AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಷಬ್ ಶೆಟ್ಟಿಯ ‘ಜೈ ಹನುಮಾನ್’ನಲ್ಲಿ ಕನ್ನಡದ ನಟನಿಗೆ ಶ್ರೀರಾಮನ ಪಾತ್ರ?

Rishab Shetty movie: ರಿಷಬ್ ಅವರದ್ದು ಸಿನಿಮಾನಲ್ಲಿ ಹನುಮಂತನ ಪಾತ್ರ. ಇದು ಸಂಪೂರ್ಣವಾಗಿ ಹನುಮಂತನ ಕುರಿತಾದ ಸಿನಿಮಾನಾ? ಅಥವಾ ಹನುಮಂತನ ಭಕ್ತನ ಕುರಿತಾದ ಫ್ಯಾಂಟಸಿ ಕತೆಯ ಎಂಬ ಬಗ್ಗೆ ಅನುಮಾನವಿದೆ. ಈ ಹಿಂದೆ ಬಿಡುಗಡೆ ಆಗಿರುವ ಪೋಸ್ಟರ್ ಗಮನಿಸಿದರೆ ಹನುಮಂತ ದೇವರ ಕುರಿತಾದ ಸಿನಿಮಾ ಎಂಬ ಅನುಮಾನ ಮೂಡುತ್ತಿದೆ.

ರಿಷಬ್ ಶೆಟ್ಟಿಯ ‘ಜೈ ಹನುಮಾನ್’ನಲ್ಲಿ ಕನ್ನಡದ ನಟನಿಗೆ ಶ್ರೀರಾಮನ ಪಾತ್ರ?
Jai Hanuman
ಮಂಜುನಾಥ ಸಿ.
|

Updated on: Aug 16, 2026 | 8:56 PM

Share

ಮುಖ್ಯಾಂಶಗಳು

  • ರಿಷಬ್ ಶೆಟ್ಟಿ ನಟಿಸುತ್ತಿರುವ ಸಿನಿಮಾ ‘ಜೈ ಹನುಮಾನ್’
  • ‘ಜೈ ಹನುಮಾನ್’ ತೆಲುಗಿನ ಪ್ಯಾನ್ ಇಂಡಿಯಾ ಸಿನಿಮಾ.
  • ರಿಷಬ್ ಶೆಟ್ಟಿಯ ಈ ಸಿನಿಮಾನಲ್ಲಿ ಕನ್ನಡದ ನಟ ನಟಿಸಲಿದ್ದಾರೆ?

‘ಕಾಂತಾರ: ಚಾಪ್ಟರ್ 1’ (Kantara Chapter 1) ಸಿನಿಮಾ ಮೂಲಕ ಭಾರಿ ದೊಡ್ಡ ಹಿಟ್ ಸಿನಿಮಾ ನೀಡಿರುವ ರಿಷಬ್ ಶೆಟ್ಟಿ ಇದೀಗ ತೆಲುಗು ಪ್ಯಾನ್ ಇಂಡಿಯಾ ಸಿನಿಮಾ ಆಗಿರುವ ‘ಜೈ ಹನುಮಾನ್’ನಲ್ಲಿ ನಟಿಸುತ್ತಿದ್ದಾರೆ. ರಿಷಬ್ ಅವರದ್ದು ಸಿನಿಮಾನಲ್ಲಿ ಹನುಮಂತನ ಪಾತ್ರ. ಇದು ಸಂಪೂರ್ಣವಾಗಿ ಹನುಮಂತನ ಕುರಿತಾದ ಸಿನಿಮಾನಾ? ಅಥವಾ ಹನುಮಂತನ ಭಕ್ತನ ಕುರಿತಾದ ಫ್ಯಾಂಟಸಿ ಕತೆಯ ಎಂಬ ಬಗ್ಗೆ ಅನುಮಾನವಿದೆ. ಈ ಹಿಂದೆ ಬಿಡುಗಡೆ ಆಗಿರುವ ಪೋಸ್ಟರ್ ಗಮನಿಸಿದರೆ ಹನುಮಂತ ದೇವರ ಕುರಿತಾದ ಸಿನಿಮಾ ಎಂಬ ಅನುಮಾನ ಮೂಡುತ್ತಿದೆ.

ಈ ಸಿನಿಮಾನಲ್ಲಿ ವಮಿಕಾ ಗಬ್ಬಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಇನ್ನು ಸಿನಿಮಾನಲ್ಲಿ ಮತ್ತೊಂದು ಪ್ರಮುಖವಾದ ಪಾತ್ರವಿದೆ. ಅದುವೇ ಶ್ರೀರಾಮನ ಪಾತ್ರ. ಈ ಪಾತ್ರಕ್ಕೆ ತೆಲುಗಿನ ನಟರನ್ನು ಹಾಕಿಕೊಳ್ಳುವ ಉದ್ದೇಶ ಸಿನಿಮಾದ ನಿರ್ದೇಶಕ ಪ್ರಶಾಂತ್ ವರ್ಮಾ ಅವರಿಗೆ ಇತ್ತಂತೆ. ಆದರೆ ಈಗ ಅದು ಸಾಧ್ಯವಾಗುತ್ತಿಲ್ಲ ಎನ್ನಲಾಗುತ್ತಿದೆ. ಪ್ರಭಾಸ್ ಈಗಾಗಲೇ ಶ್ರೀರಾಮನ ಪಾತ್ರದಲ್ಲಿ ಸೋಲು ಕಂಡಿದ್ದಾರೆ. ಮಹೇಶ್ ಬಾಬು ಪ್ರಸ್ತುತ ‘ಆರ್​​ಆರ್​​ಆರ್’ ಸಿನಿಮಾನಲ್ಲಿ ರಾಮನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇನ್ನು ಜೂ ಎನ್​​ಟಿಆರ್ ಅವರನ್ನೂ ಕೇಳಲಾಗಿದ್ದು, ಅವರು ತಮ್ಮ ಮುಂದಿನ ಸಿನಿಮಾನಲ್ಲಿ ಮುರುಗನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಹಾಗಾಗಿ ಈಗ ರಾಮನ ಪಾತ್ರದಲ್ಲಿ ನಟಿಸಿದರೆ ಆ ಲುಕ್​​ಗೆ ಸಮಸ್ಯೆ ಆಗುವ ಕಾರಣಕ್ಕೆ ಅವರೂ ಸಹ ನೋ ಎಂದಿದ್ದಾರಂತೆ.

ಇದೀಗ ಮೂಲಗಳ ಪ್ರಕಾರ, ಕನ್ನಡದ ಸ್ಟಾರ್ ನಟರೊಬ್ಬರು ‘ಜೈ ಹನುಮಾನ್’ ಸಿನಿಮಾನಲ್ಲಿ ಶ್ರೀರಾಮನ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಆದರೆ ಅದು ಯಾರು ಎಂಬುದು ಇನ್ನೂ ಖಾತ್ರಿ ಆಗಿಲ್ಲ. ಕೆಲ ನೆಟ್ಟಿಗರು ಊಹಿಸಿರುವಂತೆ ಶಿವರಾಜ್ ಕುಮಾರ್ ಅವರು ರಾಮನ ಪಾತ್ರದಲ್ಲಿ ಕಾಣಿಸಿಕೊಳ್ಳಲಿ ಎಂದಿದ್ದಾರೆ. ಇನ್ನು ಕೆಲವರು ಯಶ್ ಅವರ ಹೆಸರು ಹೇಳಿದ್ದಾರೆ. ಇನ್ನು ಕೆಲವರು ಕೆಲ ಯುವನಟರ ಹೆಸರುಗಳನ್ನು ಸಹ ಹೇಳಿದ್ದಾರೆ.

ಇದನ್ನೂ ಓದಿ:ಪ್ರವಾಸದ ಖುಷಿಯಲ್ಲಿ ಕಾಂತಾರ ಚೆಲುವೆ ಸಪ್ತಮಿ ಗೌಡ

‘ಜೈ ಹನುಮಾನ್’ ಸಿನಿಮಾ ರಿಷಬ್ ಶೆಟ್ಟಿಯ ದೊಡ್ಡ ಬಜೆಟ್​​ನ ಪ್ಯಾನ್ ಇಂಡಿಯಾ ತೆಲುಗು ಸಿನಿಮಾ ಆಗಿದೆ. ಈ ಸಿನಿಮಾಕ್ಕೆ ಮೈತ್ರಿ ಮೂವಿ ಮೇಕರ್ಸ್ ಬಂಡವಾಳ ಹೂಡಿದ್ದಾರೆ. ಸಿನಿಮಾ ಅನ್ನು ಪ್ರಶಾಂತ್ ವರ್ಮಾ ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ ಇವರು ‘ಹನು ಮ್ಯಾನ್’ ಹೆಸರಿನ ಫ್ಯಾಂಟಸಿ ಕತೆಯುಳ್ಳ ಸಿನಿಮಾ ಮಾಡಿದ್ದು, ಆ ಸಿನಿಮಾ ದೊಡ್ಡ ಹಿಟ್ ಆಗಿತ್ತು. ಇದೀಗ ಅವರು ರಿಷಬ್ ಶೆಟ್ಟಿ ಜೊತೆ ಕೆಲಸ ಮಾಡುತ್ತಿದ್ದಾರೆ. ಸಿನಿಮಾದ ಮುಹೂರ್ತ ಹಂಪಿಯಲ್ಲಿ ನಡೆದಿತ್ತು. ಸಿನಿಮಾ ಮುಂದಿನ ವರ್ಷ ಸಂಕ್ರಾಂತಿ ವೇಳೆಗೆ ಬಿಡುಗಡೆ ಆಗುವ ಸಾಧ್ಯತೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು