AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಂಗುವ’ ಚಿತ್ರಕ್ಕೆ ಇದೆಂಥಾ ಸ್ಥಿತಿ; ವಾರದ ದಿನಗಳಲ್ಲಿ ಮತ್ತಷ್ಟು ಹೀನಾಯವಾಯಿತು ಗಳಿಕೆ

‘ಕಂಗುವ’ ಸಿನಿಮಾದಲ್ಲಿ ಸೂರ್ಯ ಅವರು ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಪಾತ್ರ ಜನರಿಗೆ ಇಷ್ಟ ಆಗಿದೆ. ಆದರೆ, ಸಿನಿಮಾಗೆ ನೆಗೆಟಿವ್ ಟಾಕ್ ಇದೆ. ಈ ಚಿತ್ರ ಮೊದಲ ದಿನ ಮಾತ್ರ ಅಬ್ಬರದ ಗಳಿಕೆ ಮಾಡಿತ್ತು. ಆ ಬಳಿಕ ಸಿನಿಮಾದ ಕಲೆಕ್ಷನ್ ಹೀನಾಯವಾಗುತ್ತಾ ಹೋಗಿದೆ.

‘ಕಂಗುವ’ ಚಿತ್ರಕ್ಕೆ ಇದೆಂಥಾ ಸ್ಥಿತಿ; ವಾರದ ದಿನಗಳಲ್ಲಿ ಮತ್ತಷ್ಟು ಹೀನಾಯವಾಯಿತು ಗಳಿಕೆ
ಸೂರ್ಯ
ರಾಜೇಶ್ ದುಗ್ಗುಮನೆ
|

Updated on: Nov 19, 2024 | 10:40 AM

Share

‘ಕಂಗುವ’ ಸಿನಿಮಾ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ನಿರೀಕ್ಷೆಯನ್ನು ಸಿನಿಮಾ ಹುಸಿ ಮಾಡಿದೆ. ಈ ಚಿತ್ರದ ಗಳಿಕೆ ದಿನ ಕಳೆದಂತೆ ತಗುತ್ತಲೇ ಇದೆ. ಸೋಮವಾರ (ನವೆಂಬರ್ 18) ಈ ಚಿತ್ರ ಕಳಪೆ ಕಲೆಕ್ಷನ್ ಮಾಡಿದೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಮತ್ತಷ್ಟು ಸಮಸ್ಯೆ ಆಗಬಹುದು ಎಂದು ಹೇಳಲಾಗುತ್ತಿದೆ. ಹಾಗಾದರೆ ಸಿನಿಮಾದ ಒಟ್ಟಾರೆ ಕಲೆಕ್ಷನ್ ಎಷ್ಟು ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

‘ಕಂಗುವ’ ಸಿನಿಮಾದಲ್ಲಿ ಸೂರ್ಯ ಅವರು ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಪಾತ್ರ ಜನರಿಗೆ ಇಷ್ಟ ಆಗಿದೆ. ಆದರೆ, ಸಿನಿಮಾಗೆ ನೆಗೆಟಿವ್ ಟಾಕ್ ಇದೆ. ಈ ಚಿತ್ರ ಮೊದಲ ದಿನ ಮಾತ್ರ ಅಬ್ಬರದ ಗಳಿಕೆ ಮಾಡಿತ್ತು. ಆ ಬಳಿಕ ಸಿನಿಮಾದ ಕಲೆಕ್ಷನ್ ಹೀನಾಯವಾಗುತ್ತಾ ಹೋಗಿದೆ. ಈಗ ಸೋಮವಾರವೂ ಚಿತ್ರದ ಗಳಿಕೆ ತಗ್ಗಿದೆ.

ಸಾಮಾನ್ಯವಾಗಿ ಸಿನಿಮಾಗಳು ವೀಕೆಂಡ್​ನಲ್ಲಿ ದೊಡ್ಡ ಮಟ್ಟದ ಕಲೆಕ್ಷನ್ ಮಾಡುತ್ತವೆ. ವಾರದ ದಿನಗಳಲ್ಲಿ ಸಿನಿಮಾದ ಕಲೆಕ್ಷನ್ ತಗ್ಗುತ್ತದೆ. ಯಾವ ಚಿತ್ರ ವೀಕೆಂಡ್​ನಲ್ಲಿ ಉತ್ತಮ ಕಲೆಕ್ಷನ್ ಮಾಡಿ, ವಾರದ ದಿನವೂ ಒಳ್ಳೆಯ ಪರ್ಫಾರ್ಮೆನ್ಸ್ ಕೊಟ್ಟರೆ ಸಿನಿಮಾ ಗೆದ್ದಂತೆ. ‘ಕಂಗುವ’ ಭಾನುವಾರ ಎರಡಂಕಿ ಗಳಿಕೆ ಮಾಡಿ, ವಾರದ ದಿನಗಳಲ್ಲಿ ಕೇವಲ ಒಂದಕಿ ಕಲೆಕ್ಷನ್ ಮಾಡಿದೆ.

‘ಕಂಗುವ’ ಸಿನಿಮಾ ಮೊದಲ ದಿನ 24 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಆ ನಂತರ ಸಿನಿಮಾದ ಗಳಿಕೆ ತಗ್ಗುತ್ತಾ ಬಂತು. ಈಗ ಐದನೇ ದಿನವಾದ ಸೋಮವಾರ (ನವೆಂಬರ್ 19) ಚಿತ್ರ ಕೇವಲ 3.15 ಕೋಟಿ ರೂಪಾಯಿ ಗಳಿಸಿದೆ. ಇದು ಚಿತ್ರಕ್ಕೆ ತೀವ್ರ ಹಿನ್ನಡೆ ತಂದಿದೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಡಲಿದೆ. ಚಿತ್ರದ ಒಟ್ಟಾರೆ ಗಳಿಕೆ 56 ಕೋಟಿ ರೂಪಾಯಿ ಆಗಿದೆ.

ಇದನ್ನೂ ಓದಿ: ‘ಸಿನಿಮಾ ಸೌಂಡ್ ಕಡಿಮೆ ಮಾಡಿ’; ಥಿಯೇಟರ್ ಮಾಲೀಕರ ಬಳಿ ‘ಕಂಗುವ’ ನಿರ್ಮಾಪಕನ ಮನವಿ

ಸೂರ್ಯ ನಟನೆಯ ‘ಕಂಗುವ’ ಸಿನಿಮಾಗೆ ಶಿವ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಬಾಬಿ ಡಿಯೋಲ್, ದಿಶಾ ಪಟಾಣಿ ಮೊದಲಾದವರು ನಟಿಸಿದ್ದಾರೆ. ಜ್ಞಾನವೇಲ್ ರಾಜಾ ಇದನ್ನು ನಿರ್ಮಾಣ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್