AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಬಂದ್​ಗೆ ಚಿತ್ರರಂಗದ ಬೆಂಬಲ; ಥಿಯೇಟರ್ ಬಂದ್

ಕನ್ನಡ ಚಿತ್ರರಂಗದ ಪ್ರದರ್ಶಕ ಸಂಘದ ಅಧ್ಯಕ್ಷ ಕೆ.ವಿ. ಚಂದ್ರಶೇಖರ್ ಮಾತನಾಡಿದ್ದಾರೆ. ‘ಅಧ್ಯಕ್ಷರು ಪದಾಧಿಕಾರಿಗಳ ಜೊತೆ ಕೂತು ಚರ್ಚೆ ಮಾಡಿದ್ದೇವೆ. ನೀರಿನ ವಿಷಯ, ಭಾಷೆಯ ವಿಷಯಕ್ಕೆ ಇಡೀ ಚಿತ್ರೋದ್ಯಮ ಸಂಪೂರ್ಣ ಬೆಂಬಲವನ್ನು ನೀಡುತ್ತಿದೆ. ನೀರಿನ ವಿಚಾರದಲ್ಲಿ ಕರೆ ನೀಡಿದ ಬಂದ್​ಗೆ ಚಿತ್ರಮಂದಿರಗಳು ಬೆಂಬಲಕ್ಕೆ ಸದಾ ಸಿದ್ಧ’ ಎಂದಿದ್ದಾರೆ.

ಬೆಂಗಳೂರು ಬಂದ್​ಗೆ ಚಿತ್ರರಂಗದ ಬೆಂಬಲ; ಥಿಯೇಟರ್ ಬಂದ್
ಸಿನಿಮಾ ಥಿಯೇಟರ್
Mangala RR
| Edited By: |

Updated on:Sep 25, 2023 | 2:13 PM

Share

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಹಲವು ಕಡೆಗಳಲ್ಲಿ ಭಾರೀ ಪ್ರತಿಭಟನೆ ಮಾಡಲಾಗುತ್ತಿದೆ. ಮಂಗಳವಾರ (ಸೆಪ್ಟೆಂಬರ್ 26) ಬಂದ್​ಗೆ ಕರೆ ನೀಡಲಾಗಿದೆ. ಈಗಾಗಲೇ ಹಲವು ಸಂಘಟನೆಗಳು ಬಂದ್​ಗೆ ಬೆಂಬಲ ಸೂಚಿಸಿವೆ. ಇದರ ಜೊತೆಗೆ ಪ್ರದರ್ಶಕ ಸಂಘದವರು ಸಿನಿಮಾ ಪ್ರದರ್ಶನ ಬಂದ್ ಮಾಡುವ ನಿರ್ಧಾರಕ್ಕೆ ಬಂದಿದ್ದಾರೆ. ಈ ಮೂಲಕ ಬೆಂಗಳೂರು ಬಂದ್​ಗೆ (Bangalore Bandh) ಬೆಂಬಲ ಸೂಚಿಸಿದ್ದಾರೆ.

ಕನ್ನಡ ಚಿತ್ರರಂಗದ ಪ್ರದರ್ಶಕ ಸಂಘದ ಅಧ್ಯಕ್ಷ ಕೆ.ವಿ. ಚಂದ್ರಶೇಖರ್ ಮಾತನಾಡಿದ್ದಾರೆ. ‘ಅಧ್ಯಕ್ಷರು ಪದಾಧಿಕಾರಿಗಳ ಜೊತೆ ಕೂತು ಚರ್ಚೆ ಮಾಡಿದ್ದೇವೆ. ನೀರಿನ ವಿಷಯ, ಭಾಷೆಯ ವಿಷಯಕ್ಕೆ ಇಡೀ ಚಿತ್ರೋದ್ಯಮ ಸಂಪೂರ್ಣ ಬೆಂಬಲವನ್ನು ನೀಡುತ್ತಿದೆ. ನೀರಿನ ವಿಚಾರದಲ್ಲಿ ಕರೆ ನೀಡಿದ ಬಂದ್​ಗೆ ಚಿತ್ರಮಂದಿರಗಳು ಬೆಂಬಲಕ್ಕೆ ಸದಾ ಸಿದ್ಧ. ಬಂದ್​ಗೆ ಚಿತ್ರೋದ್ಯಮ ಬೆಂಬಲ ನೀಡುತ್ತಿದೆ. ನಾಡಿನ ಹಿತಕ್ಕಾಗಿ ಚಿತ್ರೋದ್ಯಮ ಎಂದಿಗೂ ಇರುತ್ತದೆ’ ಎಂದು ಅವರು ಹೇಳಿದ್ದಾರೆ.

‘ಕಾವೇರಿ ವಿಚಾರ ಗಂಭೀರವಾದ ವಿಚಾರ. ನಮ್ಮ ಅಂಗ ಸಂಸ್ಥೆಗಳ ಜೊತೆ ಚರ್ಚೆ ಮಾಡಬೇಕು.   ಕಲಾವಿದರನ್ನ ಭೇಟಿ ಮಾಡಬೇಕು. ಸಮಯದ ಅಭಾವ ಇದೆ. ಹೀಗಾಗಿ ರೂಪುರೇಷೆಯನ್ನು ಸಾಯಂಕಾಲ ತಿಳಿಸುತ್ತೇವೆ. ರೈತರ ನೀರಿನ ಸಮಸ್ಯೆ ಆ ಸಮಸ್ಯೆಗೆ ಸ್ಪಂದಿಸೋದು ನಮ್ಮ ಕರ್ತವ್ಯ. ಸರ್ಕಾರಕ್ಕೆ ಮನದಟ್ಟು ಆಗಬೇಕಂದ್ರೆ ಸಮಯವಕಾಶ ಬೇಕು. ಬೆಳಗ್ಗೆ 6 ಗಂಟೆಯಿಂದ ಸಂಜೆ 6ರವರೆಗೆ ಚಿತ್ರಮಂದಿರಗಳನ್ನು ಬಂದ್ ಮಾಡುತ್ತೇವೆ’ ಎಂದು ಚಂದ್ರಶೇಖರ್ ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಬಂದ್​ಗೆ ಕಿರುತೆರೆ ಬೆಂಬಲ, ಮಂಗಳವಾರ ಚಿತ್ರೀಕರಣ ಇಲ್ಲ 

ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಸಂಘಟನೆ ಮಂಗಳವಾರ ನಡೆಯಲಿರುವ ಬೆಂಗಳೂರು ಬಂದ್​ಗೆ ಬೆಂಬಲ ನೀಡಿದೆ. ಮಂಗಳವಾರದಂದು ಕಿರುತೆರೆಗೆ ಸಂಬಂಧಿಸಿದ ಯಾವುದೇ ಚಿತ್ರೀಕರಣ ನಡೆಯುವುದಿಲ್ಲ ಎಂದು ಸಂಘದ ಅಧ್ಯಕ್ಷ ಗಣೇಶ್ ರಾವ್ ಕೇಸರ್ಕರ್ ತಿಳಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:12 pm, Mon, 25 September 23

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?