ಲಾಕ್​ಡೌನ್​ ಎಫೆಕ್ಟ್​; ತೆರಿಗೆ ಕಟ್ಟಲೂ ಆಗದೆ ಒದ್ದಾಡುತ್ತಿದ್ದಾರೆ ಕಂಗನಾ ರಣಾವತ್​; ಅಳಲು ತೋಡಿಕೊಂಡ ನಟಿ

ಕಂಗನಾ ರಣಾವತ್​ ಬಾಲಿವುಡ್​ನ ಸ್ಟಾರ್​ ನಟಿಯರ ಸಾಲಿನಲ್ಲಿ ಮುಂಚೂಣಿಯಲ್ಲಿ ನಿಲ್ಲುತ್ತಾರೆ. ಸಾಕಷ್ಟು ಹಿಟ್​ ಚಿತ್ರಗಳನ್ನು ನೀಡಿದ ಖ್ಯಾತಿ ಅವರಿಗಿದೆ. ಸದ್ಯ, ಅವರ ಕೈಯಲ್ಲಿ ಮೂರು ಚಿತ್ರಗಳಿದ್ದು, ಪ್ರತಿ ಸಿನಿಮಾಗೂ ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುತ್ತಾರೆ.

ಲಾಕ್​ಡೌನ್​ ಎಫೆಕ್ಟ್​; ತೆರಿಗೆ ಕಟ್ಟಲೂ ಆಗದೆ ಒದ್ದಾಡುತ್ತಿದ್ದಾರೆ ಕಂಗನಾ ರಣಾವತ್​; ಅಳಲು ತೋಡಿಕೊಂಡ ನಟಿ
ಕಂಗನಾ
Follow us
ರಾಜೇಶ್ ದುಗ್ಗುಮನೆ
|

Updated on: Jun 09, 2021 | 12:38 PM

ಕೊರೊನಾ ವೈರಸ್​ ಎರಡನೇ ಅಲೆ ಜೋರಾಗಿರುವುದರಿಂದ ಬಹುತೇಕ ರಾಜ್ಯಗಳು ಲಾಕ್​ಡೌನ್​ ಘೋಷಣೆ ಮಾಡಿವೆ. ಇದರಿಂದ ಬಹುತೇಕ ಆರ್ಥಿಕ ಚಟುವಟಿಕೆ ನಿಂತಿದ್ದು, ಜನರು ಕೆಲಸ ಕಳೆದುಕೊಂಡು ಒದ್ದಾಡುತ್ತಿದ್ದಾರೆ. ಸಾಕಷ್ಟು ಕಲಾವಿದರು ಈ ಸಂದರ್ಭದಲ್ಲಿ ಆರ್ಥಿಕ ಮುಗ್ಗಟ್ಟಿಗೆ ಸಿಲುಕಿರುವ ಬಗ್ಗೆ ವಿಡಿಯೋ ಮಾಡಿ ಹಾಕಿದ್ದಾರೆ. ಈಗ ಸ್ಟಾರ್​ ಕಲಾವಿದರು ಕೂಡ ತಮ್ಮ ತೊಂದರೆ ಹೇಳಿಕೊಳ್ಳಲು ಆರಂಭಿಸಿದ್ದಾರೆ. ನಟಿ ಕಂಗನಾ ರಣಾವತ್​ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಒಂದನ್ನು ಹಾಕಿದ್ದು, ಟ್ಯಾಕ್ಸ್​ ಕಟ್ಟಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿಕೊಂಡಿದ್ದಾರೆ.

ಕಂಗನಾ ರಣಾವತ್​ ಬಾಲಿವುಡ್​ನ ಸ್ಟಾರ್​ ನಟಿಯರ ಸಾಲಿನಲ್ಲಿ ಮುಂಚೂಣಿಯಲ್ಲಿ ನಿಲ್ಲುತ್ತಾರೆ. ಸಾಕಷ್ಟು ಹಿಟ್​ ಚಿತ್ರಗಳನ್ನು ನೀಡಿದ ಖ್ಯಾತಿ ಅವರಿಗಿದೆ. ಸದ್ಯ, ಅವರ ಕೈಯಲ್ಲಿ ಮೂರು ಚಿತ್ರಗಳಿದ್ದು, ಪ್ರತಿ ಸಿನಿಮಾಗೂ ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಆದಾಗ್ಯೂ ಕಂಗನಾಗೆ ತೆರಿಗೆ ಕಟ್ಟೋಕೆ ಅಸಾಧ್ಯವಾಗಿದೆಯಂತೆ. ಕಳೆದ ವರ್ಷದ ತೆರಿಗೆಯಲ್ಲಿ ಅರ್ಧದಷ್ಟನ್ನು ಮಾತ್ರ ಅವರು ಪಾವತಿ ಮಾಡಿದ್ದಾರೆ. ಅಲ್ಲದೆ, ಹೀಗಾಗಿದ್ದು ಇದೇ ಮೊದಲು ಎಂದು ಹೇಳಿಕೊಂಡಿದ್ದಾರೆ.

ಕಂಗನಾ ಈ ಬಗ್ಗೆ ಇನ್​ಸ್ಟಾಗ್ರಾಂನಲ್ಲಿ ಸ್ಟೋರಿ ಒಂದನ್ನು ಹಾಕಿ ಈ ಬಗ್ಗೆ ಬರೆದುಕೊಂಡಿದ್ದಾರೆ. ‘ನನ್ನ ಒಟ್ಟು ಆದಾಯದಲ್ಲಿ ಶೇ.45 ತೆರಿಗೆ ಪಾವತಿ ಮಾಡುತ್ತೇನೆ. ಅತಿ ಹೆಚ್ಚು ತೆರಿಗೆ ಪಾವತಿ ಮಾಡುವ ನಟಿ ನಾನು. ಆದರೆ, ಕೆಲಸ ಇಲ್ಲದೆ, ಕಳೆದ ವರ್ಷದ ಅರ್ಧದಷ್ಟು ತೆರಿಗೆಯನ್ನು ಮಾತ್ರ ಪಾವತಿ ಮಾಡಿದ್ದೇನೆ. ಹೀಗಾಗಿದ್ದು ನನ್ನ ಜೀವನದಲ್ಲಿ ಇದೆ ಮೊದಲು’ ಎಂದಿದ್ದಾರೆ ಕಂಗನಾ .

ಈ ಮೊದಲಿನಿಂದಲೂ ಕಂಗನಾ ಮೋದಿ ಸರ್ಕಾರವನ್ನು ಬೆಂಬಲಿಸಿಕೊಂಡು ಬಂದಿದ್ದಾರೆ. ಸರ್ಕಾರದ ವಿರುದ್ಧ ಮಾತನಾಡಿದರೆ ಕಂಗನಾ ತಿರುಗಿ ಬೀಳುತ್ತಾರೆ. ಇಷ್ಟು ಕಷ್ಟವಿದ್ದರೂ ಮೋದಿ ಸರ್ಕಾರದ ಪರವಾಗಿಯೇ ಮಾತನಾಡಿದ್ದಾರೆ. ‘ನಾನು ತೆರಿಗೆ ಪಾವತಿ ಮಾಡುವುದು ವಿಳಂಬ ಮಾಡಿದರೆ ಸರ್ಕಾರ ಅದಕ್ಕೆ ಮತ್ತೆ ಬಡ್ಡಿ ವಿಧಿಸುತ್ತದೆ. ಇದನ್ನು ನಾನು ಸ್ವಾಗತಿಸುತ್ತೇನೆ. ಈ ಸಮಯ ನಮಗೆಲ್ಲರಿಗೂ ಕಠಿಣವಾಗಬಹುದು ಆದರೆ ನಾವು ಒಂದಾದರೆ ಸಮಯಕ್ಕಿಂತ ಕಠಿಣವಾಗಬಹುದು’ ಎಂದು ಸ್ಫೂರ್ತಿ ಮಾತುಗಳನ್ನಾಡಿದ್ದಾರೆ.

ಇದನ್ನೂ ಓದಿ:ಯಾಮಿ ಗೌತಮ್​ ಪೋಸ್ಟ್​ನಲ್ಲಿ ಕಂಗನಾ ಕಿರಿಕ್​; ಬಾಲಿವುಡ್​ ನಟನಿಗೆ ಚಪ್ಪಲಿ ತೋರಿಸುವ ಬಗ್ಗೆ ಮಾತನಾಡಿದ ನಟಿ 

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್