AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಮಾನಾಸ್ಪದವಾಗಿ ಮೃತಪಟ್ಟ ‘ಕಾಂಚನ 3’ ನಟಿ; ಇದರ ಹಿಂದಿದೆ ಬಾಯ್​ಫ್ರೆಂಡ್​ ಕೈವಾಡ?

ಅಲೆಕ್ಸಾಂಡ್ರಾ ರಷ್ಯಾದವರು. ಗೋವಾದಲ್ಲಿ ಅವರು ವಾಸವಾಗಿದ್ದರು. ಇತ್ತೀಚೆಗೆ ಅವರು ಖಿನ್ನತೆಗೆ ಒಳಗಾಗಿದ್ದರು. ಸಾಯುವುದಕ್ಕೂ ಕೆಲ ದಿನ ಮೊದಲು ಅಲೆಕ್ಸಾಂಡ್ರಾ ಬಾಯ್​ಫ್ರೆಂಡ್​ ಮನೆಗೆ ಬಂದಿದ್ದ.

ಅನುಮಾನಾಸ್ಪದವಾಗಿ ಮೃತಪಟ್ಟ ‘ಕಾಂಚನ 3’ ನಟಿ; ಇದರ ಹಿಂದಿದೆ ಬಾಯ್​ಫ್ರೆಂಡ್​ ಕೈವಾಡ?
ಅನುಮಾನಾಸ್ಪದವಾಗಿ ಮೃತಪಟ್ಟ ‘ಕಾಂಚನ 3’ ನಟಿ; ಇದರ ಹಿಂದಿದೆ ಬಾಯ್​ಫ್ರೆಂಡ್​ ಕೈವಾಡ?
TV9 Web
| Edited By: |

Updated on:Aug 23, 2021 | 5:17 PM

Share

2019ರಲ್ಲಿ ‘ಕಾಂಚನ 3’ ಸಿನಿಮಾ ತಮಿಳಿನಲ್ಲಿ ತೆರೆಗೆ ಬಂದಿತ್ತು. ಈ ಚಿತ್ರದಲ್ಲಿ ರಾಘವ ಲಾರೆನ್ಸ್​ ನಟಿಸಿ ನಿರ್ದೇಶಿಸಿದ್ದರು. ಈ ಸಿನಿಮಾ ಬಾಕ್ಸ್​ ಆಫೀಸ್​ನಲ್ಲೂ ಒಳ್ಳೆಯ ಗಳಿಕೆ ಮಾಡಿತ್ತು. ಈಗ ಈ ಸಿನಿಮಾದಲ್ಲಿ ನಟಿಸಿದ್ದ ಅಲೆಕ್ಸಾಂಡ್ರಾ ಜಾವಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಇದು ಆತ್ಮಹತ್ಯೆ ಇರಬಹುದು ಎಂಬುದು ಮೇಲ್ನೋಟಕ್ಕೆ ಕಂಡು ಬಂದರೂ ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ಅಲೆಕ್ಸಾಂಡ್ರಾ ರಷ್ಯಾದವರು. ಗೋವಾದಲ್ಲಿ ಅವರು ವಾಸವಾಗಿದ್ದರು. ಇತ್ತೀಚೆಗೆ ಅವರು ಖಿನ್ನತೆಗೆ ಒಳಗಾಗಿದ್ದರು. ಸಾಯುವುದಕ್ಕೂ ಕೆಲ ದಿನ ಮೊದಲು ಅಲೆಕ್ಸಾಂಡ್ರಾ ಬಾಯ್​ಫ್ರೆಂಡ್​ ಮನೆಗೆ ಬಂದಿದ್ದ. ಆತ ಮನೆಯಿಂದ ಹೊರ ಹೋಗಿದ್ದನ್ನು ಕೆಲವರು ನೋಡಿದ್ದಾರೆ. ಈಗ ಅಲೆಕ್ಸಾಂಡ್ರಾ ಮೃತದೇಹ ಪತ್ತೆ ಆಗಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.

ಅಲೆಕ್ಸಾಂಡ್ರಾ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಅವರು ಮನೆಯಲ್ಲಿರುವ ಫ್ಯಾನ್​ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಬಂಧಿಕರಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದ್ದು, ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

2019ರಲ್ಲಿ ಅಲೆಕ್ಸಾಂಡ್ರಾ ಸುದ್ದಿಯಾಗಿದ್ದರು. ಇದಕ್ಕೆ ಕಾರಣ ಚೆನ್ನೈ ಮೂಲದ ಫೋಟೋಗ್ರಾಫರ್​. ‘ಆತ ನನಗೆ ಲೈಂಗಿಕ ಕಿರುಕುಳ ನೀಡಿದ್ದಾನೆ’ ಎನ್ನುವ ಗಂಭೀರ ಆರೋಪ ಮಾಡಿದ್ದರು. ಪೊಲೀಸರು ಈ ಸಂಬಂಧ ಪ್ರಕರಣ ದಾಖಲು ಮಾಡಿಕೊಂಡು ಫೋಟೋಗ್ರಾಫರ್​ನನ್ನು ಬಂಧಿಸಿದ್ದರು. ನಂತರ ಈತನನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಈ ಫೋಟೋಗ್ರಾಫರ್​ ಏನಾದರೂ ಅಲೆಕ್ಸಾಂಡ್ರಾಗೆ ಬೆದರಿಕೆ ವೊಡ್ಡಿದ್ದನೇ ಎನ್ನುವ ಅನುಮಾನ ಕೂಡ ಮೂಡಿದೆ. ಪೊಲೀಸರು ಈ ವಿಚಾರವಾಗಿಯೂ ತನಿಖೆ ನಡೆಸುತ್ತಿದ್ದಾರೆ.

‘ಕಾಂಚನ’, ‘ಕಾಂಚನ 2’ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಇದೇ ಭರವಸೆಯಲ್ಲಿ ‘ಕಾಂಚನ 3’ ಮಾಡಲಾಗಿತ್ತು. ಈ ಸಿನಿಮಾ ಕೂಡ ಉತ್ತಮ ಗಳಿಕೆ ಮಾಡಿತ್ತು. ವಿಮರ್ಶೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

ಇದನ್ನೂ ಓದಿ: Dhananjay: ಧನಂಜಯ್ ಬತ್ತಳಿಕೆ ಸೇರಿತು ಹೊಸ ಸಿನಿಮಾ; ಕುತೂಹಲ ಮೂಡಿಸುವ ಪೋಸ್ಟರ್ ಇಲ್ಲಿದೆ

Rajamanaar: ರಾಜಮನಾರ್​ ಪಾತ್ರ ಪರಿಚಯಿಸಿದ ಸಲಾರ್​; ಖಡಕ್​ ಲುಕ್​ನಲ್ಲಿ ಜಗಪತಿ ಬಾಬು

Published On - 11:40 am, Mon, 23 August 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್