AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ನಿಂದ ಕಮಲ್​ ಹಾಸನ್​ ಸಂಪೂರ್ಣ ಗುಣಮುಖ; ಮನೆಗೆ ಮರಳಿದ ಹಿರಿಯ ನಟ

ಕೊವಿಡ್​ ಅಂಟಿದ ನಂತರದಲ್ಲಿ ಕೆಲ ದಿನಗಳ ಕಾಲ ಸುಸ್ತು ಇರುತ್ತದೆ ಎಂದು ವೈದ್ಯರು ಹೇಳುತ್ತಾರೆ. ಕಮಲ್​ಗೆ ಈಗ 67ನೇ ವರ್ಷ. ಹೀಗಾಗಿ, ಕೊವಿಡ್​ ಕಾಣಸಿಕೊಂಡ ನಂತರ ಅವರು ವಿಶ್ರಾಂತಿ ಪಡೆಯಲೇಬೇಕು.

ಕೊವಿಡ್​ನಿಂದ ಕಮಲ್​ ಹಾಸನ್​ ಸಂಪೂರ್ಣ ಗುಣಮುಖ; ಮನೆಗೆ ಮರಳಿದ ಹಿರಿಯ ನಟ
ಕಮಲ್​ ಹಾಸನ್
TV9 Web
| Edited By: |

Updated on: Dec 04, 2021 | 4:54 PM

Share

ಕೊವಿಡ್​ ನಿಧಾನವಾಗಿ ಹೆಚ್ಚುತ್ತಿರುವ ಸಂದರ್ಭದಲ್ಲೇ ನಟ ಕಮಲ್​ ಹಾಸನ್​ಗೆ ಕೊವಿಡ್​ ಅಂಟಿದ್ದು ಸಾಕಷ್ಟು ಆತಂಕ ಮೂಡಿಸಿತ್ತು. ಕಮಲ್​ ಬೇಗ ಗುಣಮುಖರಾಗಲಿ ಎಂದು ಅವರ ಅಭಿಮಾನಿಗಳು ಕೋರಿಕೊಂಡಿದ್ದರು. ಈ ಪ್ರಾರ್ಥನೆ ಈಗ ಸಫಲವಾಗಿದೆ. ನಟ ಕಮಲ್​ ಹಾಸನ್​ ಅವರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಹೀಗಾಗಿ, ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿ ಮನೆಗೆ ತೆರಳಿದ್ದಾರೆ. ಈ ಸುದ್ದಿ ಕೇಳಿ ಅವರ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಕಮಲ್​ ಹಾಸನ್​ ಅಮೆರಿಕಕ್ಕೆ ಪ್ರವಾಸ ಹೋಗಿದ್ದರು. ಅಲ್ಲಿಂದ ಮರಳಿದ ಮೇಲೆ ಸಣ್ಣ ಪ್ರಮಾಣದ ಕೊವಿಡ್​ ಲಕ್ಷಣಗಳು ಅವರಿಗೆ ಕಾಣಿಸಿಕೊಂಡಿತ್ತು. ಹೀಗಾಗಿ, ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿಸಿದ್ದರು ​. ಈ ವೇಳೆ ಕೊರೊನಾ ಪಾಸಿಟಿವ್ ಆಗಿರುವುದು ಖಚಿತಗೊಂಡಿತ್ತು. ತಕ್ಷಣಕ್ಕೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರ ಆರೋಗ್ಯ ಈಗ ಸಂಪೂರ್ಣವಾಗಿ ಸುಧಾರಿಸಿದೆ.

ಕೊವಿಡ್​ ಅಂಟಿದ ನಂತರದಲ್ಲಿ ಕೆಲ ದಿನಗಳ ಕಾಲ ಸುಸ್ತು ಇರುತ್ತದೆ ಎಂದು ವೈದ್ಯರು ಹೇಳುತ್ತಾರೆ. ಕಮಲ್​ಗೆ ಈಗ 67ನೇ ವರ್ಷ. ಹೀಗಾಗಿ, ಕೊವಿಡ್​ ಕಾಣಸಿಕೊಂಡ ನಂತರ ಅವರು ವಿಶ್ರಾಂತಿ ಪಡೆಯಲೇಬೇಕು. ಹೀಗಾಗಿ, ಕಡ್ಡಾಯವಾಗಿ ಕೆಲ ದಿನಗಳ ಕಾಲ ಮನೆಯಲ್ಲೇ ಇರುವಂತೆ ವೈದ್ಯರು ಅವರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ, ಸಿನಿಮಾ ಕೆಲಸಗಳಲ್ಲಿ ಪಾಲ್ಗೊಳ್ಳದೆ ಅವರು ಮನೆಯಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿದ್ದ ಕಮಲ್​ ‘ಅಮೆರಿಕದಿಂದ ವಾಪಸ್ ಬಂದ ಬಳಿಕ ನನಗೆ ಸಣ್ಣದಾಗಿ ಕೆಮ್ಮು ಆರಂಭವಾಗಿತ್ತು. ಪರೀಕ್ಷೆ ಮಾಡಿಸಿದ ನಂತರ ಇದು ಕೋವಿಡ್-19 ಪಾಸಿಟಿವ್ ಎಂಬುದು ತಿಳಿದುಬಂತು. ನಾನೀಗ ಆಸ್ಪತ್ರೆಯಲ್ಲಿ ಐಸೋಲೇಟ್ ಆಗಿದ್ದೇನೆ. ಒಂದು ಅರಿವಾಗಿದ್ದೇನೆಂದರೆ, ಈ ಮಹಾಮಾರಿ ನಮ್ಮನ್ನು ಬಿಟ್ಟು ಇನ್ನೂ ಹೋಗಿಲ್ಲ. ನಾವೆಲ್ಲ ಸುರಕ್ಷಿತವಾಗಿ ಇರಬೇಕಿದೆ’ ಎಂದಿದ್ದರು ಕಮಲ್​.

ಇದನ್ನೂ ಓದಿ: ಲಸಿಕೆ ಪಡೆದ ನಂತರವೂ ಕಮಲ್​ ಹಾಸನ್​ಗೆ ಕೊವಿಡ್​ ಅಂಟಿದ್ದು ಹೇಗೆ? ವೈದ್ಯರು ಹೇಳಿದ್ದಿಷ್ಟು

Follow Us
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ