AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಮಲ್ ಹಾಸನ್ ಜನ್ಮದಿನ; ಈ ನಟನ ಒಟ್ಟೂ ಆಸ್ತಿ ಎಷ್ಟು?

Kamal Haasan Birthday: ಇಂದು (ನವೆಂಬರ್ 7) ನಟ ಕಮಲ್ ಹಾಸನ್ ಅವರಿಗೆ 71ನೇ ಜನ್ಮದಿನ. ಬಾಲ ಕಲಾವಿದನಾಗಿ ಚಿತ್ರರಂಗಕ್ಕೆ ಬಂದ ಅವರು, ಬಹುಭಾಷೆಗಳಲ್ಲಿ ನಟಿಸಿ ದೇಶಾದ್ಯಂತ ಜನಪ್ರಿಯತೆ ಗಳಿಸಿದ್ದಾರೆ. ನಿರ್ದೇಶಕ, ಗಾಯಕರಾಗಿಯೂ ಗುರುತಿಸಿಕೊಂಡಿದ್ದಾರೆ. ಸದ್ಯ ಇವರ ಒಟ್ಟು ಆಸ್ತಿ ಸುಮಾರು 450 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ.

ಕಮಲ್ ಹಾಸನ್ ಜನ್ಮದಿನ; ಈ ನಟನ ಒಟ್ಟೂ ಆಸ್ತಿ ಎಷ್ಟು?
ಕಮಲ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Nov 07, 2025 | 7:51 AM

Share

ಕಮಲ್ ಹಾಸನ್ (Kamal Haasan) ಅವರಿಗೆ ಇಂದು (ನವೆಂಬರ್ 7) ಜನ್ಮದಿನ. ಅವರಿಗೆ ಈಗ 71 ವರ್ಷ. ತಮಿಳು ನಾಡಿನಲ್ಲಿ ಹೆಚ್ಚು ಫೇಮಸ್ ಆದ ಅವರು ಕನ್ನಡದಲ್ಲೂ ಸಿನಿಮಾ ಮಾಡಿದ್ದಾರೆ. ತಮಿಳಿನ ಐಯ್ಯಂಗಾರ್ ಕುಟುಂಬದಲ್ಲಿ ಜನಿಸಿದ ಅವರು ಬಾಲ ಕಲಾವಿದನಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ‘ಕಲಾಧುರ ಕಣ್ಣಮ್ಮ’ (1960) ಅವರು ನಟಿಸಿದ ಮೊದಲ ಚಿತ್ರ. ಆಗ ಅವರಿಗೆ 6 ವರ್ಷ ವಯಸ್ಸು. ನಂತರ ಕಮಲ್ ಹಾಸನ್ ಸಾಲು ಸಾಲು ಹಿಟ್ ಚಿತ್ರಗಳನ್ನು ನೀಡಿದರು.

ಕಮಲ್ ಹಾಸನ್ ಅವರು, ತಮಿಳು, ಕನ್ನಡ, ತೆಲುಗು, ಮಲಯಾಳಂ, ಹಿಂದಿ ಹಾಗೂ ಬೆಂಗಾಲಿ ಭಾಷೆಗಳಲ್ಲಿ ನಟಿಸಿದ್ದಾರೆ. ಅವರು ಎಲ್ಲಾ ಭಾಷೆಗಳಲ್ಲೂ ಕಾಣಿಸಿಕೊಂಡಿದ್ದಾರೆ. ದೇಶಾದ್ಯಂತ ಅವರು ಜನಪ್ರಿಯತೆ ಪಡೆದಿದ್ದಾರೆ. ಅವರು ನಟ ಮಾತ್ರ ಅಲ್ಲ. ನಿರ್ದೇಶಕರ, ಚಿತ್ರಕಥೆ ಬರಹಗಾರ, ಗಾಯಕನೂ ಹೌದು.

450 ಕೋಟಿ ರೂಪಾಯಿ ಒಡೆಯ

ಕಮಲ್ ಹಾಸನ್ ಅವರು ಅತಿ ಹೆಚ್ಚು ಸಂಭಾವನೆ ಪಡೆಯೋ ನಟರಲ್ಲಿ ಒಬ್ಬರು. ಅವರು ಪ್ರತಿ ಸಿನಿಮಾಗೆ 100 ಕೋಟಿ ರೂಪಾಯಿ ಪಡೆಯುತ್ತಾರಂತೆ. ಅವರ ಆಸ್ತಿ 70 ಮಿಲಿಯನ್ ಡಾಲರ್. ಅಂದರೆ ಸುಮಾರು 450 ಕೋಟಿ ರೂಪಾಯಿ ಆಸ್ತಿ ಅವರನ್ನು ಹೊಂದಿದ್ದಾರೆ.  ‘ಇಂಡಿಯನ್ 2’ ಚಿತ್ರಕ್ಕೆ ಅವರು 150 ಕೋಟಿ ರೂಪಾಯಿ ಚಾರ್ಜ್ ಮಾಡಿದ್ದರು ಎನ್ನಲಾಗಿದೆ.

ಕಮಲ್ ಹಾಸನ್ ಲಕ್ಷುರಿ ಜೀವನ

ಕಮಲ್ ಹಾಸನ್ ಅವರು ಲಕ್ಷುರಿ ಜೀವನ ನಡೆಸುತ್ತಿದ್ದಾರೆ. ಅವರು ಚೆನ್ನೈನಲ್ಲಿ ಮ್ಯಾನ್ಷನ್ ಹೊಂದಿದ್ದಾರೆ. ಇದರ ಬೆಲೆ 131 ಕೋಟಿ ರೂಪಾಯಿ. ಇವರ ಬಳಿ ಬಿಎಂಡಬ್ಲ್ಯೂ 730, ಲೆಕ್ಸಸ್ ಎಲ್​ಎಕ್ಸ್ 570 ಸೇರಿದಂತೆ ಅನೇಕ ಕಾರುಗಳು ಇವೆ.

ಇದನ್ನೂ ಓದಿ: ‘ರ‍್ಯಾಲಿಗೆ ಬಂದವರೆಲ್ಲ ನಿಮಗೆ ವೋಟ್ ಮಾಡಲ್ಲ’; ದಳಪತಿ ವಿಜಯ್​ಗೆ ಕಮಲ್ ಹಾಸನ್ ಕಿವಿಮಾತು

ಥಗ್ ಲೈಫ್ ವಿವಾದ

ಕಳೆದ ವರ್ಷ ರಿಲೀಸ್ ಆದ ‘ಥಗ್​ ಲೈಫ್’ ಸಿನಿಮಾ ಸಂದರ್ಭದಲ್ಲಿ ಕಮಲ್ ಹಾಸನ್ ವಿವಾದ ಮಾಡಿಕೊಂಡಿದ್ದರು. ಕಮಲ್ ಹಾಸನ್ ಅವರು ‘ಕನ್ನಡ ಹುಟ್ಟಿದ್ದು ತಮಿಳಿನಿಂದ’ ಎಂದು ಹೇಳಿದ್ದರು. ಈ ವಿವಾದ  ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿತ್ತು. ಆ ಬಳಿಕ ಅವರನ್ನು ಸಾಕಷ್ಟು ಟೀಕೆ ಮಾಡಿದ್ದರು. ಕರ್ನಾಟಕದಲ್ಲಿ ಅವರ ಸಿನಿಮಾ ಬ್ಯಾನ್ ಕೂಡ ಆಯಿತು. ಈ ಚಿತ್ರ ಮಾಡಿ ಸಾಕಷ್ಟು ನಷ್ಟ ಅನುಭವಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:49 am, Fri, 7 November 25

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!