ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡು ಲೋಕಸಭೆ ಚುನಾವಣೆಯಲ್ಲಿ ಕೊಯಮತ್ತೂರಿನಿಂದ ಸ್ಪರ್ಧಿಸಲಿದ್ದಾರೆ ಕಮಲ್ ಹಾಸನ್?

ಕಮಲ್ ಹಾಸನ್ ಸಾರ್ವತ್ರಿಕ ಚುನಾವಣೆಯಲ್ಲಿ ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಡಿಎಂಕೆ ಪಕ್ಷ ಕೊಯಮತ್ತೂರು ಕ್ಷೇತ್ರದ ಟಿಕೆಟ್​ನ ಕಮಲ್ ಹಾಸನ್​ಗೆ ನೀಡಲು ಆಸಕ್ತಿ ತೋರಿಸಿದೆ.

ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡು ಲೋಕಸಭೆ ಚುನಾವಣೆಯಲ್ಲಿ ಕೊಯಮತ್ತೂರಿನಿಂದ ಸ್ಪರ್ಧಿಸಲಿದ್ದಾರೆ ಕಮಲ್ ಹಾಸನ್?
ಕಮಲ್ ಹಾಸನ್
Follow us
ರಾಜೇಶ್ ದುಗ್ಗುಮನೆ
|

Updated on: Jul 25, 2023 | 1:04 PM

ನಟ ಹಾಗೂ ಎಂಎನ್‌ಎಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ (Kamal Haasan) ಅವರಿಗೆ ರಾಜಕೀಯದಲ್ಲಿ ಅಷ್ಟಾಗಿ ಯಶಸ್ಸು ಸಿಕ್ಕಿಲ್ಲ. ಈ ಕಾರಣಕ್ಕೆ ಅವರು ನಟನೆಗೆ ಮರಳಿದ್ದಾರೆ. ಈಗ ಅವರ ದೃಷ್ಟಿ 2024ರ ಲೋಕಸಭೆ ಚುನಾವಣೆಯ ಮೇಲಿದೆ. ಅವರು ಸಾರ್ವತ್ರಿಕ ಚುನಾವಣೆಯಲ್ಲಿ ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಡಿಎಂಕೆ ಪಕ್ಷ ಕೊಯಮತ್ತೂರು ಕ್ಷೇತ್ರದ ಟಿಕೆಟ್​ನ ಕಮಲ್ ಹಾಸನ್​ಗೆ ನೀಡಲು ಆಸಕ್ತಿ ತೋರಿಸಿದೆ.

2021ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ವನತಿ ಶ್ರೀನಿವಾಸನ್ ವಿರುದ್ಧ ಕಮಲ್ ಹಾಸನ್ ಅವರು 1,728 ಮತಗಳ ಅಲ್ಪ ಅಂತರದಿಂದ ಸೋತರು. ಆದರೆ, ಇಬ್ಬರ ಮಧ್ಯೆ ಸ್ಪರ್ಧೆ ಬಲವಾಗಿತ್ತು. ಈ ಕಾರಣದಿಂದ ಅವರೊಂದಿಗೆ ಮೈತ್ರಿ ಮಾಡಿಕೊಂಡು ಕೊಯಮತ್ತೂರು ಸೀಟ್​ನ ನೀಡಲು ಡಿಎಂಕೆ ಆಸಕ್ತಿ ವಹಿಸಿದೆ ಎಂದು ಎಂಎನ್‌ಎಂ ಪಕ್ಷದ ಉನ್ನತ ಮೂಲಗಳು ಐಎಎನ್‌ಎಸ್‌ ಸುದ್ದಿ ಸಂಸ್ಥೆಗೆ ತಿಳಿಸಿವೆ. ಕಮಲ್ ಹಾಸನ್ ಭಾನುವಾರ ಕೊಯಮತ್ತೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಎಂಎನ್‌ಎಂನ ರಾಜ್ಯ ಮಟ್ಟದ ಪ್ರಚಾರ ಅಭಿಯಾನ ‘ಮಕ್ಕಲೋಡು ಮೈಯಂ’ ಉದ್ಘಾಟಿಸಿದರು.

ಎಂಎನ್​ಎಮ್​ ಪಕ್ಷ ತಮಿಳುನಾಡಿನ ಎಲ್ಲಾ 234 ವಿಧಾನಸಭಾ ಕ್ಷೇತ್ರದ ಜನರನ್ನು ಭೇಟಿ ಮಾಡಲು ಯೋಜಿಸುತ್ತಿದೆ. ವಾರ್ಡ್ ಮತ್ತು ಪಂಚಾಯತ್ ಮಟ್ಟದಲ್ಲಿ ಜನರನ್ನು ಭೇಟಿ ಮಾಡಿ ಅವರು ಎದುರಿಸುತ್ತಿರುವ ತೊಂದರೆಗಳ ಬಗ್ಗೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಚರ್ಚಿಸಲಿದ್ದಾರೆ. ಪಕ್ಷದ ಹಿರಿಯ ನಾಯಕರ ಪ್ರಕಾರ, ಜನರಿಂದ ಪ್ರತಿಕ್ರಿಯೆ ಪಡೆದು ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದೆ.

2024ರ ಲೋಕಸಭೆ ಚುನಾವಣೆಯಲ್ಲಿ ಕೊಯಮತ್ತೂರು ಕ್ಷೇತ್ರದಿಂದ ಸ್ಪರ್ಧಿಸುವಂತೆ ಪಕ್ಷದ ಕೊಯಮತ್ತೂರು ಜಿಲ್ಲಾ ಪದಾಧಿಕಾರಿಗಳು ಕಮಲ್ ಹಾಸನ್​ಗೆ ಈಗಾಗಲೇ ಮನವಿ ಮಾಡಿದ್ದಾರೆ ಎಂದು ಎಂಎನ್‌ಎಂ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ‘ನೀವು ನಮ್ಮೆಲ್ಲರಿಗಿಂತ ದೊಡ್ಡವರು’; ಕಮಲ್ ಹಾಸನ್ ಅವರ ನಟನೆ ಹಾಡಿ ಹೊಗಳಿದ ಅಮಿತಾಭ್ ಬಚ್ಚನ್

ತಮಿಳುನಾಡಿನಲ್ಲಿ ವಿವಾದ ಒಂದಕ್ಕೆ ಸಿಲುಕಿ ಶರ್ಮಿಳಾ ಹೆಸರಿನ ಬಸ್ ಚಾಲಕಿ ವಜಾ ಗೊಂಡಿದ್ದರು. ಇವರಿಗೆ ಕಮಲ್ ಹಾಸನ್ ಕಾರನ್ನು ಉಡುಗೊರೆಯಾಗಿ ನೀಡಿದ್ದರು. ಕೊಯಮತ್ತೂರು ಮೂಲದ ಶರ್ಮಿಳಾ ಅವರಿಗೆ ಕಾರನ್ನು ಉಡುಗೊರೆಯಾಗಿ ನೀಡಿದ ಕಮಲ್ ಅವರ ಕ್ರಮವನ್ನು ಜನಪ್ರಿಯತೆ ಗಳಿಸಲು ಮಾಡಿದ ತಂತ್ರ ಎಂದು ಬಣ್ಣಿಸಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್