ಯಶ್ ನಟನೆಯ ‘ಕೆಜಿಎಫ್ 2’ ಕಲೆಕ್ಷನ್ ಹಿಂದಿಕ್ಕಲು ರೆಡಿ ಆದ ‘ವಿಕ್ರಮ್’ ಸಿನಿಮಾ
‘ವಿಕ್ರಮ್’ ಸಿನಿಮಾ ತಮಿಳುನಾಡಿನಲ್ಲಿ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ. ಮೊದಲ ಏಳು ದಿನಗಳಲ್ಲಿ ಈ ಚಿತ್ರ 77 ಕೋಟಿ ರೂಪಾಯಿ ಗಳಿಸಿತ್ತು. ಈ ವೀಕೆಂಡ್ನಲ್ಲೂ ಸಿನಿಮಾವನ್ನು ವೀಕ್ಷಿಸುವವರ ಸಂಖ್ಯೆ ಹೆಚ್ಚಿದೆ.

ಕಮಲ್ ಹಾಸನ್ (Kamal Haasan) ನಟನೆಯ ‘ವಿಕ್ರಮ್’ ಸಿನಿಮಾ (Vikram Movie) ಬಾಕ್ಸ್ ಆಫೀಸ್ನಲ್ಲಿ ಮೋಡಿ ಮಾಡುತ್ತಿದೆ. ಎರಡನೇ ವಾರವೂ ಚಿತ್ರವನ್ನು ಜನರು ಮುಗಿಬಿದ್ದು ವೀಕ್ಷಿಸುತ್ತಿದ್ದಾರೆ. ಹೀಗಾಗಿ, ಸಿನಿಮಾದ ಕಲೆಕ್ಷನ್ ಹೆಚ್ಚುತ್ತಲೇ ಇದೆ. ತಮಿಳುನಾಡಿನಲ್ಲಿ ಸದ್ಯ ಯಾವುದೇ ದೊಡ್ಡ ಸಿನಿಮಾಗಳು ರಿಲೀಸ್ ಆಗಿಲ್ಲ. ಇದು ‘ವಿಕ್ರಮ್’ ಚಿತ್ರಕ್ಕೆ ಪ್ಲಸ್ ಆಗಿದೆ. ಚಿತ್ರದ ಕಲೆಕ್ಷನ್ ಕೂಡ ಹೆಚ್ಚುತ್ತಿದೆ. ತಮಿಳುನಾಡು ಬಾಕ್ಸ್ ಆಫೀಸ್ನಲ್ಲಿ ಈ ಸಿನಿಮಾ ಶೀಘ್ರವೇ ‘ಕೆಜಿಎಫ್ 2’ ಚಿತ್ರದ ಕಲೆಕ್ಷನ್ ಹಿಂದಿಕ್ಕಲಿದೆ ಎಂದು ಬಾಕ್ಸ್ ಆಫೀಸ್ ಪಂಡಿತರು ಊಹಿಸಿದ್ದಾರೆ.
‘ವಿಕ್ರಮ್’ ಸಿನಿಮಾ ತಮಿಳುನಾಡಿನಲ್ಲಿ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ. ಮೊದಲ ಏಳು ದಿನಗಳಲ್ಲಿ ಈ ಚಿತ್ರ 77 ಕೋಟಿ ರೂಪಾಯಿ ಗಳಿಸಿತ್ತು. ಈ ವೀಕೆಂಡ್ನಲ್ಲೂ ಸಿನಿಮಾವನ್ನು ವೀಕ್ಷಿಸುವವರ ಸಂಖ್ಯೆ ಹೆಚ್ಚಿದೆ. ಶುಕ್ರವಾರ (ಜೂನ್ 10) 6.12 ಕೋಟಿ ರೂಪಾಯಿ ಹಾಗೂ ಶನಿವಾರ (ಜೂನ್ 11) 7.80 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಮೂಲಕ ಚಿತ್ರದ ಒಟ್ಟೂ ಕಲೆಕ್ಷನ್ 90.97 ಕೋಟಿ ರೂಪಾಯಿ ಆಗಿದೆ. ಇಂದು (ಜೂನ್ 13) ಭಾನುವಾರ ಆದ್ದರಿಂದ ಸಿನಿಮಾದ ಗಳಿಕೆ 100 ಕೋಟಿ ರೂಪಾಯಿ ದಾಟುವ ಸಾಧ್ಯತೆ ಇದೆ.
#Vikram BEATS #RRR at the TN Box Office to become the 3rd highest grossing movie of the year.
— Manobala Vijayabalan (@ManobalaV) June 12, 2022
ಕನ್ನಡದ ‘ಕೆಜಿಎಫ್ 2’ ಸಿನಿಮಾ ತಮಿಳಿಗೂ ಡಬ್ ಆಗಿ ರಿಲೀಸ್ ಆಗಿತ್ತು. ಈ ಚಿತ್ರದ ಲೈಫ್ಟೈಮ್ ಕಲೆಕ್ಷನ್ (ತಮಿಳುನಾಡು ಬಾಕ್ಸ್ ಆಫೀಸ್) 109 ಕೋಟಿ ರೂಪಾಯಿ. ಹೀಗಾಗಿ, ಇನ್ನೂ ಕೆಲವೇ ದಿನಗಳಲ್ಲಿ ‘ವಿಕ್ರಮ್’ ಸಿನಿಮಾ ತಮಿಳುನಾಡಿನಲ್ಲಿ ‘ಕೆಜಿಎಫ್ 2’ ಕಲೆಕ್ಷನ್ ಹಿಂದಿಕ್ಕಲಿದೆ ಎಂದು ಊಹಿಸಲಾಗಿದೆ. ವಿಶ್ವ ಮಟ್ಟದಲ್ಲಿ ‘ವಿಕ್ರಮ್’ ಸಿನಿಮಾ 250 ಕೋಟಿ ರೂಪಾಯಿ ಕ್ಲಬ್ ಸೇರುವತ್ತ ಸಾಗುತ್ತಿದೆ. ಈ ಚಿತ್ರ 231 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ.
Top 7 TN gross/share of 2022#Valimai#KGFChapter2#Vikram*#RRRMovie#ET#Don#Beast
— Manobala Vijayabalan (@ManobalaV) June 12, 2022
‘ವಿಕ್ರಮ್’ ಸಿನಿಮಾ ಮೂಲಕ ನಟ ಕಮಲ್ ಹಾಸನ್ ಒಂದೊಳ್ಳೆಯ ಕಂಬ್ಯಾಕ್ ಮಾಡಿದ್ದಾರೆ. ಈ ಚಿತ್ರವನ್ನು ಅವರೇ ನಿರ್ಮಾಣ ಮಾಡಿದ್ದಾರೆ. ಹೀಗಾಗಿ ಅವರಿಗೆ ದುಡ್ಡು ಹರಿದು ಬರುತ್ತಿದೆ. ನಿರ್ದೇಶಕ ಲೋಕೇಶ್ ಕನಗರಾಜ್ಗೆ ಕಾರು ಹಾಗೂ ಸಹ ನಟ ಸೂರ್ಯಗೆ ದುಬಾರಿ ರೊಲೆಕ್ಸ್ ವಾಚ್ ಕೊಟ್ಟ ವಿಚಾರ ಇತ್ತೀಚೆಗೆ ವೈರಲ್ ಆಗಿತ್ತು.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.