Kamal Haasan Health: ಕಮಲ್​ ಹಾಸನ್​ ಆರೋಗ್ಯ ಸ್ಥಿರವಾಗಿದೆ; ವೈದ್ಯರಿಂದ ಹೆಲ್ತ್​ ಬುಲೆಟಿನ್​

ನಾನೀಗ ಆಸ್ಪತ್ರೆಯಲ್ಲಿ ಐಸೋಲೇಟ್ ಆಗಿದ್ದೇನೆ. ಒಂದು ಅರಿವಾಗಿದ್ದೇನೆಂದರೆ, ಈ ಮಹಾಮಾರಿ ನಮ್ಮನ್ನು ಬಿಟ್ಟು ಇನ್ನೂ ಹೋಗಿಲ್ಲ. ನಾವೆಲ್ಲ ಸುರಕ್ಷಿತವಾಗಿ ಇರಬೇಕಿದೆ ಎಂದಿದ್ದರು ಕಮಲ್​

Kamal Haasan Health: ಕಮಲ್​ ಹಾಸನ್​ ಆರೋಗ್ಯ ಸ್ಥಿರವಾಗಿದೆ; ವೈದ್ಯರಿಂದ ಹೆಲ್ತ್​ ಬುಲೆಟಿನ್​
ಕಮಲ್​ ಹಾಸನ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Nov 27, 2021 | 2:53 PM

ಖ್ಯಾತ ನಟ ಕಮಲ್​ ಹಾಸನ್​ ಅವರ ಆರೋಗ್ಯದ ಬಗ್ಗೆ ಅಭಿಮಾನಿಗಳಿಗೆ ಇದ್ದ ಆತಂಕ ದೂರವಾಗುವ ಸುದ್ದಿಯೊಂದು ಹೊರ ಬಿದ್ದಿದೆ. ಇತ್ತೀಚೆಗೆ ಕೊವಿಡ್​ನಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಈ ಬಗ್ಗೆ ಆಸ್ಪತ್ರೆಯ ವೈದ್ಯರಿಂದ ಅಧಿಕೃತ ಮಾಹಿತಿ ಸಿಕ್ಕಿದೆ. ಅವರು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಕೋರುತ್ತಿದ್ದಾರೆ. ಈ ಪ್ರಾರ್ಥನೆ ಸಫಲವಾಗಿದೆ. ಈಚೆಗಷ್ಟೇ ಕಮಲ್​ ಹಾಸನ್​ ಅಮೆರಿಕಕ್ಕೆ ಪ್ರವಾಸ ಹೋಗಿದ್ದರು. ಅಲ್ಲಿಂದ ಮರಳಿದ ಮೇಲೆ ಸಣ್ಣ ಪ್ರಮಾಣದ ಕೊವಿಡ್​ ಲಕ್ಷಣಗಳು ಅವರಿಗೆ ಕಾಣಿಸಿಕೊಂಡಿತ್ತು. ಹೀಗಾಗಿ, ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿಸಿದ್ದರು ಕಮಲ್​. ಈ ವೇಳೆ ಕೊರೊನಾ ಪಾಸಿಟಿವ್ ಆಗಿರುವುದು ಖಚಿತಗೊಂಡಿದೆ. ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಲಾಗುತ್ತಿದೆ.

ಈ ಬಗ್ಗೆ ಟ್ವೀಟ್​ ಮಾಡಿದ್ದ ಕಮಲ್​ ‘ಅಮೆರಿಕದಿಂದ ವಾಪಸ್ ಬಂದ ಬಳಿಕ ನನಗೆ ಸಣ್ಣದಾಗಿ ಕೆಮ್ಮು ಆರಂಭವಾಗಿತ್ತು. ಪರೀಕ್ಷೆ ಮಾಡಿಸಿದ ನಂತರ ಇದು ಕೋವಿಡ್-19 ಪಾಸಿಟಿವ್ ಎಂಬುದು ತಿಳಿದುಬಂತು. ನಾನೀಗ ಆಸ್ಪತ್ರೆಯಲ್ಲಿ ಐಸೋಲೇಟ್ ಆಗಿದ್ದೇನೆ. ಒಂದು ಅರಿವಾಗಿದ್ದೇನೆಂದರೆ, ಈ ಮಹಾಮಾರಿ ನಮ್ಮನ್ನು ಬಿಟ್ಟು ಇನ್ನೂ ಹೋಗಿಲ್ಲ. ನಾವೆಲ್ಲ ಸುರಕ್ಷಿತವಾಗಿ ಇರಬೇಕಿದೆ’ ಎಂದಿದ್ದರು ಕಮಲ್​. ಈಗ ಅವರ ಆರೋಗ್ಯ ಸುಧಾರಿಸಿದೆ.

ಕಮಲ್​ ಆರೋಗ್ಯ ವರದಿಯನ್ನು ಚೆನ್ನೈನ ಆಸ್ಪತ್ರೆಯವರು ಇಂದು ಬಿಡುಗಡೆ ಮಾಡಿದ್ದಾರೆ. ‘ಕಮಲ್ ಹಾಸನ್​ಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿರವಾಗಿದೆ’ ಎಂದು ಆಸ್ಪತ್ರೆಯವರು ಹೇಳಿದ್ದಾರೆ. ನವೆಂಬರ್​ 7ರಂದು ಕಮಲ್​ ಜನ್ಮದಿನ ಆಚರಿಸಿಕೊಂಡಿದ್ದರು. ಸೆಲೆಬ್ರಿಟಿಗಳು, ಅಭಿಮಾನಿಗಳು, ಸ್ನೇಹಿತರು ಕಮಲ್​ ಹಾಸನ್​ಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದರು. ಬರ್ತ್​ಡೇ ಪ್ರಯುಕ್ತ ಬಹುನಿರೀಕ್ಷಿತ ‘ವಿಕ್ರಮ್​’ ಸಿನಿಮಾ ತಂಡದಿಂದ ಟೀಸರ್​ ಬಿಡುಗಡೆ ಆಗಿತ್ತು. ಈ ಸಿನಿಮಾದಲ್ಲಿ ವಿಜಯ್​ ಸೇತುಪತಿ, ಫಹಾದ್​ ಫಾಸಿಲ್​ ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಟೀಸರ್​ನಲ್ಲಿ ಅನಿರುದ್ಧ್​ ರವಿಚಂದರ್​ ಅವರ ಹಿನ್ನೆಲೆ ಸಂಗೀತ ಕೂಡ ಚಪ್ಪಾಳೆ ಗಿಟ್ಟಿಸಿಕೊಳ್ಳುತ್ತಿದೆ.

ಕಿರುತೆರೆ ಪ್ರೇಕ್ಷಕರಿಗೆ ಬಿಗ್​ ಬಾಸ್ ರಿಯಾಲಿಟಿ ಶೋ ಬಗ್ಗೆ ಸಖತ್​ ಕ್ರೇಜ್​. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಮುಂತಾದ ಭಾಷೆಗಳಲ್ಲಿ ಈ ಕಾರ್ಯಕ್ರಮ ಫೇಮಸ್​ ಆಗಿದೆ. ಎಷ್ಟೋ ಬಾರಿ ಬಿಗ್​ ಬಾಸ್​ ಸ್ಪರ್ಧಿಗಳು ಯಾರು ಎಂಬುದಕ್ಕಿಂತಲೂ ಆ ಕಾರ್ಯಕ್ರಮದ ನಿರೂಪಣೆ ಯಾರು ಮಾಡುತ್ತಾರೆ ಎಂಬುದೇ ಹೆಚ್ಚು ಮುಖ್ಯವಾಗುತ್ತದೆ. ಕನ್ನಡದಲ್ಲಿ ಕಿಚ್ಚ ಸುದೀಪ್​  ಹಿಂದಿಯಲ್ಲಿ ಸಲ್ಮಾನ್​ ಖಾನ್​ ಅವರು ಈ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಿಕೊಂಡು ಬರುತ್ತಿದ್ದಾರೆ. ಆದರೆ ತೆಲುಗು ಮತ್ತು ತಮಿಳಿನಲ್ಲಿ ಬದಲಾವಣೆಗಳು ಆಗುತ್ತಿವೆ. ತಮಿಳು ಬಿಗ್​ ಬಾಸ್​ 5, ನಿರೂಪಣೆ ಮಾಡುತ್ತಿದ್ದ ಕಮಲ್​ ಹಾಸನ್ ಅವರಿಗೆ ಕೊರೊನಾ ಪಾಸಿಟಿವ್​ ಆಗಿದೆ. ಈ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಈಗ ನಟಿ ರಮ್ಯಾ ಕೃಷ್ಣ ಆಗಮಿಸಿದ್ದಾರೆ ಎಂಬ ಸುದ್ದಿ ಹಬ್ಬಿದೆ.​

ಇದನ್ನೂ ಓದಿ: ಯುಎಸ್ ಪ್ರವಾಸದಿಂದ ಹಿಂದಿರುಗಿದ ನಂತರ ಕಮಲ್ ಹಾಸನ್​​ಗೆ ಕೊರೊನಾ ಪಾಸಿಟಿವ್

ಕಮಲ್​ ಹಾಸನ್​ ವಿಚ್ಛೇದನ ಪಡೆದಾಗ ಖುಷಿಪಟ್ಟಿದ್ದ ಮಗಳು ಶ್ರುತಿ ಹಾಸನ್​; ಕಾರಣ ಏನು?

Published On - 2:52 pm, Sat, 27 November 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ