AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ಕಂಗನಾ ರಣಾವತ್​ಗೆ ಕೊರೊನಾ ಪಾಸಿಟಿವ್​; ಇದೊಂದು ಸಣ್ಣ ಜ್ವರ ಎಂದ ನಟಿ

Coronavirus Positive: ಸದ್ಯ ಕಂಗನಾ ರಣಾವತ್​ ಮನೆಯಲ್ಲೇ ಕ್ವಾರಂಟೈನ್​ ಆಗಿದ್ದಾರೆ. ನನ್ನ ದೇಹದೊಳಗೆ ಈ ವೈರಸ್​ ಇದೆ ಎಂಬುದು ತಿಳಿದಿರಲಿಲ್ಲ. ಈಗ ನಾನು ಇದನ್ನು ನಾಶ ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ.

Kangana Ranaut: ಕಂಗನಾ ರಣಾವತ್​ಗೆ ಕೊರೊನಾ ಪಾಸಿಟಿವ್​; ಇದೊಂದು ಸಣ್ಣ ಜ್ವರ ಎಂದ ನಟಿ
ಕಂಗನಾ ರಣಾವತ್
ಮದನ್​ ಕುಮಾರ್​
|

Updated on: May 08, 2021 | 11:33 AM

Share

ಚಿತ್ರರಂಗದ ಹಲವರಿಗೆ ಕೊರೊನಾ ವೈರಸ್​ ತಗುಲುತ್ತಿದೆ. ಈಗ ನಟಿ ಕಂಗನಾ ರಣಾವತ್​ ಅವರಿಗೂ ಕೊವಿಡ್​ ಪಾಸಿಟಿವ್​ ಆಗಿದೆ. ಈ ಬಗ್ಗೆ ಅವರು ಸೋಶಿಯಲ್​ ಮೀಡಿಯಾ ಮೂಲಕ ಮಾಹಿತಿ ನೀಡಿದ್ದಾರೆ. ‘ಕಳೆದ ಕೆಲವು ದಿನಗಳಿಂದ ಸುಸ್ತಾಗುತ್ತಿತ್ತು. ಕಣ್ಣುಗಳು ಉರಿಯುತ್ತಿದ್ದವು. ಹಿಮಾಚಲ ಪ್ರದೇಶಕ್ಕೆ ಹೋಗಬೇಕು ಅಂದುಕೊಂಡಿದ್ದೆ. ಹಾಗಾಗಿ ಟೆಸ್ಟ್​ ಮಾಡಿಸಿದೆ. ಪಾಸಿಟಿವ್​ ವರದಿ ಬಂದಿದೆ’ ಎಂದು ಅವರು ಹೇಳಿಕೊಂಡಿದ್ದಾರೆ.

ಸದ್ಯ ಕಂಗನಾ ಮನೆಯಲ್ಲೇ ಕ್ವಾರಂಟೈನ್​ ಆಗಿದ್ದಾರೆ. ‘ನನ್ನ ದೇಹದೊಳಗೆ ಈ ವೈರಸ್​ ಇದೆ ಎಂಬುದು ತಿಳಿದಿರಲಿಲ್ಲ. ಈಗ ನಾನು ಇದನ್ನು ನಾಶ ಮಾಡುತ್ತೇನೆ. ಹೆದರಿಕೊಂಡರೆ ಇದು ಮತ್ತಷ್ಟು ಹೆದರಿಸುತ್ತದೆ. ಎಲ್ಲರೂ ಇದನ್ನು ನಾಶ ಮಾಡೋಣ. ಕೊವಿಡ್​-19 ಎಂದರೆ ಸಣ್ಣ ಜ್ವರವಲ್ಲದೇ ಮತ್ತೇನೂ ಅಲ್ಲ’ ಎಂದು ಕಂಗನಾ ಬರೆದುಕೊಂಡಿದ್ದಾರೆ.

ಕಂಗನಾ ರಣಾವತ್​ ಈ ಹಿಂದೆ ಅನೇಕ ಬಾರಿ ಸಾರ್ವಜನಿಕವಾಗಿ ಓಡಾಡುವಾಗ ಮಾಸ್ಕ್​ ಧರಿಸಿರಲಿಲ್ಲ. ಆ ಕಾರಣದಿಂದ ಅವರನ್ನು ಹಲವರು ಟೀಕಿಸಿದ್ದರು. ಈಗ ಅವರಿಗೆ ಕೊವಿಡ್​ ಪಾಸಿಟಿವ್​ ಆಗಿದೆ. ಕಂಗನಾ ಬೇಗ ಗುಣಮುಖರಾಗಲಿ ಎಂದು ಅವರ ಅಭಿಮಾನಿಗಳು ಕಮೆಂಟ್​ಗಳ ಮೂಲಕ ಹಾರೈಸುತ್ತಿದ್ದಾರೆ. ಅನೇಕ ಸೆಲೆಬ್ರಿಟಿಗಳು ಈಗಾಗಲೇ ಕೊರೊನಾದಿಂದ ಮೃತರಾಗಿದ್ದಾರೆ. ಆದ್ದರಿಂದ ಕೊರೊನಾ ಎಂಬ ಪದ ಕೇಳಿದರೆ ಭಯ ಬೀಳುವಂತಹ ವಾತಾವರಣ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಧೈರ್ಯವೇ ಮುಖ್ಯ ಎಂಬುದನ್ನು ಕಂಗನಾ ಒತ್ತಿ ಹೇಳುತ್ತಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಸದಾ ಆ್ಯಕ್ಟೀವ್​ ಆಗಿರುವ ಕಂಗನಾಗೆ ಇತ್ತೀಚೆಗೆ ಟ್ವಿಟರ್ ಶಾಕ್​ ನೀಡಿತ್ತು. ಪದೇಪದೇ ಆಕ್ಷೇಪಾರ್ಹ ಟ್ವೀಟ್​ಗಳನ್ನು ಮಾಡಿದ ಕಾರಣಕ್ಕಾಗಿ ಅವರ ಟ್ವಿಟರ್​ ಖಾತೆಯನ್ನು ಶಾಶ್ವತವಾಗಿ ಸಸ್ಪೆಂಡ್​ ಮಾಡಲಾಗಿತ್ತು. ಸದ್ಯ ಅವರು ತಮ್ಮ ಅಭಿಪ್ರಾಯಗಳನ್ನು ತಿಳಿಸಲು ಹೆಚ್ಚಾಗಿ ಇನ್​ಸ್ಟಾಗ್ರಾಮ್​ ಬಳಸುತ್ತಿದ್ದಾರೆ.

ಇದನ್ನೂ ಓದಿ:

Kangana Ranaut: ಕಂಗನಾ ರಣಾವತ್​ ಟ್ವಿಟರ್​ ಖಾತೆ ಸಸ್ಪೆಂಡ್​; ವಿಡಿಯೋ ಮೂಲಕ ಕಣ್ಣೀರು ಹಾಕಿದ ನಟಿ

ಸೋನು ಸೂದ್​ಗೆ ಫ್ರಾಡ್​ ಎಂದ ಕಂಗನಾ; ಈ ಸಮಯದಲ್ಲಿ ದುಡ್ಡು ಮಾಡ್ತಿದ್ದಾರಾ ರಿಯಲ್​ ಹೀರೋ?

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?