‘ಎಮರ್ಜೆನ್ಸಿ’ ಸಿನಿಮಾದ ರಿಲೀಸ್ ದಿನಾಂಕ ತಿಳಿಸಿದ ಕಂಗನಾ ರಣಾವತ್; ಕಾಯಬೇಕು ಮತ್ತಷ್ಟು ತಿಂಗಳು

ಕಂಗನಾ ಅವರು ‘ಎಮರ್ಜೆನ್ಸಿ’ ಸಿನಿಮಾ ಘೋಷಣೆ ಮಾಡಿದಾಗಲೇ ಅಭಿಮಾನಿಗಳಲ್ಲಿ ಕುತೂಹಲ ಮೂಡಿತ್ತು.ಈಗ ಸಿನಿಮಾದ ರಿಲೀಸ್ ದಿನಾಂಕ ತಿಳಿಸಿದ್ದಾರೆ ಅವರು. ಜೂನ್​ 14ರಂದು ಚಿತ್ರ ರಿಲೀಸ್ ಆಗಲಿದೆ.

 ‘ಎಮರ್ಜೆನ್ಸಿ’ ಸಿನಿಮಾದ ರಿಲೀಸ್ ದಿನಾಂಕ ತಿಳಿಸಿದ ಕಂಗನಾ ರಣಾವತ್; ಕಾಯಬೇಕು ಮತ್ತಷ್ಟು ತಿಂಗಳು
ಕಂಗನಾ

Updated on: Jan 23, 2024 | 12:55 PM

ಕಂಗನಾ ರಣಾವತ್ (Kangana Ranaut) ಅವರು ‘ಎಮರ್ಜೆನ್ಸಿ’ ಸಿನಿಮಾದಲ್ಲಿ ಇಂದಿರಾ ಗಾಂಧಿ ಪಾತ್ರ ಮಾಡುವುದರ ಜೊತೆಗೆ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಕಳೆದ ವರ್ಷವೇ ಈ ಸಿನಿಮಾ ರಿಲೀಸ್ ಆಗಬೇಕಿತ್ತು. ಆದರೆ, ಕಾರಣಾಂತರಗಳಿಂದ ಸಿನಿಮಾ ಕೆಲಸ ವಿಳಂಬ ಆಯಿತು. ಈಗ ಸಿನಿಮಾದ ರಿಲೀಸ್ ದಿನಾಂಕ ಘೋಷಣೆ ಆಗಿದೆ. ಜೂನ್ 14ರಂದು ‘ಎಮರ್ಜೆನ್ಸಿ’ ಸಿನಿಮಾ ರಿಲೀಸ್ ಆಗಲಿದೆ. ಈ ಸಿನಿಮಾ ಕಣ್ತುಂಬಿಕೊಳ್ಳಲು ಮತ್ತಷ್ಟು ತಿಂಗಳು ಕಾಯಬೇಕಿದೆ.

ಕಂಗನಾ ಅವರು ಒಂದಲ್ಲ ಎರಡಲ್ಲ ಬರೋಬ್ಬರಿ ನಾಲ್ಕು ಬಾರಿ ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ. ಅವರು ‘ಎಮರ್ಜೆನ್ಸಿ’ ಸಿನಿಮಾ ಘೋಷಣೆ ಮಾಡಿದಾಗಲೇ ಅಭಿಮಾನಿಗಳಲ್ಲಿ ಕುತೂಹಲ ಮೂಡಿತ್ತು. ಇಂದಿರಾ ಗಾಂಧಿ ಪಾತ್ರದಲ್ಲಿ ಕಂಗನಾ ನಟಿಸುತ್ತಿದ್ದಾರೆ. ‘ಜೀ ಸ್ಟುಡಿಯೋಸ್’ ಮತ್ತು ‘ಮಣಿಕರ್ಣಿಕ ಫಿಲ್ಮ್ಸ್’ ಈ ಚಿತ್ರವನ್ನು ಒಟ್ಟಾಗಿ ನಿರ್ಮಾಣ ಮಾಡುತ್ತಿದೆ.

ಇಂದಿರಾ ಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿ ಆಧರಿಸಿ ‘ಎಮರ್ಜೆನ್ಸಿ’ ಚಿತ್ರ ಸಿದ್ಧಗೊಂಡಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾನ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾದಿದ್ದಾರೆ. ಈ ಚಿತ್ರದ ರಿಲೀಸ್ ದಿನಾಂಕ ವಿಳಂಬ ಆಗುತ್ತಲೇ ಬಂದಿತ್ತು. ಈ ಸಿನಿಮಾ ನವೆಂಬರ್ 24ರಂದು ರಿಲೀಸ್ ಆಬೇಕಿತ್ತು. ಆದರೆ, ಈ ಸಂದರ್ಭದಲ್ಲಿ ‘ಟೈಗರ್​ 3’ ಸಿನಿಮಾ ರಿಲೀಸ್ ಆಯಿತು. ಈ ಕಾರಣದಿಂದಲೇ ‘ಎಮರ್ಜೆನ್ಸಿ’ ಮುಂದಕ್ಕೆ ಹೋಯಿತು ಎನ್ನಲಾಗಿತ್ತು.

ಇದನ್ನೂ ಓದಿ: ದೇವಸ್ಥಾನದ ಕಸ ಗುಡಿಸಿದ ಕಂಗನಾ ರನೌತ್ ಮೇಲೆ ಟೀಕಾಪ್ರಹಾರ: ಯಾಕೆ?

ಈಗ ಕಂಗನಾ ರಣಾವತ್ ಅವರು ಹೊಸ ಪೋಸ್ಟರ್ ಹಂಚಿಕೊಂಡಿದ್ದಾರೆ ‘ಎಮರ್ಜೆನ್ಸಿ ಸಿನಿಮಾ ಈ ವರ್ಷ ಜೂನ್ 14ರಂದು ರಿಲೀಸ್ ಆಗಲಿದೆ’ ಎಂದು ಕಂಗನಾ ಮಾಹಿತಿ ಹಂಚಿಕೊಂಡಿದ್ದಾರೆ. ಕಂಗನಾ ಅವರು ಈ ಚಿತ್ರದ ಕಥೆಗೆ ಬರೆದಿದ್ದಾರೆ. ನಿರ್ದೇಶನ ಕೂಡ ಅವರದ್ದೇ. ನಿರ್ಮಾಣದಲ್ಲೂ ಅವರ ಪಾಲಿದೆ. ಪೇಪರ್​ನಲ್ಲಿ ‘ಎಮರ್ಜೆನ್ಸಿ’ ಎಂದು ಬರೆದಿದೆ.  ಕಂಗನಾ ರಣಾವತ್ ಅವರು ಅನುಪಮ್ ಖೇರ್, ಮಹಿಮಾ ಚೌಧರಿ, ಮಿಲಿಂದ್ ಸೋಮನ್, ಶ್ರೇಯಸ್ ತಲ್ಪಡೆ, ವಿಶಾಕ್ ನಾಯರ್, ಸತೀಶ್ ಕೌಶಿಕ್ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ.

ರಾಮನ ಪ್ರಾಣ ಪ್ರತಿಷ್ಠಾಪನೆಯಲ್ಲಿ ಕಂಗನಾ

ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆ ಕಾರ್ಯಕ್ರಮ ನಡೆದಿದೆ. ನಟಿ ಕಂಗನಾ ರಣಾವತ್ ಅವರು ಸೀರೆ ಉಟ್ಟು ಟ್ರೆಡಿಷನಲ್ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿತ್ತು. ಇದಾದ ಬೆನ್ನಲ್ಲೇ ಅವರು ‘ಎಮರ್ಜೆನ್ಸಿ’ ಸಿನಿಮಾದ ರಿಲೀಸ್ ದಿನಾಂಕ ಘೋಷಣೆ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ