ಮತ್ತೊಂದು ಮಾಸ್ ಚಿತ್ರದ ಜೊತೆ ಬಂದ ಕಮಲ್ ಹಾಸನ್​; ‘ಥಗ್​ ಲೈಫ್’ ರಿಲೀಸ್ ಡೇಟ್ ರಿವೀಲ್

‘ಥಗ್ ಲೈಫ್’ ಬಗ್ಗೆ ನಿರೀಕ್ಷೆ ಮೂಡಲು ಹಲವು ಕಾರಣಗಳು ಇವೆ. ಕಮಲ್ ಹಾಸನ್ ಅವರು ಮಾಸ್​ ಅವತಾತರದಲ್ಲಿ ಪ್ರೇಕ್ಷಕರ ಎದುರು ಬರುತ್ತಿದ್ದಾರೆ. ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಮಣಿರತ್ನಂ ಅವರು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ‘ಪೊನ್ನಿಯಿನ್ ಸೆಲ್ವನ್ 2’ ಬಳಿಕ ಅವರು ನಿರ್ದೇಶನ ಮಾಡುತ್ತಿರುವ ಸಿನಿಮಾ ಇದಾಗಿದೆ.

ಮತ್ತೊಂದು ಮಾಸ್ ಚಿತ್ರದ ಜೊತೆ ಬಂದ ಕಮಲ್ ಹಾಸನ್​; ‘ಥಗ್​ ಲೈಫ್’ ರಿಲೀಸ್ ಡೇಟ್ ರಿವೀಲ್
ಕಮಲ್ ಹಾಸನ್
Follow us
ರಾಜೇಶ್ ದುಗ್ಗುಮನೆ
|

Updated on:Nov 07, 2024 | 1:05 PM

ಕಮಲ್ ಹಾಸನ್ ಅವರನ್ನು ನಟನೆಯಲ್ಲಿ ಮೀರೀಸೋರು ಯಾರೂ ಇಲ್ಲ. ಅವರು ಅದ್ಭುತ ನಟನೆಯ ಮೂಲಕ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಾ ಇದ್ದಾರೆ. ಜನ್ಮದಿನದ (ನವೆಂಬರ್ 7) ಪ್ರಯುಕ್ತ ಅವರ ನಟನೆಯ ‘ಥಗ್ ಲೈಫ್’ ಚಿತ್ರದ ಟೀಸರ್ ರಿಲೀಸ್ ಆಗಿದೆ. ಇದರಲ್ಲಿ ಅವರು ಸಖತ್ ಮಾಸ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಟೀಸರ್ ಸಾಕಷ್ಟು ಗಮನ ಸೆಳೆಯುತ್ತಿದೆ.

‘ಥಗ್ ಲೈಫ್’ ಬಗ್ಗೆ ನಿರೀಕ್ಷೆ ಮೂಡಲು ಹಲವು ಕಾರಣಗಳು ಇವೆ. ಕಮಲ್ ಹಾಸನ್ ಅವರು ಮಾಸ್​ ಅವತಾತರದಲ್ಲಿ ಪ್ರೇಕ್ಷಕರ ಎದುರು ಬರುತ್ತಿದ್ದಾರೆ. ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಮಣಿರತ್ನಂ ಅವರು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ‘ಪೊನ್ನಿಯಿನ್ ಸೆಲ್ವನ್ 2’ ಬಳಿಕ ಅವರು ನಿರ್ದೇಶನ ಮಾಡುತ್ತಿರುವ ಸಿನಿಮಾ ಇದಾಗಿದೆ. ಈ ಕಾರಣದಿಂದಲೂ ಚಿತ್ರ ನಿರೀಕ್ಷೆ ಮೂಡಿಸಿದೆ.

‘ಥಗ್​ ಲೈಫ್’ ಚಿತ್ರಕ್ಕೆ ಎಆರ್​ ರೆಹಮಾನ್ ಅವರ ಸಂಗೀತ ಸಂಯೋಜನೆ ಇದೆ. ಟೀಸರ್​ ಮೂಲಕವೇ ಅವರು ತಮ್ಮ ಕೈಚಳಕ ತೋರಿಸಿದ್ದಾರೆ. ಹಿನ್ನೆಲೆ ಸಂಗೀತ ಗಮನ ಸೆಳೆಯುತ್ತಿದೆ. ಈ ಚಿತ್ರದಲ್ಲಿ ಕಮಲ್ ಹಾಸನ್ ಅವರು ಮಾಸ್ ಅವತಾರ ತಾಳಿದ್ದಾರೆ. ಅದ್ದೂರಿ ದೃಶ್ಯ ವೈಭವವೂ ಚಿತ್ರದಲ್ಲಿ ಇದೆ.

ಹಾಗಾದರೆ ಸಿನಿಮಾ ರಿಲೀಸ್ ಯಾವಾಗ? ಆ ಪ್ರಶ್ನೆಗೂ ಉತ್ತರ ಇದೆ. 2025ರ ಜೂನ್ 5ರಂದು ಸಿನಿಮಾ ತೆರೆಮೇಲೆ ಬರಲಿದೆ. ಸದ್ಯ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಮೊದಲು ರಿಲೀಸ್ ದಿನಾಂಕ ಘೋಷಣೆ ಮಾಡಿ ನಂತರ ಅದನ್ನು ಮುಂದಕ್ಕೆ ಹಾಕೋದು ಬೇಡ ಎನ್ನುವ ಕಾರಣಕ್ಕೆ ಈ ಚಿತ್ರದ ರಿಲೀಸ್​ಗೆ ಸಾಕಷ್ಟು ಸಮಯವನ್ನು ನಿರ್ದೇಶಕರು ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ತಮಿಳು ಚಿತ್ರರಂಗದಲ್ಲಿ ದೊಡ್ಡ ಸಾಮ್ರಾಜ್ಯ ಕಟ್ಟಿದ ಕಮಲ್ ಹಾಸನ್ ಆಸ್ತಿ ಎಷ್ಟು ಕೋಟಿ?

ಈ ಚಿತ್ರದಲ್ಲಿ ಕಮಲ್ ಹಾಸನ್, ಸಿಂಬು, ತ್ರಿಷಾ, ಅಶೋಕ್ ಸೆಲ್ವನ್ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾ ತಮಿಳಿನ ಜೊತೆಗೆ ಕನ್ನಡ, ತೆಲುಗು, ಹಿಂದಿಯಲ್ಲೂ ರಿಲೀಸ್ ಆಗುತ್ತಿದೆ. ಕಮಲ್ ಹಾಸನ್ ಹಾಗೂ ಮಣಿರತ್ನಂ ಒಟ್ಟಾಗಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:42 pm, Thu, 7 November 24

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ