ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ; ಕಾರ್ಯಕ್ರಮಕ್ಕೆ ಸಾಕ್ಷಿಯಾದ ಸೆಲೆಬ್ರಿಟಿಗಳು

ಕ್ಯಾಂಪೇನ್​ ವೇಳೆ ಕಾಂಗ್ರೆಸ್​ ಪಕ್ಷಕ್ಕೆ ಅನೇಕ ಸೆಲೆಬ್ರಿಟಿಗಳು ಬೆಂಬಲ ನೀಡಿದ್ದರು. ಅವರೆಲ್ಲರಿಗೂ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಅಹ್ವಾನ ನೀಡಲಾಗಿತ್ತು.

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ; ಕಾರ್ಯಕ್ರಮಕ್ಕೆ ಸಾಕ್ಷಿಯಾದ ಸೆಲೆಬ್ರಿಟಿಗಳು
ದುನಿಯಾ ವಿಜಯ್​, ಶಿವರಾಜ್​ಕುಮಾರ್​, ಗೀತಾ, ಉಮಾಶ್ರೀ

Updated on: May 20, 2023 | 3:40 PM

ಕರ್ನಾಟಕದಲ್ಲಿ ಸ್ಪಷ್ಟ ಬಹುಮತ ಪಡೆದಿರುವ ಕಾಂಗ್ರೆ​ಸ್​ ಪಕ್ಷವು ಸರ್ಕಾರ ರಚಿಸಿದೆ. ಮುಖ್ಯಮಂತ್ರಿಯಾಗಿ (Karnataka CM) ಸಿದ್ದರಾಮಯ್ಯ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್​ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇಂದು (ಮೇ 20) ಈ ಕಾರ್ಯಕ್ರಮ ನಡೆದಿದೆ. ರಾಹುಲ್​ ಗಾಂಧಿ, ಪ್ರಿಯಾಂಕಾ ಗಾಂಧಿ, ಎಂ.ಕೆ. ಸ್ಟಾಲಿನ್​ ಸೇರಿದಂತೆ ಹಲವರು ಭಾಗಿ ಆಗಿದ್ದಾರೆ. ಅಪಾರ ಸಂಖ್ಯೆಯ ಕಾರ್ಯಕರ್ತರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಅಲ್ಲದೇ, ಸೆಲೆಬ್ರಿಟಿಗಳು ಹಾಜರಿ ಹಾಕಿದ್ದಾರೆ. ಕಮಲ್​ ಹಾಸನ್​ (Kamal Haasan), ಶಿವರಾಜ್​ಕುಮಾರ್​, ರಮ್ಯಾ (Ramya) ಮುಂತಾದ ತಾರೆಯರ ಸಮ್ಮುಖದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಿತು.

ಚುನಾವಣಾ ಕ್ಯಾಂಪೇನ್​ ವೇಳೆ ಕಾಂಗ್ರೆಸ್​ ಪಕ್ಷಕ್ಕೆ ಅನೇಕ ಸೆಲೆಬ್ರಿಟಿಗಳು ಬೆಂಬಲ ನೀಡಿದ್ದರು. ಅವರೆಲ್ಲರಿಗೂ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಅಹ್ವಾನ ನೀಡಲಾಗಿತ್ತು. ಗೀತಾ ಶಿವರಾಜ್​ಕುಮಾರ್​, ದುನಿಯಾ ವಿಜಯ್​, ಸಾಧು ಕೋಕಿಲ, ಉಮಾಶ್ರೀ, ಎಸ್. ವಿ. ರಾಜೇಂದ್ರ ಸಿಂಗ್ ಬಾಬು ಮುಂತಾದವರು ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ.

ಪ್ರಮಾಣ ವಚನ ಸ್ವೀಕರಿಸಿ ಮಾತನಾಡಿದ ಸಿದ್ದರಾಮಯ್ಯ ಅವರು ‘ಕರ್ನಾಟಕದ ಜನರ ಆಶೀರ್ವಾದಿಂದ ನಮ್ಮ ಸರ್ಕಾರ ಬಂದಿದೆ. ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ಸೇರಿದಂತೆ ಅನೇಕರು ಪ್ರಚಾರ ಮಾಡಿದರು. ಕಾಂಗ್ರೆಸ್​ ಪಕ್ಷದ ಪರ ಪ್ರಚಾರ ಮಾಡಿದ ಎಲ್ಲರಿಗೂ ಧನ್ಯವಾದಗಳು ಹೇಳುತ್ತೇನೆ. ಜೊತೆಗೆ ನಾವು ಕೊಟ್ಟ ಐದು ಗ್ಯಾರಂಟಿಗಳಿಗೆ ಅನುಮೋದನೆ ನೀಡುತ್ತೇನೆ’ ಎಂದರು.

ಡಿಕೆ ಶಿವಕುಮಾರ್​​ಗೆ ಡಿಸಿಎಂ ಪಟ್ಟ; ಬೇಸರವಿದೆ, ಸಾಗಬೇಕಾದ ಹಾದಿ ಬಹಳಷ್ಟಿದೆ ಎಂದ ಡಿಕೆ ಸುರೇಶ್

ಉಪ ಮುಖ್ಯಮಮತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೂ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಜತೆಗೆ ಎಂಟು ಮಂದಿ ಶಾಸಕರು ಸಚಿವರಾಗಿಯೂ ಪದಗ್ರಹಣ ಮಾಡಿದರು. ಇದರೊಂದಿಗೆ, ರಾಜ್ಯದಲ್ಲಿ ಹೊಸ ಸರ್ಕಾರ ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಂತಾಗಿದೆ.

ದೇವರ ಹೆಸರಿನಲ್ಲಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಿದರೆ, ಶ್ರೀ ಗಂಗಾಧರ ಅಜ್ಜನ ಹೆಸರಿನಲ್ಲಿ ಡಿಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದರು. ಡಾ. ಜಿ ಪರಮೇಶ್ವರ, ಕೆಹೆಚ್ ಮುನಿಯಪ್ಪ, ಕೆಜೆ ಜಾರ್ಜ್, ಎಂಬಿ ಪಾಟೀಲ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾ ರೆಡ್ಡಿ ಹಾಗೂ ಬಿಝಡ್ ಜಮೀರ್ ಅಹ್ಮದ್ ಅವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.