AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವನ್ ಕಲ್ಯಾಣ್ ನಟನೆಯ ‘ಹರಿ ಹರ ವೀರ ಮಲ್ಲು’ ಸಿನಿಮಾಗೆ ಶುರುವಾಗಿದೆ ಕರ್ನಾಟಕದ ಭಯ

ಕರ್ನಾಟಕ ಸರ್ಕಾರದ ಹೊಸ ಏಕರೂಪ ಟಿಕೆಟ್ ದರ ನಿಯಮವು ಚಲನಚಿತ್ರ ಉದ್ಯಮದಲ್ಲಿ ಚರ್ಚೆಯನ್ನು ಹುಟ್ಟುಹಾಕಿದೆ. ಪವನ್ ಕಲ್ಯಾಣ್ ಅವರ "ಹರಿ ಹರ ವೀರ ಮಲ್ಲು" ಚಿತ್ರದ ರಿಲೀಸ್‌ಗೆ ಮುನ್ನ ಈ ನಿಯಮ ಜಾರಿಯಾಗಿದ್ದು, ನಿರ್ಮಾಪಕರಲ್ಲಿ ಆತಂಕ ಸೃಷ್ಟಿಸಿದೆ. 200 ರೂಪಾಯಿಗಳ ಏಕರೂಪ ದರವು ದೊಡ್ಡ ಬಜೆಟ್ ಚಿತ್ರಗಳ ಲಾಭದ ಮೇಲೆ ಪರಿಣಾಮ ಬೀರಬಹುದು ಎಂದು ನಿರೀಕ್ಷಿಸಲಾಗಿದೆ.

ಪವನ್ ಕಲ್ಯಾಣ್ ನಟನೆಯ ‘ಹರಿ ಹರ ವೀರ ಮಲ್ಲು’ ಸಿನಿಮಾಗೆ ಶುರುವಾಗಿದೆ ಕರ್ನಾಟಕದ ಭಯ
ಪವನ್ ಕಲ್ಯಾಣ್
ರಾಜೇಶ್ ದುಗ್ಗುಮನೆ
|

Updated on: Jul 17, 2025 | 7:03 AM

Share

ಟಾಲಿವುಡ್, ಕಾಲಿವುಡ್ ಸೇರಿದಂತೆ ಎಲ್ಲಾ ಭಾಷೆಯ ನಿರ್ಮಾಪಕರಿಗೂ ಕರ್ನಾಟಕ ಅದರಲ್ಲೂ ಬೆಂಗಳೂರು ಹಣ ಬಾಚುವ ಕೇಂದ್ರ ಎಂದರೂ ತಪ್ಪಾಗಲಾರದು. ಇಲ್ಲಿ ಪ್ರತಿ ಸಿನಿಮಾಗಳು ರಿಲೀಸ್ ಆಗಿ ಭರ್ಜರಿ ಕಲೆಕ್ಷನ್ ಮಾಡುತ್ತವೆ. ಸಿನಿಮಾ ಟಿಕೆಟ್ ದರ ಎಷ್ಟೇ ನಿಗದಿ ಮಾಡಿದರೂ ಯಾರೂ ಪ್ರಶ್ನೆ ಮಾಡುವವರು ಇರಲಿಲ್ಲ. ಆದರೆ, ಈಗ ಸರ್ಕಾರದಿಂದಲೇ ಇದಕ್ಕೆ ಕಠಿಣ ಆದೇಶ ಬಂದಿದೆ. ಏಕರೂಪ ಟಿಕೆಟ್ ದರ ನಿಯವನ್ನು ಜಾರಿಗೆ ತರಲಾಗಿದೆ. ಇದರಿಂದ ಏಕಪರದೆ ಹಾಗೂ ಮಲ್ಟಿಪ್ಲೆಕ್ಸ್​ನಲ್ಲಿ ಟಿಕೆಟ್ ದರ 200 ರೂಪಾಯಿ ನಿಗದಿ ಮಾಡಲಾಗಿದೆ. ಈ ವಿಚಾರ ಪವನ್ ಕಲ್ಯಾಣ್ (Pawan Kalyan) ನಿರ್ಮಾಪಕರಿಗೆ ತಲೆಬಿಸಿ ತಂದೊಡ್ಡಿದೆ.

ಕರ್ನಾಟಕದಲ್ಲಿ ಪವನ್ ಕಲ್ಯಾಣ್ ಸಿನಿಮಾ ಧೂಳೆಬ್ಬಿಸುತ್ತದೆ. ಈ ಮೊದಲು ಕೂಡ ಹಲವು ಚಿತ್ರಗಳು ಗೆದ್ದು ಬೀಗಿವೆ. ಈಗ ಅವರ ಅಭಿನಯದ ‘ಹರಿ ಹರ ವೀರ ಮಲ್ಲು’ ಸಿನಿಮಾ ಜುಲೈ 24ರಂದು ರಿಲೀಸ್ ಆಗುತ್ತಿದೆ. ಇದಕ್ಕೂ ಮೊದಲೇ ಸರ್ಕಾರ ಈ ನಿಯಮ ಜಾರಿಗೆ ತಂದಿರೋದು ನಿರ್ಮಾಪಕರ ಚಿಂತೆಗೆ ಕಾರಣ ಆಗಿದೆ.

ಕರ್ನಾಟಕದಲ್ಲಿ ಸಿನಿಮಾ ಟಿಕೆಟ್ ದರ ನಿಗದಿ ಮೇಲೆ ಯಾವುದೇ ನಿಯಂತ್ರಣ ಇರಲಿಲ್ಲ. ಲಂಗು-ಲಗಾಮು ಇಲ್ಲದ ಕಾರಣ ಸಿನಿಮಾ ಟಿಕೆಟ್ ದರವನ್ನು ಬೇಕಾಬಿಟ್ಟಿ ನಿಗದಿ ಮಾಡಲಾಗುತ್ತಿತ್ತು. ಅದರಲ್ಲೂ ಪರಭಾಷೆಯ ಬಿಗ್ ಬಜೆಟ್ ಸಿನಿಮಾಗಳಿಗೆ ಮೊದಲ ದಿನ 500 ರೂಪಾಯಿ ಟಿಕೆಟ್ ದರ ಕಾಮನ್ ಎಂಬಂತಾಗಿತ್ತು.  ಇದಕ್ಕೆ ಕಡಿವಾಣ ಹಾಕಲೆಂದೇ ಸರ್ಕಾರ 200 ರೂಪಾಯಿ ನಿಯಮ ಜಾರಿಗೆ ತಂದಿದೆ.

ಇದನ್ನೂ ಓದಿ
Image
ಎಲ್ಲಿ ಹೋದರು ಕತ್ರಿನಾ ಕೈಫ್? ಬರ್ತ್​ಡೇಗಾದರೂ ಸಿಗುತ್ತಾ ಹೊಸ ಸಿನಿಮಾ?
Image
‘ಟಾಕ್ಸಿಕ್’ ನಟಿ ಕಿಯಾರಾ ಅಡ್ವಾಣಿ ಮನೆಗೆ ಬಂದಳು ಮಹಾಲಕ್ಷ್ಮೀ
Image
ಬರಲಿದೆ ‘ಪ್ಯಾಟೆ ಹುಡುಗೀರ್ ಹಳ್ಳಿ ಲೈಫು’; ಇಲ್ಲಿದೆ ಆಡಿಷನ್ ವಿವರ
Image
ಮುಂದಿನ ಮೂರು ವರ್ಷ ರಜನಿಕಾಂತ್ ಬ್ಯುಸಿ; ಮತ್ತೆ ಮೂರು ಸಿನಿಮಾ ಫೈನಲ್

ಆದರೆ, ಈ ನಿಯಮ ‘ಹರಿ ಹರ ವೀರ ಮಲ್ಲು’ ಚಿತ್ರದ ಮೇಲೆ ಪ್ರಭಾವ ಬೀರಲ್ಲ ಎನ್ನಲಾಗಿದೆ. ಸದ್ಯ ಈ ಆದೇಶಕ್ಕೆ ವಿರೋಧ ಇದ್ದರೆ 15 ದಿನಗಳ ಒಳಗೆ ಮನವಿ ಸಲ್ಲಿಸಬೇಕು. ಹೀಗಾಗಿ, ಮೊದಲ ವಾರದ ಕಲೆಕ್ಷನ್ ವಿಚಾರದಲ್ಲಿ ಈ ಸಿನಿಮಾ ಸೇಫ್ ಎನ್ನಬಹುದು. ಆದರೆ, ಈ ಬಗ್ಗೆ ಇನ್ನೂ ಸ್ಪಷ್ಟ ಚಿತ್ರಣ ಸಿಕ್ಕಿಲ್ಲ. ಬುಕಿಂಗ್ ಓಪನ್ ಆದ ಬಳಿಕ ಈ ಬಗ್ಗೆ ತಿಳಿಯಲಿದೆ.

ಇದನ್ನೂ ಓದಿ: ಆಂಧ್ರ ಪ್ರದೇಶದಲ್ಲಿ ಗಾಂಜಾ ಕಡಿಮೆ ಮಾಡಿದ ನಟ ಪವನ್ ಕಲ್ಯಾಣ್

‘ಹರಿ ಹರ ವೀರ ಮಲ್ಲು’ ಚಿತ್ರದಲ್ಲಿ ನಿಧಿ ಅಗರ್​ವಾಲ್, ಬಾಬಿ ಡಿಯೋಲ್ ಮೊದಲಾದವರು ನಟಿಸಿದ್ದಾರೆ. ಎಂಎಂ ಕೀರವಾಣಿ ಸಂಗೀತ ಸಂಯೋಜನೆ ಚಿತ್ರಕ್ಕೆ ಇದೆ.  ಕ್ರಿಶ್ ಜಗರ್ಲಮುಡಿ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು