Sign In

By signing in or creating an account, you agree with Associated Broadcasting Company's Terms & Conditions and Privacy Policy.

Kamal Haasan: 100 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿನಿಮಾ ನಿರ್ಮಾಣ ಮಾಡ್ತಾರೆ ಕಮಲ್​ ಹಾಸನ್​; ಹೀರೋ ಯಾರು?

Simbu | Kollywood News: ಕಮಲ್​ ಹಾಸನ್​ ನಿರ್ಮಾಣದ ಈ ಸಿನಿಮಾ 2023ರಲ್ಲೇ ಸೆಟ್ಟೇರಲಿದೆ. ಐತಿಹಾಸಿಕ ಕಥಾಹಂದರದ ಈ ಚಿತ್ರದಲ್ಲಿ ಹೀರೋಗೆ ದ್ವಿಪಾತ್ರ ಇರಲಿದೆ ಎಂಬ ಮಾಹಿತಿ ಕೂಡ ಇದೆ.

Kamal Haasan: 100 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿನಿಮಾ ನಿರ್ಮಾಣ ಮಾಡ್ತಾರೆ ಕಮಲ್​ ಹಾಸನ್​; ಹೀರೋ ಯಾರು?
ಕಮಲ್ ಹಾಸನ್
Follow us
ಮದನ್​ ಕುಮಾರ್​
|

Updated on:Mar 05, 2023 | 3:31 PM

ದಕ್ಷಿಣ ಭಾರತದ ಸಿನಿಮಾಗಳಿಗೆ (South Indian Cinema) ದೊಡ್ಡ ಮಾರುಕಟ್ಟೆ ನಿರ್ಮಾಣ ಆಗಿದೆ. ಬಾಲಿವುಡ್​ ಚಿತ್ರಗಳ ಎದುರಿನಲ್ಲಿ ಸೌತ್​ ಸಿನಿಮಾಗಳು ಜಯಭೇರಿ ಬಾರಿಸುತ್ತಿವೆ. ಈ ಸಂದರ್ಭದಲ್ಲಿ ಇಲ್ಲಿನ ದೊಡ್ಡ ದೊಡ್ಡ ನಿರ್ಮಾಣ ಸಂಸ್ಥೆಗಳು ಬಹುಕೋಟಿ ರೂಪಾಯಿ ಬಂಡವಾಳ ಹೂಡಲು ಧೈರ್ಯ ತೋರಿಸುತ್ತಿವೆ. ನಟ ಕಮಲ್​ ಹಾಸನ್​ (Kamal Haasan) ಅವರು ಅಭಿನಯದ ಜೊತೆಗೆ ಸಿನಿಮಾ ನಿರ್ಮಾಣದಲ್ಲಿ ಸಾಕಷ್ಟು ಅನುಭವ ಹೊಂದಿದ್ದಾರೆ. ಅವರ ಒಡೆತನದ ‘ರಾಜ್​ ಕಮಲ್​ ಫಿಲ್ಮ್ಸ್​ ಇಂಟರ್​ನ್ಯಾಷನಲ್​’ ಮೂಲಕ ಸಾಕಷ್ಟು ಅತ್ಯುತ್ತಮ ಸಿನಿಮಾಗಳು ಮೂಡಿಬಂದಿವೆ. ಈಗ ಆ ಬ್ಯಾನರ್​ನಿಂದ ಹೊಸದೊಂದು ಚಿತ್ರ ನಿರ್ಮಾಣ ಆಗಲಿದ್ದು, ಅದಕ್ಕೆ 100 ಕೋಟಿ ರೂಪಾಯಿ ಬಂಡವಾಳ ಹೂಡಲು​ ಕಮಲ್​ ಹಾಸನ್​ ಸಜ್ಜಾಗಿದ್ದಾರೆ ಎಂದು ಸುದ್ದಿ ಆಗಿದೆ. ಆ ಚಿತ್ರಕ್ಕೆ ಸಿಂಬು (Simbu) ಹೀರೋ ಎಂದು ಹೇಳಲಾಗುತ್ತಿದೆ.

2022ರಲ್ಲಿ ಕಮಲ್​ ಹಾಸನ್​ ಅವರು ಭರ್ಜರಿ ಗೆಲುವು ಪಡೆದರು. ಅವರು ನಟಿಸಿದ ‘ವಿಕ್ರಮ್​’ ಸಿನಿಮಾ ಬ್ಲಾಕ್​ಬಸ್ಟರ್​ ಹಿಟ್​ ಆಯಿತು. ಲೋಕೇಶ್​ ಕನಗರಾಜ್​ ನಿರ್ದೇಶನದ ಆ ಚಿತ್ರಕ್ಕೆ ಬಂಡವಾಳ ಹೂಡಿದ್ದು ಕಮಲ್​ ಹಾಸನ್​. ವಿಶ್ವಾದ್ಯಂತ ಭರ್ಜರಿ ಪ್ರದರ್ಶನ ಕಂಡ ‘ವಿಕ್ರಮ್​’ ಸಿನಿಮಾ 400 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿತು. ಇದರಿಂದ ಕಮಲ್​ ಹಾಸನ್​ ಅವರಿಗೆ ಸಖತ್​ ಲಾಭ ಆಯಿತು.

ಇದನ್ನೂ ಓದಿ: 36 ವರ್ಷದ ಬಳಿಕ ಮರುಕಳಿಸಿತು ಇತಿಹಾಸ; ಕಮಲ್​ ಹಾಸನ್​-ಚಿರಂಜೀವಿ ಸ್ನೇಹದ ರೆಟ್ರೋ ಫೋಟೋ ವೈರಲ್

ಇದನ್ನೂ ಓದಿ
Image
Kamal Haasan: ವಿಶ್ವಾದ್ಯಂತ 200 ಕೋಟಿ ರೂ. ಬಾಚಿಕೊಂಡ ‘ವಿಕ್ರಮ್​’ ಸಿನಿಮಾ; ಗೆಲುವಿನ ಖುಷಿಯಲ್ಲಿ ಕಮಲ್​ ಹಾಸನ್​
Image
‘ವಿಕ್ರಮ್​’ ವಿಲನ್ ಸೂರ್ಯಗೆ ರೋಲೆಕ್ಸ್ ವಾಚ್ ಗಿಫ್ಟ್ ಕೊಟ್ಟ ಕಮಲ್ ಹಾಸನ್​; ಇದರ ಬೆಲೆ ಎಷ್ಟು ಲಕ್ಷ? ಗೆಸ್ ಮಾಡಿ
Image
‘ರಜಿನಿಕಾಂತ್​- ನಾನು ಒಳ್ಳೆಯ ಫ್ರೆಂಡ್ಸ್​, ಆದರೆ ಒಂದು ವಿಚಾರದ ಹೊರತಾಗಿ’ ಎಂದ ಕಮಲ್​ ಹಾಸನ್​; ಏನದು?
Image
ಕಮಲ್​ ಹಾಸನ್​ ಮಾಜಿ ಪತ್ನಿ ಸಾರಿಕಾಗೆ ಆರ್ಥಿಕ ಸಂಕಷ್ಟ; 3 ಸಾವಿರ ರೂಪಾಯಿಗಾಗಿ ಕಷ್ಟಪಟ್ಟ ಖ್ಯಾತ ನಟಿ

‘ವಿಕ್ರಮ್​’ ಚಿತ್ರದಿಂದ ಕಾಸು ಮಾಡಿಕೊಂಡಿರುವ ಕಮಲ್​ ಹಾಸನ್​ ಅವರು ನಿರ್ಮಾಪಕನಾಗಿ ದೊಡ್ಡ ಸಾಹಸ ಮಾಡಲು ರೆಡಿಯಾಗಿದ್ದಾರೆ ಎನ್ನಲಾಗುತ್ತಿದೆ. ಸಿಂಬು ನಟಿಸಲಿರುವ ಹೊಸ ಚಿತ್ರಕ್ಕೆ ಕಮಲ್​ ಹಾಸನ್​ ಅವರು 100 ಕೋಟಿ ರೂಪಾಯಿ ಬಂಡವಾಳ ಹೂಡಲಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಆದರೆ ಈ ಬಗ್ಗೆ ಯಾರೂ ಅಧಿಕೃತವಾಗಿ ಹೇಳಿಕೆ ನೀಡಿಲ್ಲ.

ಇದನ್ನೂ ಓದಿ: Kamal Haasan: ‘ನಿಮ್ಮ ಮುಂದಿನ ಚಿತ್ರದಿಂದ ಕಾಂತಾರ ಸಿನಿಮಾ ದಾಖಲೆ ಮುರಿಯಿರಿ’; ರಿಷಬ್​ ಶೆಟ್ಟಿಗೆ ಕಮಲ್​ ಹಾಸನ್​ ಸಲಹೆ

ಸದ್ಯ ಸಿಂಬು ಅವರು ಒಳ್ಳೆಯ ಫಾರ್ಮ್​ ಕಾಪಾಡಿಕೊಂಡಿದ್ದಾರೆ. ‘ಮಾನಾಡು’ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ಅವರ ಮಾರ್ಕೆಟ್​ ದೊಡ್ಡದಾಗಿದೆ. ಅಲ್ಲದೇ, ಕಾಲಿವುಡ್​ನಲ್ಲಿ ಹಲವು ವರ್ಷಗಳ ಅನುಭವ ಅವರಿಗೆ ಇದೆ. ತಮ್ಮದೇ ಅಭಿಮಾನಿ ಬಳಗವನ್ನು ಅವರು ಹೊಂದಿದ್ದಾರೆ. ಅವರ ಜೊತೆ ಕಮಲ್​ ಹಾಸನ್​ ಕೈ ಜೋಡಿಸುತ್ತಿರುವುದರಿಂದ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿದೆ.

ಇದನ್ನೂ ಓದಿ: Kamal Haasan: ‘ಕಾಂತಾರ’ ಚಿತ್ರ ನೋಡಿ ಕನ್ನಡ ಇಂಡಸ್ಟ್ರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ನಟ ಕಮಲ್​ ಹಾಸನ್    

ಸಿಂಬು ನಟಿಸಲಿರುವ ಈ ಸಿನಿಮಾ 2023ರಲ್ಲೇ ಸೆಟ್ಟೇರಲಿದೆ. ಐತಿಹಾಸಿಕ ಕಥಾಹಂದರದ ಈ ಚಿತ್ರದಲ್ಲಿ ಸಿಂಬು ಅವರು ದ್ವಿಪಾತ್ರ ಮಾಡಲಿದ್ದಾರೆ ಎಂಬ ಮಾಹಿತಿ ಕೂಡ ಇದೆ. 100 ಕೋಟಿ ರೂಪಾಯಿ ಬಜೆಟ್​ ಹಾಕುವುದು ನಿಜವೇ ಹೌದಾದರೆ ಸಿಂಬು ವೃತ್ತಿಜೀವನದ ಅತಿ ದೊಡ್ಡ ಸಿನಿಮಾ ಇದಾಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:31 pm, Sun, 5 March 23

ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು