AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಲ್ಕಿ 2898 ಎಡಿ’ ರಿಲೀಸ್ ದಿನಾಂಕ ತಿಳಿಸಿದ ತಂಡ; ಈ ಡೇಟ್​ ಆಯ್ಕೆಗೆ ಇದೆ ವಿಶೇಷ ಕಾರಣ  

Kalki 2898 AD Release Date: ‘ಕಲ್ಕಿ 2898 ಎಡಿ’ ಚಿತ್ರಕ್ಕೆ ನಾಗ್ ಅಶ್ವಿನ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಟೀಸರ್ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಪ್ರಭಾಸ್ ಅವರು ಕಲ್ಕಿ ಅವತಾರ ತಾಳಿದ್ದಾರೆ. ಇದು ಪ್ಯಾನ್ ಇಂಡಿಯಾ ಸಿನಿಮಾ.

‘ಕಲ್ಕಿ 2898 ಎಡಿ’ ರಿಲೀಸ್ ದಿನಾಂಕ ತಿಳಿಸಿದ ತಂಡ; ಈ ಡೇಟ್​ ಆಯ್ಕೆಗೆ ಇದೆ ವಿಶೇಷ ಕಾರಣ  
ಪ್ರಭಾಸ್
 ಶ್ರೀಲಕ್ಷ್ಮೀ ಎಚ್
| Updated By: Digi Tech Desk|

Updated on:Jan 12, 2024 | 3:33 PM

Share

ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ (Salaar Movie)  ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಈ ಚಿತ್ರ ವಿಶ್ವ ಬಾಕ್ಸ್ ಆಫೀಸ್​ನಲ್ಲಿ 650 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಖುಷಿಯಲ್ಲಿರುವ ಅಭಿಮಾನಿಗಳಿಗೆ ಮತ್ತೊಂದು ಗುಡ್​ನ್ಯೂಸ್ ಸಿಕ್ಕಿದೆ.ಕಲ್ಕಿ 2898 ಎಡಿ ಚಿತ್ರದ ರಿಲೀಸ್ ದಿನಾಂಕವನ್ನು ತಂಡ ಘೋಷಿಸಿದೆ. ಈ ಚಿತ್ರ ಮುಂಬರುವ ಮೇ 9ರಂದು ಬಿಡುಗಡೆ ಆಗಲಿದೆ. ಇದನ್ನು ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಈ ಚಿತ್ರದಿಂದ ಪ್ರಭಾಸ್​ ಮತ್ತೊಂದು ಗೆಲುವು ಕಾಣುವ ನಿರೀಕ್ಷೆಯಲ್ಲಿದ್ದಾರೆ.

‘ಕಲ್ಕಿ 2898 ಎಡಿ’ ಚಿತ್ರಕ್ಕೆ ನಾಗ್ ಅಶ್ವಿನ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಟೀಸರ್ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಪ್ರಭಾಸ್ ಅವರು ಕಲ್ಕಿ ಅವತಾರ ತಾಳಿದ್ದಾರೆ. ಇದು ಪ್ಯಾನ್ ಇಂಡಿಯಾ ಸಿನಿಮಾ. ಇಂದು (ಜನವರಿ 12) ಸಿನಿಮಾದ ರಿಲೀಸ್ ದಿನಾಂಕ ತಿಳಿಸಲಾಗಿದೆ. ಇನ್ನು ನಾಲ್ಕು ತಿಂಗಳಲ್ಲಿ ಚಿತ್ರ ಪ್ರೇಕ್ಷಕರ ಎದುರು ಬರಲಿದೆ. ಇದಕ್ಕೆ ಈಗಲೇ ಪ್ರಚಾರ ಕಾರ್ಯ ಆರಂಭಿಸಲಾಗಿದೆ.

ವಾರಣಾಸಿ, ಮುಂಬೈ, ದೆಹಲಿ, ಚಂಡೀಗಢ, ಚೆನ್ನೈ, ಮದುರೈ, ಹೈದರಾಬಾದ್, ವಿಶಾಖಪಟ್ಟಣ, ಗುಂಟೂರು, ಕಾಶ್ಮೀರ ಹಾಗೂ ವಿಜಯವಾಡದಲ್ಲಿ ರೈಡರ್ಸ್​ ರಿಲೀಸ್ ಡೇಟ್​ನ ಅನೌನ್ಸ್ ಮಾಡಿದ್ದಾರೆ. ಭಿನ್ನ ರೀತಿಯಲ್ಲಿ ಈ ಕಾರ್ಯಕ್ರಮ ನಡೆದಿದೆ. ‘ವೈಜಯಂತಿ ಮೂವೀಸ್’ ಮೂಲಕ ಸಿ. ಅಶ್ವಿನಿ ದತ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ನಿರ್ಮಾಣ ಸಂಸ್ಥೆಗೆ 50 ವರ್ಷಗಳ ಸಂಭ್ರಮ. ಮೇ 9ರಂದು ವೈಜಯಂತಿ ಮೂವೀಸ್ ಆರಂಭ ಆಗಿ 5 ದಶಕ ತುಂಬಲಿದೆ. ಹೀಗಾಗಿ, ಈ ದಿನಾಂಕ ಆಯ್ಕೆ ಮಾಡಿಕೊಳ್ಳಲಾಗಿದೆ. ಈ ಮೊದಲು ವೈಜಯಂತಿ ಮೂವೀಸ್ ನಿರ್ಮಾಣ ಮಾಡಿದ ‘ಜಗದೇಕ ವೀರುಡು ಅತಿಲೋಕ ಸುಂದರಿ’, ‘ಮಹಾನಟಿ’ ಮೊದಲಾದ ಸಿನಿಮಾಗಳು ಮೇ 9ರಂದು ರಿಲೀಸ್ ಆಗಿದ್ದವು. ಈಗ ಈ ಸಾಲಿ ‘ಕಲ್ಕಿ 2898’ ಸೇರ್ಪಡೆ ಆಗುತ್ತಿದೆ.

ಇದನ್ನೂ ಓದಿ: ‘ಸಲಾರ್​’ ಗೆಲುವಿನ ಬೆನ್ನಲ್ಲೇ ಪ್ರಭಾಸ್​ ಅಭಿಮಾನಿಗಳಿಗೆ ‘ಕಲ್ಕಿ 2898 ಎಡಿ’ ಚಿತ್ರದಿಂದ ಸಿಹಿ ಸುದ್ದಿ

‘ಕಲ್ಕಿ 2898 ಎಡಿ’ ಚಿತ್ರದಲ್ಲಿ ದೊಡ್ಡ ತಾರಾ ಬಳಗ ಇದೆ. ಅಮಿತಾಭ್ ಬಚ್ಚನ್, ಪ್ರಭಾಸ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮೊದಲಾದವರು ನಟಿಸಿದ್ದಾರೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿದೆ.  ಈ ಚಿತ್ರದ ಮೂಲಕ ಪ್ರಭಾಸ್ ಮತ್ತೊಂದು ಗೆಲುವು ಕಾಣಲಿ ಎಂದು ಫ್ಯಾನ್ಸ್ ಹಾರೈಸುತ್ತಿದ್ದಾರೆ. ಸಿನಿಮಾದ ಕಥೆ ಬಗ್ಗೆ ಕುತೂಹಲ ಮೂಡಿದೆ. ಮೈಥಾಲಜಿ-ಸೈನ್ಸ್ ಫಿಕ್ಷನ್ ಶೈಲಿಯಲ್ಲಿ ಸಿನಿಮಾ ಮೂಡಿ ಬರುತ್ತಿದೆ. ಕಮಲ್ ಹಾಸನ್ ಅವರು ಇತ್ತೀಚೆಗೆ ತಂಡ ಸೇರಿದ್ದಾರೆ. ಈ ಚಿತ್ರದ ಮೂಲಕ ದೀಪಿಕಾ ಮತ್ತೆ ದಕ್ಷಿಣದತ್ತ ಮುಖ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:07 pm, Fri, 12 January 24

ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ