AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿರ್ದೇಶಕರು ತಪ್ಪು ಮಾಡಿದರು ಎಂದು ನನಗನಿಸಿತು’; ‘ತಲೈವಿ’ ಬಗ್ಗೆ ಕಂಗನಾ ರಣಾವತ್​ ಅಚ್ಚರಿಯ ಹೇಳಿಕೆ

‘ತಲೈವಿ’ ಸಿನಿಮಾದಲ್ಲಿ ಜಯಲಲಿತಾ ಪಾತ್ರವನ್ನು ಕಂಗನಾ ನಿರ್ವಹಿಸಿದ್ದಾರೆ. ಸಿನಿಮಾದಲ್ಲಿ ಜಯಲಲಿತಾ ರೀತಿಯಲ್ಲೇ ಕಾಣುತ್ತಿದ್ದಾರೆ ಕಂಗನಾ. ಆರಂಭದಲ್ಲಿ ಕಂಗನಾಗೆ ಈ ನಂಬಿಕೆ ಇರಲಿಲ್ಲ. ನಿರ್ದೇಶಕರು ತಪ್ಪು ಮಾಡಿದರು ಎಂದು ಅವರಿಗೆ ಅನಿಸಿತ್ತು.  

‘ನಿರ್ದೇಶಕರು ತಪ್ಪು ಮಾಡಿದರು ಎಂದು ನನಗನಿಸಿತು’; ‘ತಲೈವಿ’ ಬಗ್ಗೆ ಕಂಗನಾ ರಣಾವತ್​ ಅಚ್ಚರಿಯ ಹೇಳಿಕೆ
‘ನಿರ್ದೇಶಕರು ತಪ್ಪು ಮಾಡಿದರು ಎಂದು ನನಗನಿತು’; ‘ತಲೈವಿ’ ಬಗ್ಗೆ ಕಂಗನಾ ರಣಾವತ್​ ಅಚ್ಚರಿಯ ಹೇಳಿಕೆ
TV9 Web
| Edited By: |

Updated on:Sep 08, 2021 | 3:57 PM

Share

ಕಂಗನಾ ರಣಾವತ್​ ನಟನೆಯ ‘ತಲೈವಿ’ ಸಿನಿಮಾ ಶುಕ್ರವಾರ (ಸೆಪ್ಟೆಂಬರ್ 10) ರಿಲೀಸ್​ ಆಗುತ್ತಿದೆ. ಈ ಸಿನಿಮಾ ಜಯಲಲಿತಾ ಬಯೋಪಿಕ್​ ಎನ್ನುವ ಕಾರಣಕ್ಕೆ ಬಹಳ ಮಹತ್ವ ಪಡೆದುಕೊಂಡಿದೆ. ಚಿತ್ರರಂಗದ ಹಿನ್ನೆಲೆಯಿಂದ ಬಂದ ಜಯಲಲಿತಾ ನಂತರ ತಮಿಳುನಾಡು ರಾಜಕೀಯದಲ್ಲಿ ಹೊಸ ಅಲೆ ಸೃಷ್ಟಿಸಿದರು. ಈಗ ಅವರ ಬಗ್ಗೆ ಬಯೋಪಿಕ್​ ಸಿದ್ಧಗೊಂಡಿರುವುದು ಸಹಜವಾಗಿಯೇ ಹೈಪ್​ ಪಡೆದುಕೊಂಡಿದೆ. ಸಿನಿಮಾ ರಿಲೀಸ್​ಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಕಂಗನಾ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ತಮಿಳುನಾಡಿನಲ್ಲಿ ಅಮ್ಮ ಎಂದೇ ಖ್ಯಾತಿ ಪಡೆದವರು ಜಯಲಲಿತಾ. ಅವರು ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಅವರು ಮೃತಪಟ್ಟಾಗ ಆದ ಶಾಕ್​ನಿಂದ ಅನೇಕರು ಆತ್ಮಹತ್ಯೆ ಮಾಡಿಕೊಂಡ ಉದಾಹರಣೆ ಕೂಡ ಇದೆ. ಈಗಾಗಲೇ ರಿಲೀಸ್​ ಆಗಿರುವ ಸಿನಿಮಾದ ಪೋಸ್ಟರ್​, ಟ್ರೇಲರ್​ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಈಗ ಅವರ ಜೀವನ ಆಧರಿಸಿ ಸಿನಿಮಾ ಸಿದ್ಧಗೊಂಡಿದ್ದು, ಜಯಲಲಿತಾ ಪಾತ್ರವನ್ನು ಕಂಗನಾ ನಿರ್ವಹಿಸಿದ್ದಾರೆ. ಸಿನಿಮಾದಲ್ಲಿ ಜಯಲಲಿತಾ ರೀತಿಯಲ್ಲೇ ಕಾಣುತ್ತಿದ್ದಾರೆ ಕಂಗನಾ. ಆರಂಭದಲ್ಲಿ ಕಂಗನಾಗೆ ಈ ನಂಬಿಕೆ ಇರಲಿಲ್ಲ. ನಿರ್ದೇಶಕರು ತಪ್ಪು ಮಾಡಿದರು ಎಂದು ಅವರಿಗೆ ಅನಿಸಿತ್ತು.

‘ತಲೈವಿಯ ಪಾತ್ರಕ್ಕೆ ನನ್ನ ಆಯ್ಕೆ ಮಾಡಿ ನಿರ್ದೇಶಕರು ತಪ್ಪು ಮಾಡಿದರು ಎಂದು ನನಗೆ ಅನ್ನಿಸಿತು. ನಾನು ಈ ಪಾತ್ರಕ್ಕೆ ಸೂಕ್ತಳಲ್ಲ ಎಂದೇ ಭಾವಿಸಿದ್ದೆ. ಒಂದೊಮ್ಮೆ ನಾನು ಜಯಲಲಿತಾ ರೀತಿಯಲ್ಲಿ ಕಾಣದಿದ್ದರೆ ತಮಿಳುನಾಡಿನ ಜನ ನನ್ನ ವಿರುದ್ಧ ಧಂಗೆ ಏಳುತ್ತಾರೆ. ಚಿತ್ರಮಂದಿರಗಳನ್ನು ಸುಡುವ ಸಾಧ್ಯತೆಯೂ ಇರುತ್ತದೆ ಎನ್ನುವ ಭಯದಲ್ಲಿದೆ’ ಎಂದಿದ್ದಾರೆ ಕಂಗನಾ.

ಈ ಸಿನಿಮಾಗಾಗಿ ಕಂಗನಾ ಸಾಕಷ್ಟು ತೂಕ ಹೆಚ್ಚಿಸಿಕೊಂಡಿದ್ದರು. ಈ ವಿಚಾರ ಕೂಡ ಕಂಗನಾ ಅವರನ್ನು ಚಿಂತೆಗೆ ಈಡು ಮಾಡಿತ್ತು. ‘ನಿರ್ದೇಶಕರು ಬಂದು ನೀವು ತೂಕ ಹೆಚ್ಚಿಸಿಕೊಳ್ಳಬೇಕು ಎಂದಾಗ ನನಗೆ ಚಿಂತೆ ಆಯಿತು. ಒಂದು ಸಿನಿಮಾಗಾಗಿ 20 ಕೆಜಿ ಹೆಚ್ಚಿಸಿಕೊಳ್ಳುವುದು ಎಂದರೆ ಸುಲಭದ ಮಾತಲ್ಲ. ಆದರೆ ಪಾತ್ರಕ್ಕಾಗಿ ಎಲ್ಲವನ್ನೂ ಮಾಡಿದ್ದೇನೆ’ ಎಂದಿದ್ದಾರೆ ಅವರು.

‘ತಲೈವಿ’ ಸಿನಿಮಾದಲ್ಲಿ ಎಂ.ಜಿ.ಆರ್​. ಪಾತ್ರದಲ್ಲಿ ಅರವಿಂದ್​ ಸ್ವಾಮಿ ನಟಿಸಿದ್ದಾರೆ. ಕರುಣಾನಿಧಿ ಪಾತ್ರದಲ್ಲಿ ಪ್ರಕಾಶ್ ರಾಜ್​ ಬಣ್ಣ ಹಚ್ಚಿದ್ದಾರೆ.  ವಿಜಯ್​ ಈ ಸಿನಿಮಾ ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ: ‘ಕಂಗನಾ ರಣಾವತ್​ ‘ತಲೈವಿ’ಗೆ ಐದು ರಾಷ್ಟ್ರ ಪ್ರಶಸ್ತಿ ಬರಲೇಬೇಕು, ಇಲ್ಲವಾದರೆ ಬೇಸರವಾಗುತ್ತದೆ’

Published On - 3:10 pm, Wed, 8 September 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್