AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶ ಮೊದಲು, ಸಿನಿಮಾ ಕಾರ್ಯಕ್ರಮ ರದ್ದು ಮಾಡಿದ ಕಮಲ್ ಹಾಸನ್

Kamal Haasan: ದೇಶದ ಗಡಿಯಲ್ಲಿ ಯುದ್ಧದ ಪರಿಸ್ಥಿತಿ ಇದೆ. ಪಾಕ್ ಸೇನೆಯು ಭಾರತದ ಮೇಲೆ ದಾಳಿ ಮುಂದುವರೆಸಿದ್ದು, ಸೇನೆಯು ವೈರಿ ರಾಷ್ಟ್ರದ ದಾಳಿಯನ್ನು ಎದುರಿಸುತ್ತಿದೆ. ಪರಿಸ್ಥಿತಿ ಹೀಗಿರುವಾಗ ನಾವು ಸಂಭ್ರಮಾಚರಣೆ ಬದಲಿಗೆ ಸೈನಿಕರಿಗೆ ಬೆಂಬಲವಾಗಿ ನಿಲ್ಲಬೇಕೆಂದು ಕಮಲ್ ಹಾಸನ್ ಅವರು ತಮ್ಮ ಸಿನಿಮಾ ಕಾರ್ಯಕ್ರಮವನ್ನು ರದ್ದು ಮಾಡಿದ್ದಾರೆ.

ದೇಶ ಮೊದಲು, ಸಿನಿಮಾ ಕಾರ್ಯಕ್ರಮ ರದ್ದು ಮಾಡಿದ ಕಮಲ್ ಹಾಸನ್
Kamal Haasan
ಮಂಜುನಾಥ ಸಿ.
|

Updated on: May 09, 2025 | 1:24 PM

Share

ಭಾರತೀಯ ಸೈನಿಕರು ಪಾಕಿಸ್ತಾನದ ಮೇಲೆ ಸತತ ದಾಳಿ ಮಾಡುತ್ತಿದ್ದಾರೆ. ಭಯೋತ್ಪಾದನಾ ಶಿಬಿರಗಳು ಮಾತ್ರವಲ್ಲದೆ ಪಾಕ್​ನ ಸೇನಾ ನೆಲೆಗಳನ್ನು ಗುರಿ ಮಾಡಿಕೊಂಡು ಭಾರತೀಯ ಸೈನಿಕರು ದಾಳಿ ಮುಂದುವರೆಸಿದ್ದಾರೆ. ಭಾರತದೆಲ್ಲೆಡೆ ಸೈನಿಕರ ಪರವಾಗಿ ಪ್ರಾರ್ಥನೆಗಳು ಕೇಳಿ ಬರುತ್ತಿವೆ. ಯುದ್ಧದ ಪರಿಸ್ಥಿತಿ ನಿರ್ಮಾಣ ಆಗುತ್ತಿದ್ದಂತೆ ಬಿಸಿಸಿಐ, ಐಪಿಎಲ್ ಅನ್ನು ರದ್ದು ಮಾಡಿದೆ. ಕೆಲ ಸಿನಿಮಾಗಳು ಸಹ ಬಿಡುಗಡೆಯನ್ನು ರದ್ದು ಮಾಡಿವೆ. ಇದೀಗ ತಮಿಳಿನ ಸ್ಟಾರ್ ನಟ ಕಮಲ್ ಹಾಸನ್ ಸಹ ತಮ್ಮ ಸಿನಿಮಾದ ಕಾರ್ಯಕ್ರಮವನ್ನು ರದ್ದು ಮಾಡಿದ್ದಾರೆ.

ಕಮಲ್ ಹಾಸನ್ ಮುಖ್ಯ ಪಾತ್ರದಲ್ಲಿ ನಟಿಸಿರುವ ‘ಥಗ್ ಲೈಫ್’ ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮವನ್ನು ಕಮಲ್ ಹಾಸನ್ ಮುಂದೂಡಿದ್ದಾರೆ. ‘ಥಗ್ ಲೈಫ್’ ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮ ಮೇ 16ರಂದು ನಡೆಯಬೇಕಿತ್ತು. ಆದರೆ ಭಾರತದ ಗಡಿಯಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದ್ದು, ಸೇನೆಯು ವೈರಿ ದೇಶದೊಟ್ಟಿಗೆ ಯುದ್ಧದಲ್ಲಿ ನಿರತವಾಗಿರುವ ಕಾರಣ ಇಂಥಹಾ ಆತಂಕದ ಪರಿಸ್ಥಿತಿಯಲ್ಲಿ ಸಂಭ್ರಮಾಚರಣೆ ಬೇಡವೆಂದು ನಿಶ್ಚಯಿಸಿ ಆಡಿಯೋ ಲಾಂಚ್ ಅನ್ನು ರದ್ದು ಮಾಡಲಾಗಿದೆ.

ಇದನ್ನೂ ಓದಿ:ಮಣಿರತ್ನಂ ಜೊತೆ ಬಾಳೆ ಎಲೆ ಊಟ ಸವಿದ ಕಮಲ್ ಹಾಸನ್

ಈ ಬಗ್ಗೆ ಹೇಳಿಕೆ ಹೊರಡಿಸಿರುವ ಕಮಲ್ ಹಾಸನ್, ‘ದೇಶದ ಗಡಿ ಭಾಗದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಮತ್ತು ದೇಶದಾದ್ಯಂತ ಇರುವ ಹೈ ಅಲರ್ಟ್​ ಅನ್ನು ಗಮನಿಸಿ ಮೇ 16 ರಂದು ನಿಗದಿಯಾಗಿದ್ದ ನಮ್ಮ ‘ಥಗ್ ಲೈಫ್’ ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮವನ್ನು ಮುಂದೂಡುತ್ತಿದ್ದೇವೆ. ನಮ್ಮ ಸೈನಿಕರು ದೇಶದ ಗಡಿಯಲ್ಲಿ ಶೌರ್ಯದಿಂದ ನಿಂತು ತಾಯ್ನಾಡಿಗಾಗಿ ಹೋರಾಡುತ್ತಿರುವ ಈ ಸನ್ನಿವೇಶದಲ್ಲಿ ಒಗ್ಗಟ್ಟು ಮತ್ತು ಬೆಂಬಲದ ಅವಶ್ಯಕತೆ ಇದೆ. ಅಲ್ಲದೆ ಇದು ವೈಯಕ್ತಿಕ ಸಂಭ್ರಮಾಚರಣೆ ಮಾಡುವ ಸಮಯ ಅಲ್ಲ ಹಾಗಾಗಿ ಕಾರ್ಯಕ್ರಮ ಮುಂದೂಡಲಾಗಿದ್ದು, ಸೂಕ್ತ ಸಮಯ ನೋಡಿಕೊಂಡು ಮುಂದಿನ ದಿನಾಂಕ ಪ್ರಕಟಿಸಲಾಗುವುದು ಎಂದಿದ್ದಾರೆ ಕಮಲ್ ಹಾಸನ್.

‘ಈ ಸಮಯದಲ್ಲಿ ನಮ್ಮಗಳ ರಕ್ಷಣೆಗಾಗಿ ಶೌರ್ಯದಿಂದ ಹೋರಾಡುತ್ತಿರುವ ನಮ್ಮ ಸೈನಿಕರು ಹಾಗೂ ಅವರ ಕುಟುಂಬಕ್ಕೆ ನಮ್ಮ ಪ್ರಾರ್ಥನೆಗಳು. ಇಂಥಹಾ ಸಮಯದಲ್ಲಿ ದೇಶವಾಸಿಗಳಾಗಿ ನಾವು ನಮ್ಮ ಸೈನ್ಯದ ಪರ ನಿಲ್ಲಬೇಕು ಹಾಗೂ ಒಗ್ಗಟ್ಟು ಪ್ರದರ್ಶಿಸಬೇಕು’ ಎಂದಿದ್ದಾರೆ. ‘ಥಗ್ ಲೈಫ್’ ಸಿನಿಮಾದಲ್ಲಿ ಕಮಲ್ ಹಾಸನ್, ತ್ರಿಷಾ ಕೃಷ್ಣನ್, ಸಿಂಭು ಅವರುಗಳು ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಮಣಿರತ್ನಂ ಈ ಸಿನಿಮಾ ನಿರ್ದೇಶಿಸಿದ್ದಾರೆ. ಸಿನಿಮಾಕ್ಕೆ ಸಂಗೀತ ನೀಡಿರುವುದು ಎಆರ್ ರೆಹಮಾನ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?