AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಮಲ್​ ಹಾಸನ್​ ಆರೋಗ್ಯ ಸ್ಥಿತಿ ಈಗ ಹೇಗಿದೆ? ಹೆಲ್ತ್​ ಬುಲೆಟಿನ್​ ಬಿಡುಗಡೆ ಮಾಡಿದ ವೈದ್ಯರು

Kamal Haasan Health Bulletin: ಈಚೆಗಷ್ಟೇ ಕಮಲ್​ ಹಾಸನ್​ ಅಮೆರಿಕಕ್ಕೆ ಪ್ರವಾಸ ಹೋಗಿದ್ದರು. ಅಲ್ಲಿಂದ ಮರಳಿದ ಮೇಲೆ ಸಣ್ಣ ಪ್ರಮಾಣದ ಕೊವಿಡ್​ ಲಕ್ಷಣಗಳು ಅವರಿಗೆ ಕಾಣಿಸಿಕೊಂಡಿತ್ತು. ಹೀಗಾಗಿ, ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿಸಿದ್ದರು ಕಮಲ್​.

ಕಮಲ್​ ಹಾಸನ್​ ಆರೋಗ್ಯ ಸ್ಥಿತಿ ಈಗ ಹೇಗಿದೆ? ಹೆಲ್ತ್​ ಬುಲೆಟಿನ್​ ಬಿಡುಗಡೆ ಮಾಡಿದ ವೈದ್ಯರು
ಕಮಲ್​ ಹಾಸನ್
TV9 Web
| Edited By: |

Updated on: Nov 22, 2021 | 7:28 PM

Share

ಖ್ಯಾತ ನಟ ಕಮಲ್​ ಹಾಸನ್ (Kamal Hassan)​ ಅವರು ರಾಜಕೀಯದಲ್ಲಿ ಸೋಲು ಕಂಡ ನಂತರದಲ್ಲಿ ಮತ್ತೆ ನಟನೆಗೆ ಮರಳಿದ್ದಾರೆ. ಅವರು ‘ವಿಕ್ರಮ್​’ ಸಿನಿಮಾದ (Vikram Movie) ಶೂಟಿಂಗ್​ನಲ್ಲಿ ಬ್ಯುಸಿಯಾಗಿದ್ದಾರೆ. ಈಗ ಅವರಿಗೆ ಕೊವಿಡ್ ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದು ಸಾಕಷ್ಟು ಆತಂಕ ಮೂಡಿದೆ. ಅವರು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಕೋರುತ್ತಿದ್ದಾರೆ. ಈ ಮಧ್ಯೆ ಆಸ್ಪತ್ರೆ ವೈದ್ಯರು ಕಮಲ್​ ಅವರ ಹೆಲ್ತ್​ ಬುಲೆಟಿನ್​ ಬಿಡುಗಡೆ ಮಾಡಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದಿದ್ದಾರೆ. ಇದರಿಂದ ಫ್ಯಾನ್ಸ್​ ನಿಟ್ಟುಸಿರು ಬಿಟ್ಟಿದ್ದಾರೆ.

ಈಚೆಗಷ್ಟೇ ಕಮಲ್​ ಹಾಸನ್​ ಅಮೆರಿಕಕ್ಕೆ ಪ್ರವಾಸ ಹೋಗಿದ್ದರು. ಅಲ್ಲಿಂದ ಮರಳಿದ ಮೇಲೆ ಸಣ್ಣ ಪ್ರಮಾಣದ ಕೊವಿಡ್​ ಲಕ್ಷಣಗಳು ಅವರಿಗೆ ಕಾಣಿಸಿಕೊಂಡಿತ್ತು. ಹೀಗಾಗಿ, ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿಸಿದ್ದರು ಕಮಲ್​. ಈ ವೇಳೆ ಕೊರೊನಾ ಪಾಸಿಟಿವ್ ಆಗಿರುವುದು ಖಚಿತಗೊಂಡಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಟ್ವೀಟ್​ ಮಾಡಿದ್ದ ಕಮಲ್​ ‘ಅಮೆರಿಕದಿಂದ ವಾಪಸ್ ಬಂದ ಬಳಿಕ ನನಗೆ ಸಣ್ಣದಾಗಿ ಕೆಮ್ಮು ಆರಂಭವಾಗಿತ್ತು. ಪರೀಕ್ಷೆ ಮಾಡಿಸಿದ ನಂತರ ಇದು ಕೋವಿಡ್-19 ಪಾಸಿಟಿವ್ ಎಂಬುದು ತಿಳಿದುಬಂತು. ನಾನೀಗ ಆಸ್ಪತ್ರೆಯಲ್ಲಿ ಐಸೋಲೇಟ್ ಆಗಿದ್ದೇನೆ. ಒಂದು ಅರಿವಾಗಿದ್ದೇನೆಂದರೆ, ಈ ಮಹಾಮಾರಿ ನಮ್ಮನ್ನು ಬಿಟ್ಟು ಇನ್ನೂ ಹೋಗಿಲ್ಲ. ನಾವೆಲ್ಲ ಸುರಕ್ಷಿತವಾಗಿ ಇರಬೇಕಿದೆ’ ಎಂದಿದ್ದರು ಕಮಲ್​.

ಸಂಜೆ ವೇಳೆಗೆ ಆಸ್ಪತ್ರೆಯವರ ಕಡೆಯಿಂದ ಕಮಲ್​ ಆರೋಗ್ಯ ವರದಿ ಬಿಡುಗಡೆ ಆಗಿದೆ. ‘ಕಮಲ್​ ಹಾಸನ್​ ಜ್ವರ ಮತ್ತು ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಕೊವಿಡ್ ಪಾಸಿಟಿವ್ ಆಗಿದೆ. ಅವರ ಆರೋಗ್ಯ ಸ್ಥಿರವಾಗಿದೆ’ ಎಂದು ಆಸ್ಪತ್ರೆಯವರು ತಿಳಿಸಿದ್ದಾರೆ.

ನವೆಂಬರ್​ 7ರಂದು ಕಮಲ್​ ಜನ್ಮದಿನ ಆಚರಿಸಿಕೊಂಡಿದ್ದರು. ಸೆಲೆಬ್ರಿಟಿಗಳು, ಅಭಿಮಾನಿಗಳು, ಸ್ನೇಹಿತರು ಕಮಲ್​ ಹಾಸನ್​ಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದರು. ಬರ್ತ್​ಡೇ ಪ್ರಯುಕ್ತ ಬಹುನಿರೀಕ್ಷಿತ ‘ವಿಕ್ರಮ್​’ ಸಿನಿಮಾ ತಂಡದಿಂದ ಟೀಸರ್​ ಬಿಡುಗಡೆ ಆಗಿತ್ತು. ಈ ಸಿನಿಮಾದಲ್ಲಿ ವಿಜಯ್​ ಸೇತುಪತಿ, ಫಹಾದ್​ ಫಾಸಿಲ್​ ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಟೀಸರ್​ನಲ್ಲಿ ಅನಿರುದ್ಧ್​ ರವಿಚಂದರ್​ ಅವರ ಹಿನ್ನೆಲೆ ಸಂಗೀತ ಕೂಡ ಚಪ್ಪಾಳೆ ಗಿಟ್ಟಿಸಿಕೊಳ್ಳುತ್ತಿದೆ.

ಇದನ್ನೂ ಓದಿ: ಯುಎಸ್ ಪ್ರವಾಸದಿಂದ ಹಿಂದಿರುಗಿದ ನಂತರ ಕಮಲ್ ಹಾಸನ್​​ಗೆ ಕೊರೊನಾ ಪಾಸಿಟಿವ್

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್