Kangana Ranaut: ‘ದಾರಿ ಬಿಡಿ.. ತಲೈವಿ ಬರ್ತಿದ್ದಾರೆ’; ಜಯಲಲಿತಾ ಜೀವನಾಧಾರಿತ ಸಿನಿಮಾ ಬಗ್ಗೆ ದೊಡ್ಡ ಸುದ್ದಿ ನೀಡಿದ ಕಂಗನಾ
Thalaivi Release Date: ಜಯಲಲಿತಾ ಬಯೋಪಿಕ್ ‘ತಲೈವಿ’ ಬಿಡುಗಡೆ ದಿನಾಂಕವನ್ನು ಕಂಗನಾ ರಣಾವತ್ ಬಹಿರಂಗಪಡಿಸಿದ್ದಾರೆ. ಈ ಸಿನಿಮಾದಲ್ಲಿ ಅವರು ಜಯಲಲಿತಾ ಪಾತ್ರಕ್ಕೆ ಬಣ್ಣ ಹಚ್ಚಿದ್ದು, ಹಲವು ಗೆಟಪ್ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ನಟಿ ಕಂಗನಾ ರಣಾವತ್ (Kangana Ranaut) ಅವರ ಅಭಿಮಾನಿಗಳು ‘ತಲೈವಿ’ (Thalaivi) ಚಿತ್ರದ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಈ ಸಿನಿಮಾ ಮೇಲೆ ದೊಡ್ಡಮಟ್ಟದ ನಿರೀಕ್ಷೆ ಇದೆ. ಹಲವು ಕಾರಣಗಳಿಗಾಗಿ ಇದು ಹೈಪ್ ಪಡೆದುಕೊಂಡಿದೆ. ತಮಿಳುನಾಡಿನ ಮಾಜಿ ಮುಖ್ಯಮಂತ್ರಿ, ಒಂದು ಕಾಲದ ಸ್ಟಾರ್ ನಟಿ ಜಯಲಲಿತಾ (Jayalalithaa) ಅವರ ಜೀವನವನ್ನು ಆಧರಿಸಿ ತಲೈವಿ ಸಿನಿಮಾ ಸಿದ್ಧವಾಗಿದೆ. ದೊಡ್ಡ ಪರದೆಯ ಮೇಲೆ ಈ ಬಯೋಪಿಕ್ (Biopic) ಕಣ್ತುಂಬಿಕೊಳ್ಳಬೇಕು ಎಂದು ಕಂಗನಾ ಮತ್ತು ಜಯಲಲಿತಾ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದಾರೆ. ಅವರಿಗಾಗಿ ಕಂಗನಾ ಗುಡ್ ನ್ಯೂಸ್ ನೀಡಿದ್ದಾರೆ. ‘ತಲೈವಿ’ ಚಿತ್ರದ ಬಿಡುಗಡೆ ದಿನಾಂಕವನ್ನು(Thalaivi Release Date) ಅವರು ಘೋಷಿಸಿದ್ದಾರೆ. ಸೆ.10ರಂದು ಈ ಸಿನಿಮಾ ರಿಲೀಸ್ ಆಗಲಿದೆ.
ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ಮೊದಲೇ ‘ತಲೈವಿ’ ಬಿಡುಗಡೆ ಆಗಿರಬೇಕಿತ್ತು. ಆದರೆ ಕೊರೊನಾ ವೈರಸ್ ಎರಡನೇ ಅಲೆ ಹಬ್ಬಿದ್ದರಿಂದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿತ್ತು. ನಿರ್ದಿಷ್ಟವಾಗಿ ಯಾವಾಗ ಚಿತ್ರ ರಿಲೀಸ್ ಆಗಲಿದೆ ಎಂಬ ಬಗ್ಗೆ ಖಚಿತತೆ ಇರಲಿಲ್ಲ. ಅದಕ್ಕೀಗ ಕಂಗನಾ ಉತ್ತರ ನೀಡಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್ ಖಾತೆ ಮೂಲಕ ಅವರು ‘ತಲೈವಿ’ ಬಿಡುಗಡೆ ದಿನಾಂಕವನ್ನು ಬಹಿರಂಗಪಡಿಸಿದ್ದಾರೆ. ಈ ಸಿನಿಮಾದಲ್ಲಿ ಅವರು ಜಯಲಲಿತಾ ಪಾತ್ರಕ್ಕೆ ಬಣ್ಣ ಹಚ್ಚಿದ್ದು, ಹಲವು ಗೆಟಪ್ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಭಾರತದ ರಾಜಕಾರಣದಲ್ಲಿ ಜಯಲಲಿತಾ ಹೆಸರು ದೊಡ್ಡದು. ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅವರು ಜನಮನ ಗೆದ್ದಿದ್ದರು. ಅದಕ್ಕೂ ಮುನ್ನ ಸಿನಿಮಾ ನಟಿಯಾಗಿ ಕೂಡ ಪ್ರೇಕ್ಷಕರನ್ನು ಅವರು ರಂಜಿಸಿದ್ದರು. ಹೀಗೆ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿದ್ದ ಜಯಲಲಿತಾ ಅವರು ವೈಯಕ್ತಿಕ ಜೀವನದಲ್ಲಿ ಹಲವು ಏರು-ಪೇರುಗಳನ್ನು ಕಂಡಿದ್ದರು. ಸಿನಿಮಾ ಮತ್ತು ರಾಜಕೀಯದಲ್ಲಿ ಅವರ ಜರ್ನಿ ಅಷ್ಟು ಸುಲಭದ್ದಾಗಿರಲಿಲ್ಲ. ಅದನ್ನು ಈಗ ‘ತಲೈವಿ’ ಸಿನಿಮಾ ಮೂಲಕ ತೆರೆಮೇಲೆ ತೋರಿಸಲಾಗುತ್ತಿದೆ.
‘ಇಂಥ ಮಹಾನ್ ವ್ಯಕ್ತಿತ್ವದ ಕಥೆಯನ್ನು ದೊಡ್ಡ ಪರದೆಯಲ್ಲೇ ನೋಡಬೇಕು. ಸಿನಿಮಾ ಜಗತ್ತಿಗೆ ಸೂಪರ್ ಸ್ಟಾರ್ ರೀತಿ ಎಂಟ್ರಿ ನೀಡಲು ಸಜ್ಜಾಗಿರುವ ತಲೈವಿಗೆ ದಾರಿ ಬಿಡಿ. ಸೆ.10ರಂದು ನಿಮ್ಮ ಹತ್ತಿರದ ಚಿತ್ರಮಂದಿರದಲ್ಲಿ ತಲೈವಿ ಬಿಡುಗಡೆ ಆಗಲಿದೆ’ ಎಂದು ಕಂಗನಾ ಬರೆದುಕೊಂಡಿದ್ದಾರೆ. ಇದರೊಂದಿಗೆ ಅವರು ಹೊಸ ಪೋಸ್ಟರ್ ಹಂಚಿಕೊಂಡಿದ್ದು, ಅದು ಕೂಡ ವೈರಲ್ ಆಗುತ್ತಿದೆ.
View this post on Instagram
ಎಂ.ಜಿ. ರಾಮಚಂದ್ರನ್ ಪಾತ್ರದಲ್ಲಿ ಅರವಿಂದ್ ಸ್ವಾಮಿ ನಟಿಸಿದ್ದಾರೆ. ಎಂ. ಕರುಣಾನಿಧಿಯಾಗಿ ನಾಸರ್ ಬಣ್ಣ ಹಚ್ಚಿದ್ದಾರೆ. ಭಾಗ್ಯಶ್ರೀ, ಸಮುದ್ರಖಣಿ ಮುಂತಾದವರು ಕೂಡ ಪ್ರಮುಖ ಪಾತ್ರಗಳಲ್ಲಿ ಇದ್ದಾರೆ. ಖ್ಯಾತ ನಿರ್ದೇಶಕ ಎ.ಎಲ್. ವಿಜಯ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ಅವರು ಚಿತ್ರಕಥೆ ಬರೆದಿದ್ದಾರೆ. ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ‘ತಲೈವಿ’ ಬಿಡುಗಡೆ ಆಗಲಿದೆ.
ಇದನ್ನೂ ಓದಿ:
Kangana Ranaut: ವಾಯುಸೇನೆ ಸಮವಸ್ತ್ರ ಧರಿಸಿದ ಕಂಗನಾ ರಣಾವತ್ ಫೋಟೋ ವೈರಲ್
ಇಂದಿರಾ ಗಾಂಧಿ ಪಾತ್ರದಲ್ಲಿ ಕಿರಿಕ್ ನಟಿ ಕಂಗನಾ ರಣಾವತ್; ಹೊಸ ಸಿನಿಮಾ ಹೆಸರು ‘ಎಮರ್ಜೆನ್ಸಿ’