AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian 2: ಭರ್ಜರಿಯಾಗಿದೆ ‘ಇಂಡಿಯನ್ 2’ ಇಂಟ್ರೋ ವಿಡಿಯೋ; ಐದು ಭಾಷೆಗಳಲ್ಲಿ ಕಮಲ್​ ಹಾಸನ್​ ಅಬ್ಬರ

Indian 2 Intro Video: ನಟ ಕಮಲ್​ ಹಾಸನ್​ ಅವರಿಗೆ ದೇಶಾದ್ಯಂತ ಅಭಿಮಾನಿಗಳು ಇದ್ದಾರೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ‘ಇಂಡಿಯನ್​ 2’ ಸಿನಿಮಾವನ್ನು ಪ್ರಚಾರ ಮಾಡಲಾಗುತ್ತಿದೆ. ಐದು ಭಾಷೆಗಳಲ್ಲಿ ಈ ಚಿತ್ರದ ಇಂಟ್ರೋ ವಿಡಿಯೋ ಬಿಡುಗಡೆ ಆಗಿದೆ. ಕನ್ನಡದಲ್ಲಿ ನಟ ಕಿಚ್ಚ ಸುದೀಪ್​ ಅವರು ಇಂಟ್ರೋ ವಿಡಿಯೋ ಅನಾವರಣ ಮಾಡಿ ಶುಭ ಕೋರಿದ್ದಾರೆ.

Indian 2: ಭರ್ಜರಿಯಾಗಿದೆ ‘ಇಂಡಿಯನ್ 2’ ಇಂಟ್ರೋ ವಿಡಿಯೋ; ಐದು ಭಾಷೆಗಳಲ್ಲಿ ಕಮಲ್​ ಹಾಸನ್​ ಅಬ್ಬರ
ಕಮಲ್​ ಹಾಸನ್​
ಮದನ್​ ಕುಮಾರ್​
|

Updated on: Nov 03, 2023 | 7:17 PM

Share

ಕಾಲಿವುಡ್​ನ ಖ್ಯಾತ ಡೈರೆಕ್ಟರ್​ ಎಸ್. ಶಂಕರ್ ಅವರ ನಿರ್ದೇಶನದಲ್ಲಿ ‘ಇಂಡಿಯನ್​ 2’ ಸಿನಿಮಾ (Indian 2) ಮೂಡಿಬರುತ್ತಿದೆ. ಈ ಸಿನಿಮಾದಲ್ಲಿ ಕಮಲ್​ ಹಾಸನ್​ ಅವರು ಮುಖ್ಯ ಭೂಮಿಕೆ ನಿಭಾಯಿಸುತ್ತಿದ್ದಾರೆ. ಇದು ಬಹುನಿರೀಕ್ಷಿತ ಸಿನಿಮಾ. ಶಂಕರ್​ ಮತ್ತು ಕಮಲ್​ ಹಾಸನ್​ (Kamal Haasan) ಕಾಂಬಿನೇಷನ್​ ಎಂಬ ಕಾರಣಕ್ಕೆ ಸಖತ್​ ಹೈಪ್​ ಸೃಷ್ಟಿ ಆಗಿದೆ. ಈ ಮೊದಲು ಬಿಡುಗಡೆ ಆಗಿದ್ದ ಫಸ್ಟ್​ ಲುಕ್​ ಪೋಸ್ಟರ್​ ನೋಡಿದ ಮೇಲೆ ಅಭಿಮಾನಿಗಳಲ್ಲಿ ‘ಇಂಡಿಯನ್ 2’ ಬಗ್ಗೆ ಸಾಕಷ್ಟು ಕುತೂಹಲ ಮೂಡಿತ್ತು. ಈಗ ಈ ಸಿನಿಮಾದ ಫಸ್ಟ್ ಗ್ಲಿಂಪ್ಸ್ ಬಿಡುಗಡೆ ಆಗಿದೆ. ಸಮಾಜದಲ್ಲಿ ಜನರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಕಮಲ್ ಹಾಸನ್ ಹೇಗೆಲ್ಲ ಫೈಟ್​ ಮಾಡುತ್ತಾರೆ ಎಂಬುದೇ ಈ ಸಿನಿಮಾದ ಮುಖ್ಯ ಥೀಮ್​ ಎಂಬುದು ಈ ಗ್ಲಿಂಪ್ಸ್​ ಮೂಲಕ ಗೊತ್ತಾಗಿದೆ. ಕನ್ನಡದಲ್ಲಿ ಇದನ್ನು ಕಿಚ್ಚ ಸುದೀಪ್​ (Kichcha Sudeep) ಅವರ ಬಿಡುಗಡೆ ಮಾಡಿದ್ದಾರೆ.

1996ರಲ್ಲಿ ‘ಇಂಡಿಯನ್​’ ಸಿನಿಮಾ ಬಿಡುಗಡೆಯಾಗಿ ಸೂಪರ್​ ಹಿಟ್​ ಆಗಿತ್ತು. ಸೇನಾಪತಿ ಎಂಬ ಪಾತ್ರದಲ್ಲಿ ಕಮಲ್​ ಹಾಸನ್​ ಅವರು ಮಿಂಚಿದ್ದರು. ಅದರ ಮುಂದುವರಿದ ಭಾಗವಾಗಿ ‘ಇಂಡಿಯನ್ 2’ ಸಿನಿಮಾ ಮೂಡಿಬರುತ್ತಿದೆ. ಇದು ಪ್ಯಾನ್​ ಇಂಡಿಯಾ ಸಿನಿಮಾ. ಹಾಗಾಗಿ ಈ ಚಿತ್ರದ ಇಂಟ್ರೋ ವಿಡಿಯೋ ಐದು ಭಾಷೆಯಲ್ಲಿ ಬಿಡುಗಡೆ ಮಾಡಲಾಗಿದೆ. ಕನ್ನಡದ ವರ್ಷನ್​ ಅನ್ನು ಕಿಚ್ಚ ಸುದೀಪ್ ಅವರು ರಿಲೀಸ್​ ಮಾಡಿ ಶುಭ ಹಾರೈಸಿದ್ದಾರೆ.

ಕಮಲ್​ ಹಾಸನ್​ ಅವರಿಗೆ ದೇಶಾದ್ಯಂತ ಅಭಿಮಾನಿಗಳು ಇದ್ದಾರೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾವನ್ನು ಪ್ರಚಾರ ಮಾಡಲಾಗುತ್ತಿದೆ. ತಮಿಳಿನಲ್ಲಿ ಸೂಪರ್​ ಸ್ಟಾರ್​ ರಜನಿಕಾಂತ್ ಅವರು ‘ಇಂಡಿಯನ್​ 2’ ಸಿನಿಮಾದ ಇಂಟ್ರೋ ವಿಡಿಯೋ ಬಿಡುಗಡೆ ಮಾಡಿದಾರೆ. ಅದೇ ರೀತಿ ಹಿಂದಿಯಲ್ಲಿ ‘ಮಿಸ್ಟರ್​ ಪರ್ಫೆಕ್ಟ್​’ ಆಮಿರ್ ಖಾನ್, ತೆಲುಗಿನಲ್ಲಿ ಖ್ಯಾತ ನಿರ್ದೇಶಕ ರಾಜಮೌಳಿ, ಮಲಯಾಳಂನಲ್ಲಿ ಲೆಜೆಂಡರಿ ನಟ ಮೋಹನ್​ಲಾಲ್ ಅವರು ‘ಇಂಡಿಯನ್ 2’ ಚಿತ್ರದ ಇಂಟ್ರೋ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಅನಿರುದ್ಧ್ ರವಿಚಂದರ್ ಅವರು ಈ ಸಿನಿಮಾಗೆ ಸಂಗೀತ ನೀಡಿದ್ದಾರೆ. ರವಿವರ್ಮನ್ ಹಾಗೂ ರತ್ನವೇಲು ಅವರು ಛಾಯಾಗ್ರಹಣ ಮಾಡಿದ್ದಾರೆ. ಎ. ಶ್ರೀಕರ್ ಪ್ರಸಾದ್ ಅವರು ಸಂಕಲನದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.

ಇದನ್ನೂ ಓದಿ: ಕಮಲ್ ಹಾಸನ್ ಅವರನ್ನು ಭೇಟಿ ಆಗಿದ್ದೇಕೆ ಶಿವಣ್ಣ, ಒಟ್ಟಿಗೆ ಸಿನಿಮಾ ಮಾಡ್ತಿದ್ದಾರಾ? ಕೊಟ್ರಾ ಉತ್ತರ

ಪ್ರತಿಷ್ಠಿತ ‘ಲೈಕಾ ಪ್ರೊಡಕ್ಷನ್ಸ್’ ಮತ್ತು ‘ರೆಡ್ ಜೈಂಟ್ ಮೂವೀಸ್’ ಸಂಸ್ಥೆಗಳ ಮೂಲಕ ‘ಇಂಡಿಯನ್ 2’ ಸಿನಿಮಾ ನಿರ್ಮಾಣವಾಗುತ್ತಿದೆ. ಹಿರಿಯ ಸ್ವಾತಂತ್ರ್ಯ ಹೋರಾಟಗಾರನು ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಹಾನಿಯನ್ನು ಈ ಸಿನಿಮಾ ಒಳಗೊಂಡಿದೆ. ಕಮಲ್​ ಹಾಸನ್​ ಮಾತ್ರವಲ್ಲದೇ ಅನೇಕ ಜನಪ್ರಿಯ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ. ಕಾಜಲ್ ಅಗರ್ವಾಲ್, ಸಿದ್ಧಾರ್ಥ್, ರಕುಲ್ ಪ್ರೀತ್ ಸಿಂಗ್, ಕಾಳಿದಾಸ್ ಜಯರಾಮ್, ಪ್ರಿಯಾ ಭವಾನಿ ಶಂಕರ್, ಗುಲ್ಶನ್ ಗ್ರೋವರ್, ವಿವೇಕ್, ಸಮುದ್ರಖನಿ, ನೆಡುಮುಡಿ ವೇಣು, ಬಾಬಿ ಸಿಂಹ, ದೆಹಲಿ ಗಣೇಶ್, ಗುರು ಸೋಮಸುಂದರಂ, ಜಯಪ್ರಕಾಶ್, ವೆನ್ನೆಲ ಕಿಶೋರ್, ಮನೋಬಾಲಾ, ದೀಪಾ ಶಂಕರ್ ಮುಂತಾದವರು ನಟಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ
ಶಿರೂರು ದುರಂತ ಸಂಭವಿಸಿ ವರ್ಷ ಕಳೆದರೂ ಮುಗಿಯದ ಜನರ ಆತಂಕ
ಶಿರೂರು ದುರಂತ ಸಂಭವಿಸಿ ವರ್ಷ ಕಳೆದರೂ ಮುಗಿಯದ ಜನರ ಆತಂಕ
ಕ್ರಾಂತಿವೀರ ದಂಥ ಬಿರುದುಗಳೆಲ್ಲ ನನಗೆ ಬೇಡ ಎಂದು ನಗುತ್ತಾ ಹೇಳಿದ ರಾಜಣ್ಣ
ಕ್ರಾಂತಿವೀರ ದಂಥ ಬಿರುದುಗಳೆಲ್ಲ ನನಗೆ ಬೇಡ ಎಂದು ನಗುತ್ತಾ ಹೇಳಿದ ರಾಜಣ್ಣ
ಕರ್ನಾಟಕದ ಎಲ್ಲ ಸಂಸದರಿಗೆ ಇದು ಸ್ವಾಭಿಮಾನದ ಪ್ರಶ್ನೆ: ಶಿವಕುಮಾರ್
ಕರ್ನಾಟಕದ ಎಲ್ಲ ಸಂಸದರಿಗೆ ಇದು ಸ್ವಾಭಿಮಾನದ ಪ್ರಶ್ನೆ: ಶಿವಕುಮಾರ್