಯಶಸ್ಸಿನ ನಂತರ, 'ಕಲ್ಕಿ 2' ತಯಾರಿಗೆ ತಂಡ ಸಜ್ಜಾಗಿದೆ. ಆರಂಭಿಕ ಅಡೆತಡೆಗಳನ್ನು ನಿವಾರಿಸಿ, 2027ರ ಡಿಸೆಂಬರ್‌ಗೆ ಸಿನಿಮಾ ಬಿಡುಗಡೆಯಾಗಲಿದೆ. ದೀಪಿಕಾ ಪಡುಕೋಣೆ ಬದಲು ಸಾಯಿ ಪಲ್ಲವಿ ಸೇರ್ಪಡೆಯಾಗಿದ್ದು, ಅಮಿತಾಭ್ ಬಚ್ಚನ್ ಅವರ ಸುರಕ್ಷತೆಗೆ ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಭಾಗದಲ್ಲಿ ಪ್ರಭಾಸ್, ಕಮಲ್ ಹಾಸನ್ ನಡುವಿನ ಅಸಲಿ ಯುದ್ಧ ಶುರುವಾಗಲಿದೆ.

‘ಕಲ್ಕಿ 2898 ಎಡಿ’ ಸೀಕ್ವೆಲ್ ಬರೋಕೆ ದಿನಾಂಕ ಫಿಕ್ಸ್? ಅಡೆತಡೆ ದಾಟಿದ ತಂಡ
ಕಲ್ಕಿ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on: May 09, 2026 | 10:09 AM

Share

ಪ್ರಭಾಸ್ ಅಭಿನಯದ ‘ಕಲ್ಕಿ 2898 ಎಡಿ’ ಸಿನಿಮಾ 2024ರಲ್ಲಿ ರಿಲೀಸ್ ಆಗಿತ್ತು. ಈ ಸಿನಿಮಾ ಭರ್ಜರಿ ಯಶಸ್ಸು ಕಂಡಿತ್ತು. ಈ ಸಿನಿಮಾ ಸಾವಿರಾರು ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಈಗ ಎಲ್ಲರ ಕಣ್ಣು ಪಾರ್ಟ್-2 ಮೇಲಿದೆ. ಆದರೆ, ಎರಡನೇ ಭಾಗದ ಚಿತ್ರೀಕರಣಕ್ಕೆ ಆರಂಭದಲ್ಲೇ ಹಲವು ಅಡೆತಡೆಗಳು ಎದುರಾಗಿದ್ದವು. ಕೊನೆಗೂ ಚಿತ್ರತಂಡ ಅದೆಲ್ಲವನ್ನೂ ದಾಟಿ ಅಖಾಡಕ್ಕೆ ಇಳಿಯಲು ಸಜ್ಜಾಗಿದೆ.

1. ‘ಕಲ್ಕಿ 2’ ತರಲು ನಡೆದಿದೆ ಪ್ಲ್ಯಾನ್

2. 2027ರ ಡಿಸೆಂಬರ್​ನಲ್ಲಿ ರಿಲೀಸ್

3. ಪ್ರಭಾಸ್, ಬಚ್ಚನ್, ಕಮಲ್ ಹಾಸನ್, ಸಾಯಿ ಪಲ್ಲವಿ ಶೂಟ್​ನಲ್ಲಿ ಭಾಗಿ

‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ನಟಿಸಿದ್ದರು. ಅವರು ಎರಡನೇ ಭಾಗದಲ್ಲೂ ಮುಂದುವರಿಯಬೇಕಿತ್ತು. ಆದರೆ, ತಾವು ನಟಿಸೋಲ್ಲ ಎಂದು ನೇರವಾಗಿಯೇ ಹೇಳಿದರು. ಇನ್ನು ಅಮಿತಾಭ್ ಬಚ್ಚನ್ ಅವರಿಗೆ ವಯಸ್ಸಾಗಿದ್ದು, ಸಿನಿಮಾ ಶೂಟಿಂಗ್ ಮಾಡೋದು ಅವರಿಗೆ ತುಂಬಾನೇ ರಿಸ್ಕ್ ಆಗಿರಲಿದೆ. ಈ ಎಲ್ಲಾ ಸಮಸ್ಯೆಗಳಿಗೆ ಚಿತ್ರತಂಡ ಪರಿಹಾರ ಕಂಡುಕೊಂಡಿದೆ ಎನ್ನಲಾಗಿದೆ.

ವರದಿಗಳ ಪ್ರಕಾರ, ಮುಂದಿನ ವರ್ಷದ ಏಪ್ರಿಲ್ ಒಳಗೆ ಪ್ರಮುಖ ತಾರೆಯರಾದ ಪ್ರಭಾಸ್, ಅಮಿತಾಭ್ ಬಚ್ಚನ್, ಕಮಲ್ ಹಾಸನ್ ಹಾಗೂ ಸಾಯಿ ಪಲ್ಲವಿ (ದೀಪಿಕಾ ಬದಲಿಗೆ) ಅವರ ಭಾಗದ ಚಿತ್ರೀಕರಣ ಪೂರ್ಣಗೊಳ್ಳಲಿದೆಯಂತೆ. ನಾಗ್ ಅಶ್ವಿನ್ ನಿರ್ದೇಶನದ ಈ ಸಿನಿಮಾ ಮೊದಲ ಭಾಗಕ್ಕಿಂತಲೂ ಹೆಚ್ಚು ಅದ್ದೂರಿಯಾಗಿ ಮೂಡಿಬರಲಿದೆ.

‘ಕಲ್ಕಿ-2’ ತಂಡವು 2027ರ ಡಿಸೆಂಬರ್‌ನಲ್ಲಿ ಸಿನಿಮಾವನ್ನು ತೆರೆಗೆ ತರುವ ಗುರಿ ಹೊಂದಿದೆ. ಚಿತ್ರದಲ್ಲಿ ಹೆಚ್ಚಿನ ಗ್ರಾಫಿಕ್ಸ್ ಕೆಲಸಗಳು ಇರುವುದರಿಂದ ಪೋಸ್ಟ್ ಪ್ರೊಡಕ್ಷನ್ ಕೆಲಸಕ್ಕೆ ಹೆಚ್ಚು ಸಮಯ ನೀಡಲು ಚಿತ್ರತಂಡ ನಿರ್ಧರಿಸಿದೆ. ಸುಪ್ರೀಂ ಯಾಸ್ಕಿನ್ (ಕಮಲ್ ಹಾಸನ್) ಮತ್ತು ಭೈರವ (ಪ್ರಭಾಸ್) ನಡುವಿನ ಅಸಲಿ ಯುದ್ಧ ಈ ಭಾಗದಲ್ಲಿ ಶುರುವಾಗಲಿದೆ. ಅಶ್ವತ್ಥಾಮ (ಅಮಿತಾಭ್ ಬಚ್ಚನ್) ಮತ್ತು ಯಾಸ್ಕಿನ್ ಎದುರುಬದರು ಆಗುವ ದೃಶ್ಯಗಳು ಸಿನಿಮಾದ ಹೈಲೈಟ್ ಆಗಲಿವೆ.

ಇದನ್ನೂ ಓದಿ: ‘ಕಿಂಗ್’ ಸಿನಿಮಾ ಚಿತ್ರೀಕರಣದ ವಿಡಿಯೋ ಲೀಕ್: ಬೀಚ್‌ನಲ್ಲಿ ಶಾರುಖ್, ದೀಪಿಕಾ ರೊಮ್ಯಾನ್ಸ್

ದೀಪಿಕಾ ಬದಲಿಗೆ ಈಗಾಗಲೇ ಸಾಯಿ ಪಲ್ಲವಿ ಅವರ ಆಯ್ಕೆ ನಡೆದಿದೆ. ಪ್ರಭಾಸ್ ಅವರ ಶೂಟಿಂಗ್ ವೇಳೆ ಆ್ಯಕ್ಷನ್ ದೃಶ್ಯಗಳಿದ್ದರೆ ಅದನ್ನು ಡೂಪ್ ಮೂಲಕ ಮಾಡಲು ನಿರ್ಧರಿಸಲಾಗಿದೆ. ಈ ಮೂಲಕ ಅಮಿತಾಭ್ ಬಚ್ಚನ್ ಅವರಿಗೆ ಹೆಚ್ಚು ತೊಂದರೆ ನೀಡದಿರಲು ತಂಡ ನಿರ್ಧರಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!