AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kamal Haasan: ಆಸ್ಪತ್ರೆಗೆ ದಾಖಲಾದ ನಟ ಕಮಲ್ ಹಾಸನ್; ಹೆಚ್ಚಿತು ವದಂತಿ

Kamal Haasan: ‘ಇಂಡಿಯನ್ 2’ ಸಿನಿಮಾ ಶೂಟಿಂಗ್​ನಲ್ಲಿ ಕಮಲ್ ಹಾಸನ್ ಬ್ಯುಸಿ ಇದ್ದಾರೆ. ಈ ಮಧ್ಯೆ ಅವರು ಆಸ್ಪತ್ರೆಗೆ ದಾಖಲಾಗಿದ್ದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.

Kamal Haasan: ಆಸ್ಪತ್ರೆಗೆ ದಾಖಲಾದ ನಟ ಕಮಲ್ ಹಾಸನ್; ಹೆಚ್ಚಿತು ವದಂತಿ
ಕಮಲ್ ಹಾಸನ್
TV9 Web
| Edited By: |

Updated on: Nov 24, 2022 | 8:55 AM

Share

ನಟ ಕಮಲ್ ಹಾಸನ್ (Kamal Haasan) ಅವರಿಗೆ ಈಗ 68 ವರ್ಷ ವಯಸ್ಸು. ಈಗಲೂ ಅವರು ಸಿನಿಮಾ ರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ನಿರ್ಮಾಣ ಹಾಗೂ ನಟನೆಯಲ್ಲಿ ಬ್ಯುಸಿ ಇದ್ದಾರೆ. ಇದರ ಜತೆಗೆ ‘ತಮಿಳು ಬಿಗ್ ಬಾಸ್​ ಸೀಸನ್ 6’ನ್ನು ನಡೆಸಿಕೊಡುತ್ತಿದ್ದಾರೆ. ಈಗ ಕಮಲ್ ಹಾಸನ್ ಅವರು ಚೆನ್ನೈನ ಶ್ರೀ ರಾಮಚಂದ್ರ ಮೆಡಿಕಲ್ ಸೆಂಟರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಸಾಮಾನ್ಯ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

ಕಮಲ್ ಹಾಸನ್ ಅವರ ನಟಿಸಿ, ನಿರ್ಮಿಸಿದ ‘ವಿಕ್ರಮ್’ ಸಿನಿಮಾ ಈ ವರ್ಷ ತೆರೆಗೆ ಬಂತು. ಈ ಚಿತ್ರ ಸೂಪರ್ ಹಿಟ್ ಆಯಿತು. ಈ ಸಿನಿಮಾದಿಂದ ಕಮಲ್ ಹಾಸನ್ ಅವರು ದೊಡ್ಡ ಗೆಲುವು ಕಂಡರು. ನಿರ್ಮಾಪಕನಾಗಿಯೂ ಅವರು ಯಶಸ್ಸು ಕಂಡರು. ಸದ್ಯ ‘ಇಂಡಿಯನ್ 2’ ಸಿನಿಮಾ ಶೂಟಿಂಗ್​ನಲ್ಲಿ ಕಮಲ್ ಹಾಸನ್ ಬ್ಯುಸಿ ಇದ್ದಾರೆ. ಈ ಮಧ್ಯೆ ಅವರು ಆಸ್ಪತ್ರೆಗೆ ದಾಖಲಾಗಿದ್ದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಆದರೆ, ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಆಸ್ಪತ್ರೆಯವರು ಸ್ಪಷ್ಟಪಡಿಸಿದ್ದಾರೆ.

ಸಾಮಾನ್ಯವಾಗಿ ಸೆಲೆಬ್ರಿಟಿಗಳು ಆಸ್ಪತ್ರೆಗೆ ದಾಖಲಾದರೆ ಒಂದಷ್ಟು ವದಂತಿ ಹುಟ್ಟಿಕೊಳ್ಳುತ್ತದೆ. ಕೆಲವರು ಸುಳ್ಳು ಸುದ್ದಿಗಳನ್ನು ಹರಡುತ್ತಾರೆ. ಕಮಲ್ ಹಾಸನ್ ಆರೋಗ್ಯ ವಿಚಾರದಲ್ಲೂ ಕೆಲವರು ಇದೇ ರೀತಿ ಆಗಿದೆ. ನಾನಾ ರೀತಿಯ ಸುಳ್ಳು ಸುದ್ದಿಯನ್ನು ಹಬ್ಬಿಸಲಾಗಿದೆ ಆದರೆ, ಕಮಲ್ ಹಾಸನ್ ಅವರು ಆಸ್ಪತ್ರೆಗೆ ತೆರಳಿರುವುದು ಆರೋಗ್ಯ ತಪಾಸಣೆಗೆ ಅಷ್ಟೇ ಎಂದು ವೈದ್ಯರು ಸ್ಪಷ್ಟನೆ ನೀಡಿದ್ದಾರೆ. ಇದರಿಂದ ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ.

ಇದನ್ನೂ ಓದಿ
Image
Bigg Boss Elimination: ಬಿಗ್​ ಬಾಸ್​ನಲ್ಲಿ ದರ್ಶ್​ ಆಟ ಅಂತ್ಯ; 3ನೇ ವಾರದ ಎಲಿಮಿನೇಷನ್​ನಲ್ಲಿ ಮಯೂರಿ ಸೇಫ್​
Image
BBK9: ಬಿಗ್​ ಬಾಸ್​ ಮೇಲೆ ಮ್ಯಾಚ್​ ಫಿಕ್ಸಿಂಗ್​ ಆರೋಪ; ಗುರೂಜಿ ವಿರುದ್ಧ ಗುಡುಗಿದ ಸುದೀಪ್​
Image
BBK9: ಬಿಗ್​ ಬಾಸ್​ 2ನೇ ವಾರ ನವಾಜ್​ ಎಲಿಮಿನೇಟ್​; ದೊಡ್ಮನೆಯಲ್ಲಿ ನಡೆಯಲಿಲ್ಲ ಪ್ರಾಸದ ಆಟ
Image
BBK9: ಬಿಗ್​ ಬಾಸ್​ನಿಂದ ಐಶ್ವರ್ಯಾ ಪಿಸ್ಸೆ ಎಲಿಮಿನೇಟ್​; ಒಂದೇ ವಾರಕ್ಕೆ ಮುಗಿಯಿತು ದೊಡ್ಮನೆ ಆಟ

ಇದನ್ನೂ ಓದಿ: ಸದ್ಯಕ್ಕಂತೂ ಸೆಟ್ಟೇರಲ್ಲ ಯಶ್​-ಶಂಕರ್ ಸಿನಿಮಾ; ಕಮಲ್ ಹಾಸನ್ ಟ್ವೀಟ್​ನಲ್ಲೇ ಅಡಗಿದೆ ಉತ್ತರ

‘ಇಂಡಿಯನ್’ ಸಿನಿಮಾ ಹಿಟ್ ಆಗಿತ್ತು. ಹಲವು ವರ್ಷಗಳ ಬಳಿಕ ಈ ಚಿತ್ರಕ್ಕೆ ಸೀಕ್ವೆಲ್ ಸಿದ್ಧವಾಗುತ್ತಿದೆ. ಶಂಕರ್ ನಿರ್ದೇಶನ ಇರುವ ಈ ಚಿತ್ರದಲ್ಲಿ ಕಮಲ್ ಹಾಸನ್ ಅವರು ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದ ಶೂಟಿಂಗ್ ಕೆಲ ವರ್ಷಗಳ ಹಿಂದೇ ಆರಂಭ ಆಗಿತ್ತು. ಆದರೆ, ಸೆಟ್​ನಲ್ಲಿ ಕ್ರೇನ್ ಅಪಘಾತ ಉಂಟಾಗಿ ಕೆಲವರು ಮೃತಪಟ್ಟರು. ಆ ಬಳಿಕ ಚಿತ್ರದ ಶೂಟಿಂಗ್ ನಿಂತಿತ್ತು. ‘ವಿಕ್ರಮ್’ ಹಿಟ್ ಆದ ಬಳಿಕ ಕಮಲ್ ಹಾಸನ್​ ಅವರು ಈ ಚಿತ್ರವನ್ನು ಆಯ್ಕೆ ಮಾಡಿಕೊಂಡಿದ್ದಾರೆ.

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ