AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕನ್ನಡ ಹುಟ್ಟಿದ್ದು ತಮಿಳಿನಿಂದ’: ಶಿವಣ್ಣನ ಮುಂದೆಯೇ ವಿವಾದದ ಕಿಡಿ ಹೊತ್ತಿಸಿದ ಕಮಲ್ ಹಾಸನ್

ಮಣಿರತ್ನಂ ಹಾಗೂ ಕಮಲ್ ಹಾಸನ್ ನಟನೆಯ 'ಥಗ್ ಲೈಫ್' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಇತ್ತೀಚೆಗೆ ಚೆನ್ನೈನಲ್ಲಿ ಚಿತ್ರದ ಆಡಿಯೋ ಲಾಂಚ್ ಕಾರ್ಯಕ್ರಮ ನಡೆದಿದ್ದು, ಇದಕ್ಕೆ ಸ್ಯಾಂಡಲ್​ ವುಡ್ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಈ ವೇಳೆ ಕಮಲ್ ಹಾಸನ್ ಕನ್ನಡ ವಿಚಾರವಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಗಾಯಕ ಸೋನು ನಿಗಮ್​ ಬೆನ್ನಲ್ಲೇ ಇದೀಗ ಕಮಲ್​ ಕನ್ನಡಿಗರನ್ನು ಕೆರಳಿಸಿದ್ದಾರೆ.

‘ಕನ್ನಡ ಹುಟ್ಟಿದ್ದು ತಮಿಳಿನಿಂದ’: ಶಿವಣ್ಣನ ಮುಂದೆಯೇ ವಿವಾದದ ಕಿಡಿ ಹೊತ್ತಿಸಿದ ಕಮಲ್ ಹಾಸನ್
Kamal Haasan
Malatesh Jaggin
| Updated By: ರಮೇಶ್ ಬಿ. ಜವಳಗೇರಾ|

Updated on:May 27, 2025 | 5:58 PM

Share

ಕಾಲಿವುಡ್ ನಟ ಕಮಲ್ ಹಾಸನ್ (Kamal Haasan) ನಟನೆಯ ‘ಥಗ್ ಲೈಫ್’ ಸಿನಿಮಾ (Thug Life) ಜೂನ್ 5ರಂದು ರಿಲೀಸ್‌ಗೆ ಸಿದ್ಧವಾಗಿದೆ. ಇತ್ತೀಚೆಗೆ ಚೆನ್ನೈನಲ್ಲಿ ಚಿತ್ರದ ಆಡಿಯೋ ಲಾಂಚ್ ಕಾರ್ಯಕ್ರಮ ನಡೆದಿದ್ದು ಈ ವೇಳೆ, ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂದ ಕಮಲ್ ಹಾಸನ್  ಹೇಳಿಕೆ ನೀಡಿ ವಿವಾದದ ಕಿಡಿ ಹೊತ್ತಿಸಿದ್ದಾರೆ. ಅದು ಸ್ಯಾಂಡಲ್ ವುಡ್ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಎದುರೇ ಕನ್ನಡ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಇದೀಗ ಕಮಲ್ ಹಾಸನ್ ಹೇಳಿಕೆಗೆ ಕನ್ನಡಿಗರು ಫುಲ್ ರಾಂಗ್ ಆಗಿದ್ದಾರೆ

ಚೆನ್ನೈನಲ್ಲಿ ನಡೆದ ‘ಥಗ್ ಲೈಫ್’ ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ನಟ ಶಿವಣ್ಣ (Shivarajkumar) ಅತಿಥಿಯಾಗಿ ಭಾಗವಹಿಸಿದ್ದರು. ಈ ವೇಳೆ, ರಾಜ್‌ಕುಮಾರ್ ಜೊತೆಗಿನ ಒಡನಾಡವನ್ನು ಕಮಲ್ ಹಾಸನ್ ಸ್ಮರಿಸಿದ್ದಾರೆ. ಬಳಿಕ ಶಿವಣ್ಣ ಎದುರೇ ನಿಮ್ಮ ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ನಟ ಹೇಳಿದ್ದಾರೆ. ಕನ್ನಡಿಗರ ಪ್ರೀತಿ, ಗೌರವಕ್ಕೆ ನಮಿಸುತ್ತಲೇ ನಿಮ್ಮ ಕನ್ನಡ ನಮ್ಮಿಂದ ಬಂದಿದ್ದು ಎಂದ ಕಮಲ್ ಹೇಳಿಕೆಗೆ ಕನ್ನಡಿಗರು ಕೆಂಡಾಮಂಡಲರಾಗಿದ್ದಾರೆ.

ಇದನ್ನೂ ಓದಿ: ‘ಅಪ್ಪಾಜಿ ಜೊತೆ ಮಾತನಾಡಿದಂತೆ ಭಾಸವಾಯ್ತು’; ಕಮಲ್ ಹಾಸನ್ ಜೊತೆಗಿನ ಸಂಭಾಷಣೆ ನೆನಪಿಸಿಕೊಂಡ ಶಿವಣ್ಣ

ಶಿವಣ್ಣ ಮುಂದೆಯೇ ಕಮಲ್ ಹಾಸನ ಆಡಿರುವ ಮಾತುಗಳು ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕನ್ನಡ ತಮಿಳಿನಿಂದ ಬಂದಿಲ್ಲ. ತಮಿಳಿಗಿಂತ ಕನ್ನಡ ಭಾಷೆಯೇ ಪುರಾತನವಾದದ್ದು ಎಂದು ಕನ್ನಡಿಗರು ಕ್ಲಾಸ್ ತೆಗೆದುಕೊಂಡಿದ್ದಾರೆ.

ಈ ಸಂಬಂಧ ಸೋಶಿಯಲ್ ಮೀಡಿಯಾದಲ್ಲಿ ಇದೇ ವಿಚಾರ ಬಹಳ ಚರ್ಚೆ ಆಗುತ್ತಿದ್ದು, ಕಮಲ್ ಹಾಸನ್ ಹೇಳಿದ್ದು ಸರಿ ಎಂದು ತಮಿಳಿನ ಕೆಲವರು ವಾದಿಸುತ್ತಿದ್ದಾರೆ. ಇದಕ್ಕೆ ಪ್ರತಿಯಾಗಿ ಕನ್ನಡಿಗರು ಕನ್ನಡದ ಭಾಷೆಯ ಇತಿಹಾಸದ ಬಗ್ಗೆ ಪಾಠ ಮಾಡುತ್ತಿದ್ದಾರೆ. ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ಕನ್ನಡ ಅತ್ಯಂತ ಪ್ರಾಚೀನ ಭಾಷೆ. ಸಂಶೋಧನೆಗಳ ಪ್ರಕಾರ ಕನ್ನಡ ಭಾಷೆ ಕ್ರಿ.ಪೂ. 3ನೇ ಶತಮಾನಕ್ಕಿಂತಲೂ ಹಳೆಯದು ಎನ್ನಲಾಗುತ್ತಿದೆ. ಇದೇ ಕಾರಣಕ್ಕೆ ಕಮಲ್ ಹಾಸನ್ ಹೇಳಿಕೆಯನ್ನು ಕೆಲವರು ಒಪ್ಪಲು ಸಿದ್ಧರಿಲ್ಲ. ಇತಿಹಾಸ ಸರಿಯಾಗಿ ತಿಳಿದುಕೊಂಡು ಮಾತನಾಡಬೇಕು ಎಂದು ಕಾಮೆಂಟ್ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 5:45 pm, Tue, 27 May 25