AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಾಜೆಕ್ಟ್ ಕೆ ಸೇರಿಕೊಂಡ ಕಮಲ್ ಹಾಸನ್: ಪ್ರಭಾಸ್ ಎದುರು ಗುದ್ದಾಡೋಕೆ ರೆಡಿ

Kamal Haasan: ಪ್ರಭಾಸ್​ರ ಹೊಸ ಸಿನಿಮಾದಲ್ಲಿ ಕಮಲ್ ಹಾಸನ್ ನಟಿಸುತ್ತಿದ್ದಾರೆ ಅದೂ ವಿಲನ್ ಪಾತ್ರದಲ್ಲಿ.

ಪ್ರಾಜೆಕ್ಟ್ ಕೆ ಸೇರಿಕೊಂಡ ಕಮಲ್ ಹಾಸನ್: ಪ್ರಭಾಸ್ ಎದುರು ಗುದ್ದಾಡೋಕೆ ರೆಡಿ
ಕಮಲ್ ಹಾಸನ್
ಮಂಜುನಾಥ ಸಿ.
|

Updated on: Jun 25, 2023 | 3:08 PM

Share

ಪ್ರಭಾಸ್ (Prabhas) ನಟನೆಯ ಆದಿಪುರುಷ್ (Adipurush) ಸಿನಿಮಾ ಅಭಿಮಾನಿಗಳ ನಿರೀಕ್ಷೆ ಮುಟ್ಟುವಲ್ಲಿ ವಿಫಲವಾಗಿದ್ದು, ಇದೀಗ ಪ್ರಭಾಸ್ ಅಭಿಮಾನಿಗಳು ಸಲಾರ್ ಹಾಗೂ ಪ್ರಾಜೆಕ್ಟ್ ಕೆ ಸಿನಿಮಾದತ್ತ ಮುಖ ಮಾಡಿದ್ದಾರೆ. ಸಲಾರ್ (Salaar) ಸಿನಿಮಾದ ಚಿತ್ರೀಕರಣ ಬಹುತೇಕ ಪೂರ್ಣಗೊಂಡಿದ್ದು ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕಾರ್ಯಗಳು ಚಾಲ್ತಿಯಲ್ಲಿವೆ. ಇನ್ನು ಪ್ರಾಜೆಕ್ಟ್ ಕೆ ಸಿನಿಮಾ ಇನ್ನೂ ಚಿತ್ರೀಕರಣ ಹಂತದಲ್ಲಿದ್ದು ಈ ಸಿನಿಮಾವನ್ನು ಪ್ರಭಾಸ್​ರ ಈವರೆಗಿನ ದೊಡ್ಡ ಸಿನಿಮಾ ಆಗಿ ತೆರೆಗೆ ತರುವ ಪ್ರಯತ್ನಗಳು ನಡೆಯುತ್ತಿವೆ. ಈಗಾಗಲೇ ಅತಿರತ ಮಹಾರತ ನಟರುಗಳು ಪ್ರಾಜೆಕ್ಟ್ ಕೆ ಸಿನಿಮಾದ ಭಾಗವಾಗಿದ್ದು ಇದೀಗ ಹೊಸದಾಗಿ ದೇಶದ ಅತ್ಯುತ್ತಮ ನಟರಲ್ಲಿ ಅಗ್ರಗಣ್ಯರಾಗಿರುವ ಕಮಲ್ ಹಾಸನ್ ಸೇರಿಕೊಂಡಿದ್ದಾರೆ.

ಕಮಲ್ ಹಾಸನ್, ಪ್ರಾಜೆಕ್ಟ್ ಕೆ ತಂಡ ಸೇರಲಿದ್ದಾರೆ ಎಂಬ ಸುದ್ದಿ ಕಳೆದ ಕೆಲವು ದಿನಗಳಿಂದಲೂ ಹರಿದಾಡುತ್ತಿತ್ತು. ಆದರೆ ಸುದ್ದಿ ಖಾತ್ರಿಯಾಗಿರಲಿಲ್ಲ. ಈಗ ಚಿತ್ರತಂಡ ಈ ಸುದ್ದಿಯನ್ನು ಅಧಿಕೃತಗೊಳಿಸಿದ್ದು, ಪ್ರಾಜೆಕ್ಟ್ ಕೆ ತಂಡಕ್ಕೆ ಕಮಲ್ ಹಾಸನ್ ಅವರಿಗೆ ಸ್ವಾಗತ ಕೋರಿದೆ. ವಿಶೇಷವೆಂದರೆ ಈ ಸಿನಿಮಾದಲ್ಲಿ ಕಮಲ್ ಹಾಸನ್ ವಿಲನ್ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಪ್ರಾಜೆಕ್ಟ್ ಕೆ ಸಿನಿಮಾದ ಪ್ರಮುಖ ವಿಲನ್ ಪಾತ್ರದಲ್ಲಿ ಕಮಲ್ ಹಾಸನ್ ಕಾಣಿಸಿಕೊಳ್ಳಲಿದ್ದಾರೆ.

ಪ್ರಭಾಸ್, ಕಮಲ್ ಹಾಸನ್​ರ ದೊಡ್ಡ ಅಭಿಮಾನಿ, ಸಿನಿಮಾ ಸಂಬಂಧಿ ಕಾರ್ಯಕ್ರಮವೊಂದರಲ್ಲಿ ಕಮಲ್ ಪಕ್ಕ ಕೂತು ಈ ಬಗ್ಗೆ ಮಾತನಾಡಿದ್ದ ಪ್ರಭಾಸ್, ”ನಾನು ಇಂದು ಅವರ ಪಕ್ಕ ಕೂತಿರುವುದು ನನ್ನ ಪುಣ್ಯ ಎಂದುಕೊಂಡಿದ್ದೇನೆ. ನನ್ನ ಪರಿಚಯ ಅವರಿಗೆ ಇರಲಿಕ್ಕಿಲ್ಲ, ಸರ್ ನನ್ನ ಹೆಸರು ಪ್ರಭಾಸ್, ನಾನೊಬ್ಬ ನಟ” ಎಂದು ಅಂದು ಪರಿಚಯ ಮಾಡಿಕೊಂಡಿದ್ದರು. ಆದರೆ ಈಗ ಪ್ರಭಾಸ್ ಸಿನಿಮಾದಲ್ಲಿ ಕಮಲ್ ಹಾಸನ್ ವಿಲನ್ ಆಗಿದ್ದಾರೆ.

ಇದನ್ನೂ ಓದಿ:‘ಆದಿಪುರುಷ್’ ಸಿನಿಮಾ ನೋಡಲು 5,500 ಕಿಮೀ ಪ್ರಯಾಣಿಸಿದ ಪ್ರಭಾಸ್ ಮಹಿಳಾ ಅಭಿಮಾನಿ

ಪ್ರಾಜೆಕ್ಟ್ ಕೆ ಸಿನಿಮಾವನ್ನು ಭಾರಿ ದೊಡ್ಡ ಪ್ರಮಾಣದಲ್ಲಿ ಚಿತ್ರತಂಡ ನಿರ್ಮಿಸುತ್ತಿದೆ. ಈ ಸಿನಿಮಾದಲ್ಲಿ ಪ್ರಭಾಸ್ ಜೊತೆಗೆ ದೀಪಿಕಾ ಪಡುಕೋಣೆ, ಅಮಿತಾಬ್ ಬಚ್ಚನ್, ದಿಶಾ ಪಟಾನಿ ಅವರುಗಳು ನಟಿಸುತ್ತಿದ್ದಾರೆ. ಇದೀಗ ಕಮಲ್ ಹಾಸನ್ ಸಹ ಸೇರಿಕೊಂಡಿದ್ದಾರೆ. ಇವರುಗಳ ಜೊತೆಗೆ ಹಿಂದಿ, ತಮಿಳು, ತೆಲುಗಿನ ಹಲವು ಖ್ಯಾತನಾಮ ಪೋಷಕ ನಟರು ಸಹ ನಟಿಸುತ್ತಿದ್ದಾರೆ.

ಈ ಸಿನಿಮಾವನ್ನು ಮಹಾನಟಿ ಖ್ಯಾತಿಯ ನಾಗ್ ಅಶ್ವಿನ್ ನಿರ್ದೇಶನ ಮಾಡುತ್ತಿದ್ದು, ಸಿನಿಮಾದ ಕತೆಯನ್ನು ಖ್ಯಾತ ಹಿರಿಯ ನಿರ್ದೇಶಕ ಸಿಂಗೀತಂ ಶ್ರೀನಿವಾಸ್ ಅವರೊಟ್ಟಿಗೆ ಸೇರಿ ಬರೆದಿದ್ದಾರೆ. ಈ ಸಿನಿಮಾಕ್ಕೆ ಬಂಡವಾಳ ಹೂಡಿರುವುದು ವೈಜಯಂತಿ ಮೂವೀಸ್​ನ ಅಶ್ವಿನಿ ದತ್. ಸಿನಿಮಾವು ಭವಿಷ್ಯ ಹಾಗೂ ಭೂತಕಾಲದ ಪ್ರಪಂಚಗಳ ಬಗ್ಗೆಯಾಗಿದೆ. ಈ ಸಿನಿಮಾಕ್ಕಾಗಿ ವಿಶೇಷ ಮಾದರಿಯ ವಾಹನಗಳನ್ನು ಸಹ ತಯಾರಿಸಲಾಗಿದ್ದು, ವಾಹನ ತಯಾರಿಕೆಗೆ ಮಹೇಂದ್ರ ಸಂಸ್ಥೆಯ ಮುಖ್ಯ ಎಂಜಿನಿಯರ್ ನೆರವನ್ನು ನಾಗ್ ಅಶ್ವಿನ್ ಪಡೆದಿದ್ದಾರೆ. ಈ ಸಿನಿಮಾದ ಹೆಸರನ್ನು ಕೆಲವೇ ದಿನಗಳಲ್ಲಿ ಅಮೆರಿಕದಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ನಿಶ್ಚಯಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ