AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರುಕ್ಮಿಣಿ ವಸಂತ್​ಗೆ ಪ್ರಭಾಸ್ ಜೊತೆ ನಟಿಸೋ ಆಫರ್; ಕನ್ನಡಿಗರಿಗೆ ಹೆಮ್ಮೆಯೋ ಹೆಮ್ಮೆ

ಕನ್ನಡದ ಪ್ರತಿಭಾವಂತ ನಟಿ ರುಕ್ಮಿಣಿ ವಸಂತ್ ಅವರು ತೆಲುಗು ಚಿತ್ರರಂಗದಲ್ಲಿ ಸ್ಥಾನ ಪಡೆಯುತ್ತಿದ್ದಾರೆ. ಪ್ರಭಾಸ್ ನಟನೆಯ "ಸ್ಪಿರಿಟ್" ಚಿತ್ರದಲ್ಲಿ ಅವರು ನಾಯಕಿಯಾಗಿ ನಟಿಸುವ ಅವಕಾಶ ಪಡೆದಿದ್ದಾರೆ. ಇದಲ್ಲದೆ, ಪ್ರಶಾಂತ್ ನೀಲ್ ನಿರ್ದೇಶನದ ಜೂನಿಯರ್ ಎನ್ಟಿಆರ್ ಚಿತ್ರದಲ್ಲೂ ಅವರು ನಟಿಸುವ ಸಾಧ್ಯತೆ ಇದೆ.

ರುಕ್ಮಿಣಿ ವಸಂತ್​ಗೆ ಪ್ರಭಾಸ್ ಜೊತೆ ನಟಿಸೋ ಆಫರ್; ಕನ್ನಡಿಗರಿಗೆ ಹೆಮ್ಮೆಯೋ ಹೆಮ್ಮೆ
ಪ್ರಭಾಸ್- ರುಕ್ಮುಣಿ ವಸಂತ್
ರಾಜೇಶ್ ದುಗ್ಗುಮನೆ
|

Updated on:May 23, 2025 | 10:00 AM

Share

ನಮ್ಮ ನಟಿಯರು ಕನ್ನಡದ ಕಂಪು ಹರಡುತ್ತಾ ಪರಭಾಷೆಗೆ ಹೊಗುತ್ತಾರೆ ಎಂದರೆ ಕರ್ನಾಟಕದವರಿಗೆ ನಿಜಕ್ಕೂ ಹೆಮ್ಮೆ ಆಗುತ್ತದೆ. ನಮ್ಮ ನಾಡಿನ ಋಣ ಮರೆಯದೇ ಪರಭಾಷೆಗೆ ತೆರಳಿ ಅಲ್ಲಿ ತಾವು ನಡೆದು ಬಂದ ದಾರಿಯನ್ನು ನೆನಪಿಸಿಕೊಂಡರೆ ಆ ನಟಿಯರ ಬಗ್ಗೆ ಹೆಮ್ಮೆ ವ್ಯಕ್ತವಾಗುತ್ತದೆ. ನಟಿ ರುಕ್ಮಿಣಿ ವಸಂತ್ (Rukmini Vasanth) ಕೂಡ ಎಲ್ಲ ಕಡೆಗಳಲ್ಲಿ ಕನ್ನಡದ ಕಂಪು ಹರಡುತ್ತಿದ್ದಾರೆ. ಹೀಗಿರುವಾಗಲೇ ನಟಿಗೆ ಟಾಲಿವುಡ್​ನಿಂದ ಮತ್ತೊಂದು ಆಫರ್ ಬಂದಿದೆ ಎಂದು ವರದಿ ಆಗಿದೆ. ಅದೂ ಪ್ರಭಾಸ್ ಜೊತೆ ನಟಿಸೋ ಅವಕಾಶ ಸಿಕ್ಕಿದೆ.

ಸಂದೀಪ್ ರೆಡ್ಡಿ ವಂಗ ಅವರು ಪ್ರಭಾಸ್ ನಟನೆಯ ‘ಸ್ಪಿರಿಟ್’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಈ ಚಿತ್ರಕ್ಕೆ ಈ ಮೊದಲು ದೀಪಿಕಾ ನಾಯಕಿ ಆಗಿ ಆಯ್ಕೆ ಆಗಿದ್ದರು. ಆದರೆ, ಕಾರಣಾಂತರಗಳಿಂದ ಅವರು ಚಿತ್ರದಿಂದ ಹೊರನಡೆದಿದ್ದಾರೆ. ಈಗ ನಿರ್ದೇಶಕರು ರುಕ್ಮಿಣಿ ಅವರನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂದು ವರದಿ ಆಗಿದೆ.

ರುಕ್ಮಿಣಿ ವಸಂತ್ ಅವರು ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದಲ್ಲಿ ಪ್ರಿಯಾ ಹೆಸರಿನ ಪಾತ್ರ ಮಾಡಿ ಸಾಕಷ್ಟು ಮನ್ನಣೆ ಪಡೆದರು. ಅವರ ನಟನೆಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ಈ ಸಿನಿಮಾ ತೆಲುಗಿನಲ್ಲೂ ರಿಲೀಸ್ ಆಗಿದೆ. ಕಳೆದ ವರ್ಷ ಅವರ ಅಭಿನಯದ ತೆಲುಗಿನ ‘ಅಪ್ಪುಡೋ ಇಪ್ಪುಡೋ ಎಪ್ಪುಡೋ’ ಸಿನಿಮಾ ರಿಲೀಸ್ ಆಯಿತು. ಈ ಎಲ್ಲಾ ಕಾರಣದಿಂದ ತೆಲುಗಿನಲ್ಲೂ ರುಕ್ಮಿಣಿ ಪರಿಚಯ ಆಗಿದೆ.  ಹೀಗಿರುವಾಗಲೇ ಪ್ರಭಾಸ್ ಚಿತ್ರದ ಆಫರ್ ಅವರ ಕೈ ಸೇರಿದೆ ಎನ್ನಲಾಗುತ್ತಿದೆ. ಇದರಿಂದ ಕನ್ನಡಿಗರು ಹೆಮ್ಮೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ
Image
‘ಕಾಂತಾರ: ಚಾಪ್ಟರ್ 1’ ಅಡಚಣೆ; ಅಂದುಕೊಂಡ ದಿನಾಂಕದಲ್ಲೇ ಚಿತ್ರ ರಿಲೀಸ್
Image
ಮಹೇಶ್ ಬಾಬು ಕುಟುಂಬದಲ್ಲಿ ಕೊವಿಡ್; ಅಭಿಮಾನಿಗಳಲ್ಲಿ ಹೆಚ್ಚಿತು ಆತಂಕ
Image
‘ನಾನು ಯಶ್ ಅಭಿಮಾನಿ ಅಲ್ಲ, ಆದರೆ ಆ ಹೀರೋ ನಂಗೆ ಆದರ್ಶ’; ಯಶ್ ತಾಯಿ
Image
25ನೇ ವಯಸ್ಸಿಗೆ ಕಾಲಿಟ್ಟ ಸುಹಾನ; ಶಾರುಖ್ ಮಗಳ ಬಳಿ ಇದೆ ದುಬಾರಿ ವಸ್ತುಗಳು

ಇದನ್ನೂ ಓದಿ: ಡಿಮ್ಯಾಂಡ್ ಮಾಡೋಕೆ ಶುರು ಮಾಡಿದ ದೀಪಿಕಾ ಪಡುಕೋಣೆ; ಕೈ ತಪ್ಪಿತು ಬಿಗ್ ಆಫರ್

ಪ್ರಶಾಂತ್ ನೀಲ್ ಹಾಗೂ ಜೂನಿಯರ್ ಎನ್​ಟಿಆರ್ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ ‘ಎನ್​ಟಿಆರ್​31’ ಎನ್ನುವ ಶೀರ್ಷಿಕೆ ಇಡಲಾಗಿದೆ. ಈ ಚಿತ್ರಕ್ಕೂ ರುಕ್ಮಿಣಿ ವಸಂತ್ ನಾಯಕಿ ಎನ್ನಲಾಗಿದೆ. ರುಕ್ಮಿಣಿ ಅವರು ಶಿವರಾಜ್​ಕುಮಾರ್, ರಕ್ಷಿತ್ ಶೆಟ್ಟಿ, ಗಣೇಶ್ ಮೊದಲಾದವರ ಜೊತೆ ತೆರೆ ಹಂಚಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:58 am, Fri, 23 May 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!