ಚಿತ್ರಮಂದಿರದಲ್ಲೇ ರಿಲೀಸ್​ ಆಗಲಿದೆ ಜಯಲಲಿತಾ ಬಯೋಪಿಕ್​ ತಲೈವಿ; ಗಾಸಿಪ್​ಗೆ ಕಂಗನಾ ಫುಲ್​ಸ್ಟಾಪ್​

Thalaivi Release Date: ‘ತಲೈವಿ’ ಚಿತ್ರದ ರಿಲೀಸ್​ ಡೇಟ್​ ಬಗ್ಗೆ ಹಬ್ಬಿದ್ದ ಊಹಾಪೋಹಗಳಿಗೆ ಕಂಗನಾ ರಣಾವತ್​ ಅವರು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಅವರು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ.

ಚಿತ್ರಮಂದಿರದಲ್ಲೇ ರಿಲೀಸ್​ ಆಗಲಿದೆ ಜಯಲಲಿತಾ ಬಯೋಪಿಕ್​ ತಲೈವಿ; ಗಾಸಿಪ್​ಗೆ ಕಂಗನಾ ಫುಲ್​ಸ್ಟಾಪ್​
ತಲೈವಿ ಸಿನಿಮಾದಲ್ಲಿ ಕಂಗನಾ ರಣಾವತ್​
Follow us
TV9 Web
| Updated By: ಮದನ್​ ಕುಮಾರ್​

Updated on: Jul 13, 2021 | 6:37 PM

ಬಾಲಿವುಡ್​ ನಟಿ ಕಂಗನಾ ರಣಾವತ್​ (Kangana Ranaut) ಅಭಿನಯಿಸಿರುವ ‘ತಲೈವಿ’ (Thalaivi) ಸಿನಿಮಾ ಬಗ್ಗೆ ಇತ್ತೀಚೆಗೆ ಒಂದು ಗಾಸಿಪ್​ ಹಬ್ಬಿತ್ತು. ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ (Jayalalitha) ಅವರ ಬಯೋಪಿಕ್​ (Biopic) ಆಗಿ ಮೂಡಿಬರುತ್ತಿರುವ ಈ ಸಿನಿಮಾ ನೇರವಾಗಿ ಓಟಿಟಿಯಲ್ಲಿ ಬಿಡುಗಡೆ ಆಗಲಿದೆ ಎಂದು ಹೇಳಲಾಗುತ್ತಿತ್ತು. ಆದರೆ ಆ ಮಾಹಿತಿಯನ್ನು ಕಂಗನಾ ರಣಾವತ್​ ಅಲ್ಲಗಳೆದಿದ್ದಾರೆ. ಚಿತ್ರಮಂದಿರಗಳಲ್ಲೇ ‘ತಲೈವಿ’ ಚಿತ್ರ ರಿಲೀಸ್​ ಆಗಲಿದೆ ಎಂದು ಅವರು ಖಚಿತ ಪಡಿಸಿದ್ದಾರೆ.

ಈ ಬಗ್ಗೆ ಕಂಗನಾ ಅವರು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ. ‘ತಲೈವಿ ಸಿನಿಮಾದ ರಿಲೀಸ್​ ಡೇಟ್​ ಇನ್ನೂ ಅಂತಿಮವಾಗಿಲ್ಲ. ಈ ಸಂಬಂಧ ಯಾವುದೇ ಗಾಸಿಪ್​ಗಳಿಗೆ ಕಿವಿಗೊಡಬೇಡಿ. ದೇಶಾದ್ಯಂತ ಚಿತ್ರಮಂದಿರಗಳು ಓಪನ್​ ಆದಾಗ ನಾವು ಈ ಚಿತ್ರವನ್ನು ಬಿಡುಗಡೆ ಮಾಡುತ್ತೇವೆ’ ಎಂದು ಕಂಗನಾ ಸ್ಪಷ್ಟನೆ ನೀಡಿದ್ದಾರೆ.

ಈಗಾಗಲೇ ಬಿಡುಗಡೆ ಆಗಿರುವ ಪೋಸ್ಟರ್​ ಮತ್ತು ಟೀಸರ್​ಗಳ ಮೂಲಕ ‘ತಲೈವಿ’ ಚಿತ್ರ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟುಹಾಕಿದೆ. ಜಯಲಲಿತಾ ಪಾತ್ರಕ್ಕಾಗಿ ಕಂಗನಾ ಅವರು ಅನೇಕ ಟ್ರಾನ್ಸ್​ಫಾರ್ಮೇಷನ್​​ಗೆ ಒಳಗಾಗಿದ್ದಾರೆ. ಜಯಲಲಿತಾ ಗೆಟಪ್​ನಲ್ಲಿ ಕಂಗನಾ ಕಾಣಿಸಿಕೊಂಡಿರುವ ಪೋಸ್ಟರ್​ಗಳಿಗೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ. ಬಾಲಿವುಡ್​ ಮಾತ್ರವಲ್ಲದೆ, ದಕ್ಷಿಣ ಭಾರತದ ಅನೇಕ ಖ್ಯಾತ ನಟರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಅರವಿಂದ್​ ಸ್ವಾಮಿ, ನಾಸರ್​, ಭಾಗ್ಯಶ್ರೀ, ಸಮುದ್ರಖಣಿ ಮುಂತಾದವರು ಬಣ್ಣ ಹಚ್ಚಿದ್ದಾರೆ.

ಹಿಂದಿ ಮಾತ್ರವಲ್ಲದೆ, ತಮಿಳು ಮತ್ತು ತೆಲುಗಿನಲ್ಲೂ ಈ ಸಿನಿಮಾ ಬಿಡುಗಡೆ ಆಗಲಿದೆ. ‘ತಲೈವಿ’ಗೆ ಖ್ಯಾತ ನಿರ್ದೇಶಕ ಎ.ಎಲ್​. ವಿಜಯ್​ ನಿರ್ದೇಶನ ಮಾಡಿದ್ದಾರೆ. ವಿಜಯೇಂದ್ರ ಪ್ರಸಾದ್ ಅವರು ಚಿತ್ರಕಥೆ ಬರೆದಿದ್ದಾರೆ. ದೊಡ್ಡ ಕ್ಯಾನ್ವಾಸ್​ನಲ್ಲಿ ಚಿತ್ರ ಮೂಡಿಬಂದಿದ್ದು, ದೊಡ್ಡ ಪರದೆಯಲ್ಲಿ ಕಣ್ತುಂಬಿಕೊಳ್ಳಲು ಜಯಲಲಿತಾ ಅಭಿಮಾನಿಗಳು ಕಾದಿದ್ದಾರೆ.

ಸದಾ ಕಿರಿಕ್​ನಲ್ಲಿಯೇ ತೊಡಗಿಕೊಂಡಿರುವ ಕಂಗನಾ ರಣಾವತ್​ ಅವರಿಗೆ ಹಲವು ಸಿನಿಮಾ ಆಫರ್​ಗಳು ಕೈ ಬೀಸಿ ಕರೆಯುತ್ತಿವೆ. ‘ತಲೈವಿ’ ಬಳಿಕ ‘ತೇಜಸ್​’, ‘ಮಣಿಕರ್ಣಿಕಾ ರಿಟರ್ನ್ಸ್​’ ಹಾಗೂ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜೀವನಾಧಾರಿತ ಸಿನಿಮಾದಲ್ಲೂ ಕಂಗನಾ ನಟಿಸುತ್ತಿದ್ದಾರೆ. ಇಂದಿರಾ ಗಾಂಧಿ ಬಯೋಪಿಕ್​ಗೆ ‘ಎಮರ್ಜೆನ್ಸಿ’ ಎಂದು ಹೆಸರು ಇಡಲಾಗಿದೆ. ಅದರಲ್ಲಿ ಇಂದಿರಾ ಗಾಂಧಿ ಪಾತ್ರವನ್ನು ಕಂಗನಾ ನಿಭಾಯಿಸುವುದು ಮಾತ್ರವಲ್ಲದೆ, ಸ್ವತಃ ಅವರೇ ನಿರ್ದೇಶನ ಕೂಡ ಮಾಡಲಿದ್ದಾರೆ.

ಇದನ್ನೂ ಓದಿ:

ಹಿಂದು-ಮುಸ್ಲಿಂ ಮದುವೆಯಾದ್ರೆ ಮಕ್ಕಳು ಮುಸ್ಲಿಂ ಆಗ್ತಾರೆ; ಹಿಂದು ಆಗಲ್ಲ ಯಾಕೆ? ಕಂಗನಾ ಪ್ರಶ್ನೆ

ಇಂದಿರಾ ಗಾಂಧಿ ಪಾತ್ರದಲ್ಲಿ ಕಿರಿಕ್ ನಟಿ ಕಂಗನಾ ರಣಾವತ್​; ಹೊಸ ಸಿನಿಮಾ ಹೆಸರು ‘ಎಮರ್ಜೆನ್ಸಿ’

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್