ಮುಂದೂಡಿಕೆ ಆಯ್ತಾ ‘ಕಲ್ಕಿ 2898 ಎಡಿ’ ಸಿನಿಮಾ ರಿಲೀಸ್ ದಿನಾಂಕ?
ಲೋಕಸಭಾ ಚುನಾವಣೆ ಹತ್ತಿರ ಆದಾಗ ಎಲ್ಲರ ಗಮನ ರಾಜಕೀಯದ ಚಟುವಟಿಕೆಗಳ ಮೇಲೆ ಇರುತ್ತದೆ. ಇಂಥ ಸಮಯದಲ್ಲಿ ಸಿನಿಮಾದ ಪ್ರಚಾರ ಸೂಕ್ತವಾಗಿ ಆಗುವುದಿಲ್ಲ. ಹಾಗಾಗಿ ‘ಕಲ್ಕಿ 2898 ಎಡಿ’ ಸಿನಿಮಾದ ರಿಲೀಸ್ ದಿನಾಂಕ ಮುಂದೂಡುವುದು ಉತ್ತಮ ಎನ್ನುವ ನಿರ್ಧಾರಕ್ಕೆ ಬರಲಾಗಿದೆ ಎಂದು ಕೆಲವು ಮಾಧ್ಯಮಗಳು ಸುದ್ದಿ ಪ್ರಕಟಿಸಿವೆ.

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ ‘ಕಲ್ಕಿ 2898 ಎಡಿ’ (Kalki 2898 AD) ಚಿತ್ರ ಮುಂಚೂಣಿಯಲ್ಲಿದೆ. ಈ ಸಿನಿಮಾದಲ್ಲಿ ನಟ ಪ್ರಭಾಸ್ (Prabhas) ಅವರು ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ‘ಸಲಾರ್’ ಸಿನಿಮಾದ ಗೆಲುವಿನ ಬಳಿಕ ಅಭಿಮಾನಿಗಳಿಗೆ ‘ಕಲ್ಕಿ 2898 ಎಡಿ’ ಚಿತ್ರದ ಮೇಲೆ ಕ್ರೇಜ್ ಜಾಸ್ತಿ ಆಗಿದೆ. ಬೇಸಿಗೆ ರಜೆಯ ಲಾಭ ಪಡೆಯಲು ಈ ಚಿತ್ರತಂಡದವರು ಸ್ಕೆಚ್ ಹಾಕಿದ್ದಾರೆ. ಈ ಸಿನಿಮಾದ ರಿಲೀಸ್ ದಿನಾಂಕದ (Kalki 2898 AD Release Date) ಬಗ್ಗೆ ಈಗ ಹೊಸ ಅಪ್ಡೇಟ್ ಕೇಳಿಬರುತ್ತಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..
ಕಳೆದ ಕೆಲವು ದಿನಗಳಲ್ಲಿ ‘ಕಲ್ಕಿ 2898 ಎಡಿ’ ಸಿನಿಮಾದ ರಿಲೀಸ್ ಡೇಟ್ ಬಗ್ಗೆ ಗೊಂದಲ ಮೂಡಿದೆ. ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆ ಆದ ಬಳಿಕ ಈ ಗೊಂದಲ ಶುರುವಾಗಿದೆ. ತೆಲುಗು ರಾಜ್ಯಗಳಲ್ಲಿ ಮೇ 12ರಂದು ಎಲೆಕ್ಷನ್ ನಡೆಯಲಿದೆ. ಅದಕ್ಕೂ 3 ದಿನ ಮುನ್ನ, ಅಂದರೆ ಮೇ 9ರಂದು ‘ಕಲ್ಕಿ 2898 ಎಡಿ’ ಬಿಡುಗಡೆ ಮಾಡಬೇಕು ಎಂಬುದು ಮೊದಲಿನ ಪ್ಲ್ಯಾನ್ ಆಗಿತ್ತು. ಆದರೆ ಈಗ ದಿನಾಂಕದಲ್ಲಿ ಬದಲಾವಣೆ ಆಗಿರುವ ಸಾಧ್ಯತೆ ದಟ್ಟವಾಗಿದೆ.
ಚುನಾವಣೆ ಹತ್ತಿರವಾದಾಗ ಎಲ್ಲರ ಗಮನವೂ ರಾಜಕೀಯದ ಚಟುವಟಿಕೆಗಳ ಮೇಲಿರುತ್ತದೆ. ಇಂಥ ಸಂದರ್ಭದಲ್ಲಿ ಸಿನಿಮಾದ ಪ್ರಚಾರ ಸರಿಯಾಗಿ ಆಗುವುದಿಲ್ಲ. ಆದ್ದರಿಂದ ‘ಕಲ್ಕಿ 2898 ಎಡಿ’ ಸಿನಿಮಾದ ಬಿಡುಗಡೆ ದಿನಾಂಕ ಮುಂದೂಡಬೇಕೋ ಅಥವಾ ಬೇಡವೋ ಎಂಬ ಬಗ್ಗೆ ಟ್ರೇಡ್ ವಿಶ್ಲೇಷಕರ ಜೊತೆ ಚಿತ್ರತಂಡ ಚರ್ಚೆ ನಡೆಸಿದೆ. ಅಂತಿಮವಾಗಿ ರಿಲೀಸ್ ಡೇಟ್ ಮುಂದೂಡುವುದೇ ಉತ್ತಮ ಎಂಬ ನಿರ್ಧಾರಕ್ಕೆ ಬರಲಾಗಿದೆ ಎಂದು ಕೆಲವು ಮಾಧ್ಯಮಗಳು ಸುದ್ದಿ ಪ್ರಕಟ ಮಾಡಿವೆ.
ಇದನ್ನೂ ಓದಿ: ಬೆಂಗಳೂರಲ್ಲಿ ಪ್ರಭಾಸ್ ಫ್ಯಾನ್ಗೆ ಅಲ್ಲು ಅರ್ಜುನ್ ಅಭಿಮಾನಿಗಳಿಂದ ಥಳಿತ
‘ಕಲ್ಕಿ 2898 ಎಡಿ’ ಚಿತ್ರತಂಡದಿಂದ ರಿಲೀಸ್ ದಿನಾಂಕದ ಬದಲಾವಣೆ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳುವುದು ಬಾಕಿ ಇದೆ. ಅದಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಈ ಸಿನಿಮಾದಲ್ಲಿ ಪ್ರಭಾಸ್ ಜೊತೆ ಕಮಲ್ ಹಾಸನ್, ಅಮಿತಾಭ್ ಬಚ್ಚನ್, ದಿಶಾ ಪಟಾನಿ, ದೀಪಿಕಾ ಪಡುಕೋಣೆ ಅವರಂತಹ ಸೂಪರ್ ಸ್ಟಾರ್ ಕಲಾವಿದರು ಅಭಿನಯಿಸುತ್ತಿದ್ದಾರೆ. ಆ ಕಾರಣದಿಂದಲೂ ನಿರೀಕ್ಷೆ ಹೆಚ್ಚಾಗಿದೆ. ನಾಗ್ ಅಶ್ವಿನ್ ಅವರು ನಿರ್ದೇಶನ ಮಾಡುತ್ತಿದ್ದು, ‘ವೈಜಯಂತಿ ಮೂವೀಸ್’ ಸಂಸ್ಥೆಯು ನಿರ್ಮಾಣ ಮಾಡುತ್ತಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.




