AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಸಭಾ ಸದಸ್ಯನಾಗಿ ಪ್ರಮಾಣವಚನ ಸ್ವೀಕರಿಸಿದ ಕಮಲ್ ಹಾಸನ್; ಸಂಬಳ ಎಷ್ಟು?

Kamal Haasan : ಕಮಲ್ ಹಾಸನ್ ಅವರು ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರ ಮಾಸಿಕ ವೇತನ, ಪ್ರಯಾಣ ಭತ್ಯೆ, ವಸತಿ, ಮತ್ತು ಇತರ ಸವಲತ್ತುಗಳ ಬಗ್ಗೆ ವಿವರ ನೀಡಲಾಗಿದೆ. ಡಿಎಂಕೆ ಪಕ್ಷದ ಬೆಂಬಲದೊಂದಿಗೆ ಅವರು ಈ ಸ್ಥಾನ ಪಡೆದಿದ್ದಾರೆ .

ರಾಜ್ಯಸಭಾ ಸದಸ್ಯನಾಗಿ ಪ್ರಮಾಣವಚನ ಸ್ವೀಕರಿಸಿದ ಕಮಲ್ ಹಾಸನ್; ಸಂಬಳ ಎಷ್ಟು?
ಕಮಲ್ ಹಾಸನ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Jul 28, 2025 | 8:22 AM

Share

ನಟ ಮತ್ತು ಮಕ್ಕಳ್ ನೀಧಿ ಮೈಯಂ ಪಕ್ಷದ ನಾಯಕ ಕಮಲ್ ಹಾಸನ್ (Kamal Haasan) ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಎಲ್ಲರಿಗೂ ಅವರು ಅಭಿನಂದನೆ ತಿಳಿಸಿದ್ದಾರೆ. ಅವರು ತಮಿಳಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು ಮತ್ತು ತಮ್ಮ ಭಾಷೆಯ ಮೇಲಿನ ಪ್ರೀತಿ ತೋರಿಸಿದರು. ಒಬ್ಬ ಭಾರತೀಯನಾಗಿ ತಮ್ಮ ಕರ್ತವ್ಯವನ್ನು ಪೂರೈಸುವುದಾಗಿ ಅವರು ಹೇಳಿದರು. ಕಳೆದ ಲೋಕಸಭಾ ಚುನಾವಣೆಯ ಸಮಯದಲ್ಲಿ ಕಮಲ್ ಡಿಎಂಕೆ ಪಕ್ಷದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ್ದರು. ಇದರೊಂದಿಗೆ, ಡಿಎಂಕೆ ಅವರಿಗೆ ರಾಜ್ಯಸಭಾ ಸದಸ್ಯರಾಗಲು ಸೀಟ್ ನೀಡಿತು. ಈಗ, ಮೊದಲ ಬಾರಿಗೆ, ಅವರು ಭಾರತ ಸರ್ಕಾರದಿಂದ ರಾಜ್ಯಸಭಾ ಸದಸ್ಯರಾಗಿ ಸಂಬಳ ಪಡೆಯಲಿದ್ದಾರೆ. ಸಂಸದರಾಗಿ ಸಂಬಳವು ಕಮಲ್ ಪ್ರಸ್ತುತ ಪಡೆಯುತ್ತಿರುವ ಸಂಭಾವನೆಗಿಂತ ಕಡಿಮೆಯಾಗಿದೆ ಎಂದು ಹೇಳಬಹುದು.

ವರದಿಗಳ ಪ್ರಕಾರ, ರಾಜ್ಯಸಭಾ ಸಂಸದರಾಗಿ ಕಮಲ್ ಹಾಸನ್ ಅವರ ಮಾಸಿಕ ವೇತನ 1,24,000 ರೂಪಾಯಿ. ದೈನಂದಿನ ಭತ್ಯೆ: ಸಂಸತ್ತಿನ ಅಧಿವೇಶನಗಳಲ್ಲಿ ದಿನಕ್ಕೆ ರೂ. 2,500 ಸಿಗಲಿದೆ. ಕಚೇರಿ ವೆಚ್ಚ ಎಂದು ತಿಂಗಳಿಗೆ ರೂ. 75,000 ಸಿಗಲಿದೆ. ಸಹಾಯಕ ಸಿಬ್ಬಂದಿಗೆ 50,000 ರೂಪಾಯಿ ಸಿಗಲಿದ. ಕಚೇರಿ ಅಗತ್ಯಗಳಿಗಾಗಿ 25,000 ಸಿಗಲಿದೆ.

ವರ್ಷಕ್ಕೆ 34 ಉಚಿತ ದೇಶೀಯ ಪ್ರಯಾಣ ಇರುತ್ತದೆ. ಸಂಸದ, ಕುಟುಂಬ; ಸಿಬ್ಬಂದಿ ಅಥವಾ ಸಹಾಯಕರು 8 ಟ್ರಿಪ್‌ಗಳನ್ನು ಬಳಸಬಹುದು. ಅಧಿಕೃತ ಮತ್ತು ವೈಯಕ್ತಿಕ ಬಳಕೆಗಾಗಿ ಅನಿಯಮಿತ ಪ್ರಥಮ ದರ್ಜೆ ರೈಲು ಪ್ರಯಾಣ ಸಿಗಲಿದೆ. ನವದೆಹಲಿಯಲ್ಲಿ ನಿವಾಸ ನೀಡಲಾಗುತ್ತದೆ. ಉಚಿತ ವಿದ್ಯುತ್ ಕೂಡ ಸಿಗಲಿದೆ. ಉಚಿತ ನೀರು ಕೂಡ ಸಿಗಲಿದೆ.

ಇದನ್ನೂ ಓದಿ
Image
‘ಭರ್ಜರಿ ಬ್ಯಾಚುಲರ್ಸ್ 2’ ವಿನ್ನರ್ ಸುನೀಲ್​; ಸಿಕ್ಕಿದ್ದು ಇಷ್ಟೊಂದು ಹಣವಾ
Image
‘ಸು ಫ್ರಮ್ ಸೋ’ ಬ್ಲಾಕ್​ಬಸ್ಟರ್ ಕಲೆಕ್ಷನ್; ‘ಎಕ್ಕ’ ದಾಖಲೆ ಉಡೀಸ್
Image
ಕಡಿಮೆ ಶೋ ಕೊಟ್ಟರೂ ಸು ಫ್ರಮ್ ಸೋ ಆರ್ಭಟದ ಕಲೆಕ್ಷನ್; ಬಾಕ್ಸ್ ಆಫೀಸ್ ಉಡೀಸ್
Image
Exclusive: ಅಳಿಯ ಚಂದು ಚಿತ್ರಕ್ಕೆ ವಿಲನ್ ಆದ ದರ್ಶನ್; ದಿನಕರ್ ನಿರ್ದೇಶನ

ಉಚಿತ ಫೋನ್ ಮತ್ತು ಇಂಟರ್ನೆಟ್ ಸೇವೆಗಳು ಸಿಗಲಿದೆ. ಹಿರಿಯ ಸರ್ಕಾರಿ ಅಧಿಕಾರಿಗಳಿಗೆ ನೀಡಲಾಗುವ ವೈದ್ಯಕೀಯ ಸೇವೆ ಇವರಿಗೂ ಸಿಗಲಿದೆ. ನಿವೃತ್ತಿಯ ನಂತರ ತಿಂಗಳಿಗೆ ರೂ. 31,000 ಪಿಂಚಣಿ ಸಿಗಲಿದೆ.  ರಾಜ್ಯಸಭೆಯ ಅವಧಿ ಆರು ವರ್ಷ. ಮೂರನೇ ಒಂದು ಭಾಗದಷ್ಟು ಸದಸ್ಯರು ಪ್ರತಿ ಎರಡು ವರ್ಷಗಳಿಗೊಮ್ಮೆ ನಿವೃತ್ತರಾಗುತ್ತಾರೆ.

ಇದನ್ನೂ ಓದಿ: ‘ನನ್ನ ಮತ್ತೊಬ್ಬ ತಾಯಿ’: ಬಿ. ಸರೋಜಾದೇವಿ ನೆನೆದು ಭಾವುಕರಾದ ಕಮಲ್ ಹಾಸನ್

ಸಿನಿಮಾ ವಿಚಾರಕ್ಕೆ ಬರೋದಾದರೆ ಕಮಲ್ ಹಾಸನ್ ಅವರು ಇತ್ತೀಚೆಗೆ ‘ಥಗ್ ಲೈಫ್’ ರಿಲೀಸ್ ಆಯಿತು. ಈ ಚಿತ್ರ ವಿವಾದ ಮಾಡಿಕೊಂಡಿತು. ಕಮಲ್ ಹಾಸನ್ ಅವರು ‘ಕನ್ನಡ ತಮಿಳಿನಿಂದ ಹುಟ್ಟಿದ್ದು’ ಎಂದು ಹೇಳಿದರು. ಇದರಿಂದ ಅವರು ಸಾಕಷ್ಟು ವಿರೋಧ ಎದುರಿಸಬೇಕಾಯಿತು. ಈ ಕಾರಣಕ್ಕೆ ಸಿನಿಮಾ ಕನ್ನಡದಲ್ಲಿ ರಿಲೀಸ್ ಆಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:19 am, Mon, 28 July 25

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ