ನಟ ಕಮಲ್ ಹಾಸನ್ ಹೊಸ ಸಿನಿಮಾದ ಲುಕ್ ವೈರಲ್; ಕೌತುಕ ಮೂಡಿಸಿದ ಕಾಂಬಿನೇಷನ್

ಕಮಲ್ ಹಾಸನ್ ಅವರು ನಿರ್ದೇಶಕ ಎಸ್.ಯು. ಅರುಣ್ ಕುಮಾರ್ ಜೊತೆ ಮೊದಲ ಬಾರಿಗೆ ಕೈ ಜೋಡಿಸಿದ್ದಾರೆ. ಈ ಸಿನಿಮಾದ ಲುಕ್ ಟೆಸ್ಟ್ ಫೋಟೋ ಬಿಡುಗಡೆಯಾಗಿದೆ. ಸದ್ಯಕ್ಕೆ ಚಿತ್ರದ ಕಥಾಹಂದರ ರಹಸ್ಯವಾಗಿದೆ. ಇದು ಕಮಲ್ ಹಾಸನ್ ಅವರ ವೃತ್ತಿ ಜೀವನದಲ್ಲಿ ಡಿಫರೆಂಟ್ ಸಿನಿಮಾ ಆಗಲಿದೆ ಎಂಬ ಭರವಸೆ ಮೂಡಿದೆ.

ನಟ ಕಮಲ್ ಹಾಸನ್ ಹೊಸ ಸಿನಿಮಾದ ಲುಕ್ ವೈರಲ್; ಕೌತುಕ ಮೂಡಿಸಿದ ಕಾಂಬಿನೇಷನ್
Kamal Haasan
Image Credit source: Raaj Kamal Films International

Updated on: Sep 03, 2026 | 9:21 PM

ಖ್ಯಾತ ನಟ ಕಮಲ್ ಹಾಸನ್ ಅವರು ಬ್ಯುಸಿ ಆಗಿದ್ದಾರೆ. ಒಂದಕ್ಕಿಂತ ಒಂದು ಡಿಫರೆಂಟ್ ಸಿನಿಮಾ ಮತ್ತು ಪಾತ್ರಗಳನ್ನು ಅವರು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಅವರ ಹೊಸ ಸಿನಿಮಾದ ಬಗ್ಗೆ ಅಪ್​ಡೇಟ್ ತಿಳಿಯಲು ಕಾದಿದ್ದ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಹೊಸ ಸಿನಿಮಾದ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿದೆ. ಲುಕ್ ಟೆಸ್ಟ್ ಸಲುವಾಗಿ ಮಾಡಿರುವ ಫೋಟೋವನ್ನು ಚಿತ್ರತಂಡ ಹಂಚಿಕೊಂಡಿದೆ. ಈ ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿ ಸದ್ಯದಲ್ಲೇ ಸಿಗಲಿದೆ.

ಹೊಸ ಚಿತ್ರಕ್ಕಾಗಿ ಕಮಲ್ ಹಾಸನ್ ಅವರ ಲುಕ್ ಟೆಸ್ಟ್ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ಭಾರಿ ಸಂಚಲನ ಮೂಡಿಸಿತ್ತು. ಅಭಿಮಾನಿಗಳಲ್ಲಿ ತೀವ್ರ ಕುತೂಹಲ ಹುಟ್ಟುಹಾಕಲು ಅದು ಕಾರಣ ಆಗಿತ್ತು. ಕಮಲ್ ಹಾಸನ್ ಮುಖ್ಯ ಭೂಮಿಕೆಯಲ್ಲಿರುವ ಈ ಸಿನಿಮಾದ ಲುಕ್ ಟೆಸ್ಟ್ ಸೆ.2ರಂದು ನಡೆದಿದ್ದು, ಅದಕ್ಕೆ ಸಂಬಂಧಿಸಿದ ಝಲಕ್ ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ಇದು ಕಮಲ್ ಹಾಸನ್ ಅವರ ಅಭಿಮಾನಿಗಳಲ್ಲಿ ಹಾಗೂ ಸಿನಿಪ್ರಿಯರಲ್ಲಿ ಅಪಾರ ನಿರೀಕ್ಷೆ ಮೂಡಿಸಿದೆ. ಕಮಲ್ ಹಾಸನ್ ಅವರ ಈ ನೂತನ ಲುಕ್ ಎಲ್ಲೆಡೆ ಬಿಸಿಬಿಸಿ ಚರ್ಚೆಗೆ ಗ್ರಾಸವಾಗಿದ್ದು, ಚಿತ್ರದ ಕುರಿತು ಹೆಚ್ಚಿನ ವಿವರಗಳನ್ನು ತಿಳಿಯಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಈ ಸಿನಿಮಾಗೆ ಖ್ಯಾತ ನಿರ್ದೇಶಕ ಎಸ್.ಯು. ಅರುಣ್ ಕುಮಾರ್ ಅವರು ಆ್ಯಕ್ಷನ್-ಕಟ್ ಹೇಳಿದ್ದಾರೆ.

ಎಸ್.ಯು. ಅರುಣ್ ಕುಮಾರ್ ಮತ್ತು ಕಮಲ್ ಹಾಸನ್ ಕಾಂಬಿನೇಷನ್​ನ ಮೊದಲ ಸಿನಿಮಾ ಎಂಬ ಕಾರಣಕ್ಕೆ ನಿರೀಕ್ಷೆ ಜಾಸ್ತಿ ಆಗಿದೆ. ಸದಾ ಹೊಸತನವನ್ನು ಮೈಗೂಡಿಸಿಕೊಂಡು, ವಿಭಿನ್ನ ಪಾತ್ರಗಳ ಮೂಲಕ ಹೊಸ ಪ್ರಯೋಗಗಳನ್ನು ಮಾಡುವ ಕಮಲ್ ಹಾಸನ್ ಅವರ ಈ ಹೊಸ ಅವತಾರ ಮತ್ತೊಮ್ಮೆ ಈಗ ಅಭಿಮಾನಿಗಳ ಗಮನ ಸೆಳೆಯುತ್ತಿದೆ.

ಇದನ್ನೂ ಓದಿ: ರಜನೀಕಾಂತ್-ಕಮಲ್ ಹಾಸನ್ ಸಿನಿಮಾಕ್ಕೆ ಪದೇ-ಪದೇ ನಿರ್ದೇಶಕರು ಬದಲಾಗಿದ್ದೇಕೆ?

ಸ್ವತಃ ಕಮಲ್ ಹಾಸನ್ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ‘ರಾಜ್ ಕಮಲ್ ಫಿಲ್ಮ್ಸ್ ಇಂಟರ್‌ನ್ಯಾಷನಲ್’ ಮತ್ತು ‘ಟರ್ಮರಿಕ್ ಮೀಡಿಯಾ’ ಸಂಸ್ಥೆಗಳು ಜಂಟಿಯಾಗಿ ಸಿನಿಮಾವನ್ನು ನಿರ್ಮಿಸುತ್ತಿವೆ. ಈ ಸಿನಿಮಾದ ಶೂಟಿಂಗ್ ಆರಂಭಕ್ಕೂ ಮುನ್ನವೇ ಭಾರಿ ಸದ್ದು ಮಾಡುತ್ತಿದೆ. ಲುಕ್ ಟೆಸ್ಟ್ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಸದ್ಯದಲ್ಲೇ ಚಿತ್ರೀಕರಣ ಆರಂಭವಾಗುವ ಸಾಧ್ಯತೆಯಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us