AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಕರ್ಣಿಕಾ ಮೂಲಕ ಮತ್ತೆ ಪ್ರೇಕ್ಷಕರ ಎದುರು ಬಂದ ನಟಿ ಕಂಗನಾ ರಣಾವತ್​!

ಕಂಗನಾ ಮಣಿಕರ್ಣಿಕಾ ಹೆಸರಿನ ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರಕ್ಕೆ ಅವರೇ ನಿರ್ದೇಶನ ಕೂಡ ಮಾಡಿದ್ದರು. ಈ ಚಿತ್ರಕ್ಕೆ ದೊಡ್ಡ ಮಟ್ಟದಲ್ಲಿ ಮೆಚ್ಚುಗೆ ವ್ಯಕ್ತವಾಗಿತ್ತು.

ಮಣಿಕರ್ಣಿಕಾ ಮೂಲಕ ಮತ್ತೆ ಪ್ರೇಕ್ಷಕರ ಎದುರು ಬಂದ ನಟಿ ಕಂಗನಾ ರಣಾವತ್​!
ಕಂಹನಾ ರಣಾವತ್​-ಮಣಿಕರ್ಣಿಕಾ ಪ್ರೊಡಕ್ಷನ್​ ಹೌಸ್
ರಾಜೇಶ್ ದುಗ್ಗುಮನೆ
|

Updated on: May 01, 2021 | 7:59 PM

Share

ಭಿನ್ನ ಪಾತ್ರಗಳ ಮೂಲಕ ಗಮನ ಸೆಳೆದವರು ನಟಿ ಕಂಗನಾ ರಣಾವತ್​. ಗ್ಯಾಂಗ್​ಸ್ಟರ್​ ಸಿನಿಮಾ ಮೂಲಕ ಬಣ್ಣದ ಬದುಕು ಆರಂಭಿಸಿದ ಅವರು, ಚಿತ್ರರಂಗದಲ್ಲಿ 15 ವರ್ಷ ಕಳೆದಿದ್ದಾರೆ. ಈಗ ಅವರು ಹೊಸ ಹೆಜ್ಜೆ ಇಟ್ಟಿದ್ದಾರೆ. ಇದೇ ಮೊದಲ ಬಾರಿ ಕಂಗನಾ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದಾರೆ.

ಟೀಕು ವೆಡ್ಸ್​ ಶೇರು ಹೆಸರಿನ ಸಿನಿಮಾವನ್ನು ಕಂಗನಾ ನಿರ್ಮಾಣ ಮಾಡುತ್ತಿದ್ದಾರೆ. ಒಟಿಟಿಯಲ್ಲಿ ಈ ಸಿನಿಮಾ ರಿಲೀಸ್​ ಆಗಲಿದೆ. ಹೆಸರೇ ಹೇಳುವಂತೆ ಈ ಚಿತ್ರ ಪ್ರೀತಿಯ ಕಥೆ ಹೇಳಲಿದೆ. ಶನಿವಾರ (ಮೇ 1) ತಮ್ಮ ಪ್ರೊಡಕ್ಷನ್​ ಹೌಸ್​ ಲೋಗೋ ಅನಾವರಣ ಮಾಡಿದ್ದಾರೆ ಕಂಗನಾ. ಮಣಿಕರ್ಣಿಕಾ ಫಿಲ್ಮ್ಸ್​​ ಎಂದು ಇದಕ್ಕೆ ಹೆಸರಿಡಲಾಗಿದೆ.

ಕಂಗನಾ ರಣಾವತ್​ ತುಂಬಾ ಕಷ್ಟದಿಂದ ಮೇಲೆ ಬಂದವರು. ಹೀಗಾಗಿ, ಹೊಸ ಪ್ರತಿಭೆಗಳಿಗೆ ಮಣೆ ಹಾಕಬೇಕು ಎನ್ನುವ ಆಲೋಚನೆ ಕಂಗನಾ ಅವರದ್ದು. ಅಲ್ಲದೆ, ಸಿನಿಮಾ ಕಥೆ ಕೂಡ ಬೇರೆಯದೇ ರೀತಿ ಇರಲಿದೆಯಂತೆ. ಅಂದಹಾಗೆ, ಈ ಸಿನಿಮಾದಲ್ಲಿ ಯಾರೆಲ್ಲ ನಟಿಸಲಿದ್ದಾರೆ ಎನ್ನುವ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.

ಕಂಗನಾ ಮಣಿಕರ್ಣಿಕಾ ಹೆಸರಿನ ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರಕ್ಕೆ ಅವರೇ ನಿರ್ದೇಶನ ಕೂಡ ಮಾಡಿದ್ದರು. ಈ ಚಿತ್ರಕ್ಕೆ ದೊಡ್ಡ ಮಟ್ಟದಲ್ಲಿ ಮೆಚ್ಚುಗೆ ವ್ಯಕ್ತವಾಗಿತ್ತು. ಈಗ ಅದೇ ಹೆಸರನ್ನು ಅವರು ತಮ್ಮ ಪ್ರೊಡಕ್ಷನ್​ ಹೌಸ್​ಗೆ ಇಟ್ಟಿರುವುದು ಭಾರೀ ಕುತೂಹಲ ಮೂಡಿಸಿದೆ.

ಕೊರೊನಾ ವೈರಸ್​ ಎರಡನೇ ಅಲೆಗೆ ಸಿನಿಮಾ ರಂಗ ಮತ್ತೆ ತೊಂದರೆಗೆ ಸಿಲುಕಿದೆ. ಕೆಲವೆಡೆ ಚಿತ್ರಮಂದಿರ ಮುಚ್ಚಲಾಗಿದೆ ಇದರಿಂದಾಗಿ ಅನೇಕ ಸಿನಿಮಾಗಳ ರಿಲೀಸ್​ ದಿನಾಂಕ ಮುಂದೂಡಲ್ಪಡುತ್ತಿದೆ. ಈ ಸಾಲಿಗೆ ಕಂಗನಾ ರಣಾವತ್​ ನಟನೆಯ ತಲೈವಿ ಸಿನಿಮಾ ಕೂಡ ಸೇರ್ಪಡೆ ಆಗಿತ್ತು. ಚಿತ್ರತಂಡದಿಂದ ಮುಂದಿನ ರಿಲೀಸ್​ ದಿನಾಂಕ ಯಾವಾಗ ಎಂಬುದು ಇನ್ನೂ ಅಧಿಕೃತವಾಗಿ ಘೋಷಣೆ ಆಗಿಲ್ಲ. ಕೊರೊನಾ ಪ್ರಕರಣಗಳು ಕಡಿಮೆ ಆದ ನಂತರದಲ್ಲಿ ಸಿನಿಮಾ ತೆರೆಗೆ ಬರಬಹುದು ಎಂದು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: ಶಾರುಖ್ ಖಾನ್​​​​​​ಗಿಂತ ನಾನು ಗ್ರೇಟ್​ ಎಂದ ಕಂಗನಾ ರಣಾವತ್​; ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್​

ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ