‘ಎಮರ್ಜೆನ್ಸಿ’ ಚಿತ್ರಕ್ಕೆ ಬ್ಯಾನ್ ಭಯ; ರಿಲೀಸ್ ಆಗಲ್ಲ ಕಂಗನಾ ರಣಾವತ್ ಸಿನಿಮಾ?

ಕಂಗನಾ ರಣಾವತ್ ಅವರು ‘ಎಮರ್ಜೆನ್ಸಿ’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಚಿತ್ರ ಸೆಪ್ಟೆಂಬರ್ 6ರಂದು ರಿಲೀಸ್​ ಆಗಲಿದೆ. ಸಿನಿಮಾ ಬಗ್ಗೆ ಸಿಖ್ ಸಮುದಾಯವರು ಈಗ ಅಪಸ್ವರ ತೆಗೆದಿದ್ದಾರೆ.

‘ಎಮರ್ಜೆನ್ಸಿ’ ಚಿತ್ರಕ್ಕೆ ಬ್ಯಾನ್ ಭಯ; ರಿಲೀಸ್ ಆಗಲ್ಲ ಕಂಗನಾ ರಣಾವತ್ ಸಿನಿಮಾ?
ಎಮರ್ಜೆನ್ಸಿ ಸಿನಿಮಾ
Follow us
ರಾಜೇಶ್ ದುಗ್ಗುಮನೆ
|

Updated on:Aug 22, 2024 | 12:16 PM

ಕಂಗನಾ ರಣಾವತ್ ನಟಿಸಿ, ನಿರ್ದೇಶಿಸಿರುವ ‘ಎಮರ್ಜೆನ್ಸಿ’ ಸಿನಿಮಾದ ಟ್ರೇಲರ್ ವಾರದ ಹಿಂದಷ್ಟೇ ರಿಲೀಸ್ ಆಗಿತ್ತು. ಈ ಬೆನ್ನಲ್ಲೇ ಸಿನಿಮಾ ವಿವಾದ ಮಾಡುವ ಸೂಚನೆ ನೀಡಿತ್ತು. ಈಗ ಸಿನಿಮಾ ಮೇಲೆ ಬ್ಯಾನ್ ಹೇರುವಂತೆ ಅಕಲಾ ತಕ್ತ್ ಹಾಗೂ ಶಿರೋಮಣಿ ಗುರುದ್ವಾರ ಪರಬಂಧಕ್ ಸಮಿತಿ (ಎಸ್​ಜಿಪಿಸಿ) ಒತ್ತಾಯ ಮಾಡಿದೆ. ಸಿಖ್ ವ್ಯಕ್ತಿಗಳನ್ನು ತಪ್ಪಾಗಿ ತೋರಿಸಲಾಗಿದೆ ಮತ್ತು ಸಮುದಾಯದ ಇತಿಹಾಸವನ್ನು ಅಗೌರವಿಸುವ ಕೆಲಸ ಆಗಿದೆ ಎಂದು ಸಮಿತಿಯವರು ಹೇಳಿದ್ದಾರೆ.

ಎಸ್​ಜಿಪಿಸಿ ಮುಖ್ಯಸ್ಥ ಹರ್ಜಿಂದರ್ ಸಿಂಗ್ ಧಮಿ ಅವರು ಈ ಬಗ್ಗೆ ಮಾತನಾಡಿದ್ದಾರೆ. ‘ಎಮರ್ಜೆನ್ಸಿ ಸಿನಿಮಾ ಸಿಖ್ ಸಮುದಾಯವನ್ನು ಕೆಟ್ಟದಾಗಿ ತೋರಿಸಲಾಗಿದೆ. ಸಿಖ್ ಸಮುದಾಯದವರಿಗೆ ಮಸಿ ಬಳಿಯುವ ಕೆಲಸ ಆಗಿದೆ. ಜರ್ನೈಲ್ ಸಿಂಗ್ ಬಿಂದ್ರನ್​ವಾಲೆ ಅವರನ್ನು ನಾವು ಹುತಾತ್ಮ ಎಂದು ಪರಿಗಣಿಸಿದ್ದೇವೆ’ ಎಂಬುದಾಗಿ ಅವರು ಮಾತನಾಡಿದ್ದಾರೆ.

1975ರಲ್ಲಿ ತುರ್ತು ಪರಿಸ್ಥಿತಿ ಹೇರಲಾಯಿತು. ಇದನ್ನು ಆಧರಿಸಿ ಕಂಗನಾ ಸಿನಿಮಾ ಮಾಡಿದ್ದಾರೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪಾತ್ರದಲ್ಲಿ ಕಂಗನಾ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ರಾಜಕೀಯ ಜೀವನ, ಅವರು ಎದುರಿಸಿದ ಸವಾಲುಗಳನ್ನು ತೋರಿಸಲಾಗಿದೆ. ಈ ಟ್ರೇಲರ್​ನ ಸಿಖ್ ಸಮುದಾಯವರು ಇಷ್ಟಪಟ್ಟಿಲ್ಲ. ಈಗಾಗಲೇ ಎಸ್​ಜಿಪಿಸಿ ಅವರು ಕಂಗನಾ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಅವರ ವಿರುದ್ಧ ಎಫ್​ಐಆರ್​ಗೆ ಆಗ್ರಹಿಸಲಾಗಿದೆ.

‘ಸಿನಿಮಾಗಳಲ್ಲಿ ನಮ್ಮ ಇತಿಹಾಸವನ್ನು ತಪ್ಪಾಗಿ ಚಿತ್ರಿಸುವುದರಿಂದ ಸಿಖ್ ಸಮುದಾಯವು ಪದೇ ಪದೇ ನೋವುಂಟುಮಾಡುತ್ತಿದೆ. ಭವಿಷ್ಯದಲ್ಲಿ ಇಂತಹ ಸಿನಿಮಾಗಳನ್ನು ತಡೆಯಬೇಕು. ಭಾರತೀಯ ಚಿತ್ರರಂಗದಲ್ಲಿ ಸಿಖ್ ಭಾವನೆಗಳನ್ನು ಗೌರವಿಸುವುದನ್ನು ಖಚಿತಪಡಿಸಿಕೊಳ್ಳಲು ಸಿಖ್ ಸದಸ್ಯರನ್ನು ಸೆನ್ಸಾರ್ ಮಂಡಳಿಯಲ್ಲಿ ಸೇರ್ಪಡೆ ಮಾಡಬೇಕು’ ಎಂದು ಎಜ್​ಪಿಸಿ ಮುಖ್ಯಸ್ಥ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಜೀವನಪರ್ಯಂತ ವಿರೋಧ ಪಕ್ಷದಲ್ಲಿ ಕೂರಲು ರೆಡಿಯಾಗಿ; ರಾಹುಲ್ ಗಾಂಧಿ ವಿರುದ್ಧ ಕಂಗನಾ ರಣಾವತ್ ವಾಗ್ದಾಳಿ

ಅನುಪಮ್ ಖೇರ್, ಮಹಿಮಾ ಚೌಧರಿ, ಮಿಲಿಂದ್ ಸೋಮನ್, ವಿಶಾಕ್ ನಾಯರ್, ಸತೀಶ್ ಕೌಶಿಕ್ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾ ಸೆಪ್ಟೆಂಬರ್ 6ರಂದು ವಿಶ್ವಾದ್ಯಂತ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:54 am, Thu, 22 August 24

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ