ಅನಾರೋಗ್ಯಕ್ಕೆ ತುತ್ತಾಗಿದ್ದರೂ ಕಂಗನಾ ಇಂಥಾ ದೊಡ್ಡ ರಿಸ್ಕ್ ತೆಗೆದುಕೊಂಡ್ರಾ?

ಜಯಲಲಿತಾ ಪಾತ್ರಕ್ಕಾಗಿ ಕಂಗನಾ 20 ಕೆಜಿ ದೇಹದ ತೂಕ ಹೆಚ್ಚಿಸಿಕೊಂಡು ಮತ್ತೆ ಸ್ಲಿಮ್​ ಆಗಿದ್ದರು. ಸಿನಿಮಾಕ್ಕಾಗಿ ಅವರು ತೆಗೆದುಕೊಂಡ ಮತ್ತೊಂದು ರಿಸ್ಕ್​ನ ವಿಚಾರ ಈಗ ಹೊರಬಿದ್ದಿದೆ. 

ಅನಾರೋಗ್ಯಕ್ಕೆ ತುತ್ತಾಗಿದ್ದರೂ ಕಂಗನಾ ಇಂಥಾ ದೊಡ್ಡ ರಿಸ್ಕ್ ತೆಗೆದುಕೊಂಡ್ರಾ?
ಶೀಘ್ರವೇ ಹಾಲಿವುಡ್​ಗೆ ಹಾರಲಿದ್ದಾರೆ ಕಂಗನಾ? ಬಾಲಿವುಡ್​ ಅಂಗಳದಲ್ಲಿ ಹೊಸ ಸುದ್ದಿ
Follow us
ರಾಜೇಶ್ ದುಗ್ಗುಮನೆ
| Updated By: ganapathi bhat

Updated on: Apr 04, 2021 | 7:12 PM

ಕಂಗನಾ ರಣಾವತ್ ಪ್ರತಿ ಸಿನಿಮಾಗೂ ಸಾಕಷ್ಟು ಸಿದ್ಧತೆ ಮಾಡಿಕೊಳ್ಳುತ್ತಾರೆ. ಸಿನಿಮಾದಲ್ಲಿರುವ ಪಾತ್ರ ಯಾವ ಅಂಶ ಕೇಳುತ್ತದೆಯೋ ಅದನ್ನು ಈಡೇರಿಸುತ್ತಾರೆ. ತಲೈವಿ ಸಿನಿಮಾಗೆ ಕಂಗನಾ ತೆಗೆದುಕೊಂಡ ದೊಡ್ಡ ರಿಸ್ಕ್​ ವಿಚಾರ ಒಂದು ಈಗ ರಿವೀಲ್​ ಆಗಿದೆ. ಈ ವಿಚಾರ ಕೇಳಿದ ಅಭಿಮಾನಿಗಳು ಕಂಗನಾ ಅವರನ್ನು ಹೊಗಳುತ್ತಿದ್ದಾರೆ. ಜಯಲಲಿತಾ ಪಾತ್ರಕ್ಕಾಗಿ ಕಂಗನಾ 20 ಕೆಜಿ ದೇಹದ ತೂಕ ಹೆಚ್ಚಿಸಿಕೊಂಡು ಮತ್ತೆ ಸ್ಲಿಮ್​ ಆಗಿದ್ದರು. ಆ ಟ್ರಾನ್ಸ್​ಫಾರ್ಮೇಷನ್​ ನೋಡಿ ಅನೇಕರು ಮೆಚ್ಚಿಕೊಂಡಿದ್ದರು. ಈಗ ಸಿನಿಮಾಕ್ಕಾಗಿ ಅವರು ತೆಗೆದುಕೊಂಡ ಮತ್ತೊಂದು ರಿಸ್ಕ್​ನ ವಿಚಾರ ಹೊರ ಬಿದ್ದಿದೆ.

ತಲೈವಿ ಸಿನಿಮಾದಲ್ಲಿ ಇಲಾ ಇಲಾ ಹೆಸರಿನ ಹಾಂಡೊಂದು ಬರುತ್ತದೆ. ಈ ಹಾಡಿನ ಬಹುತೇಕ ಶೂಟಿಂಗ್​ ನೀರಿನಲ್ಲೇ ನಡೆದಿದೆಯಂತೆ. ಈ ಹಾಡಿಗಾಗಿ 16 ಗಂಟೆಗಳ ಕಾಲ ಕಂಗನಾ ಒದ್ದೇಯಾಗೇ ಇದ್ದರು. ಈ ವೇಳೆ ಅವರು ತೀವ್ರವಾಗಿ ಅನಾರೋಗ್ಯಕ್ಕೆ ತುತ್ತಾಗಿದ್ದರು. ಇದನ್ನು ಲೆಕ್ಕಿಸದೇ ಅವರು ನೀರಿನಲ್ಲಿ ಇದ್ದಿದ್ದು ಚಿತ್ರತಂಡದವರಿಗೇ ಅಚ್ಚರಿ ತಂದಿತ್ತು.

ತಲೈವಿ ಸಿನಿಮಾದ ಈ ವಿಶೇಷ ಸಾಂಗ್​​ ಶೂಟ್​ ಮಾಡೋಕೆ ಚಿತ್ರತಂಡ ಸೆಟ್​ ಸಿದ್ಧಪಡಿಸಿಕೊಂಡಿತ್ತು. ಆದರೆ, ಕಂಗನಾಗೆ ಜ್ವರ ಕಾಡಿತ್ತು. ಹೀಗಾಗಿ ಚಿತ್ರತಂಡದವರು ಸಿನಿಮಾ ಶೂಟಿಂಗ್​ ಮುಂದೂಡಲು ನಿರ್ಧರಿಸಿದ್ದರು. ಆದರೆ, ಇದಕ್ಕೆ ಕಂಗನಾ ಒಪ್ಪಲಿಲ್ಲ. ನೇರವಾಗಿ ಅವರು ಸೆಟ್​ಗೆ ಬಂದು 16 ಗಂಟೆ ಕಾಲ ಒದ್ದೆಯಾಗೇ ಇದ್ದರು. ಈ ವೇಳೆ ಅವರ ದೇಹದ ತಾಪಮಾನ ಕೂಡ ಹೆಚ್ಚಾಗಿತ್ತು.

ತಲೈವಿ ಸಿನಿಮಾ ಜಯಲಲಿತಾ ಅವರ ಜೀವನದ ಕಥೆಯನ್ನು ಹೇಳಲಿದೆ. ಇತ್ತೀಚೆಗೆ ರಿಲೀಸ್​ ಆಗಿದ್ದ ಸಿನಿಮಾ ಟ್ರೇಲರ್​ ಭರವಸೆ ಮೂಡಿಸಿದೆ. ಎಂ.ಜಿ.ಆರ್​. ಪಾತ್ರದಲ್ಲಿ ಅರವಿಂದ್​ ಸ್ವಾಮಿ ಹಾಗೂ ಕರುಣಾನಿಧಿ ಪಾತ್ರದಲ್ಲಿ ಪ್ರಕಾಶ್ ರಾಜ್​ ಬಣ್ಣ ಹಚ್ಚಿದ್ದಾರೆ. ಜಯಲಲಿತಾ ಪಾತ್ರಕ್ಕಾಗಿ ಕಂಗನಾ 20 ಕೆಜಿ ದೇಹದ ತೂಕ ಹೆಚ್ಚಿಸಿಕೊಂಡಿದ್ದರು ಎನ್ನುವುದು ವಿಶೇಷ.

ಇದನ್ನೂ ಓದಿ: ತಮಿಳುನಾಡು ಚುನಾವಣೆ ಹೊಸಿಲಲ್ಲೇ ‘ತಲೈವಿ’ ಟ್ರೇಲರ್ ಬಿಡುಗಡೆ: ಮತದಾರರಿಗೆ ನೆನಪಾಗ್ತಾರಾ ಜಯಲಲಿತಾ?

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್