AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಮೋರಾ’ ಬಳಿಕ ‘ಲವಲವಿಕೆ’ ಹಾಡಿನ ಮೂಲಕ ಗಮನ ಸೆಳೆದ ‘ಪಾರ್ಟ್ನರ್’ ಸಿನಿಮಾ

ಹರೀಶ್ ದೇವಿತಂದ್ರೆ ಅವರು ನಿರ್ಮಾಣ ಮಾಡಿರುವ ‘ಪಾರ್ಟ್ನರ್’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಶಿವತೇಜಸ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಬೃಂದಾ ಆಚಾರ್ಯ, ಕೃಷ್ಣ ಅಜಯ್ ರಾವ್ ನಟನೆಯ ಈ ಸಿನಿಮಾದ ಹಾಡುಗಳು ಗಮನ ಸೆಳೆಯುತ್ತಿವೆ. ಈ ಸಿನಿಮಾದ ಎರಡನೇ ಹಾಡು ಬಿಡುಗಡೆ ಆಗಿದೆ.

‘ಅಮೋರಾ’ ಬಳಿಕ ‘ಲವಲವಿಕೆ’ ಹಾಡಿನ ಮೂಲಕ ಗಮನ ಸೆಳೆದ ‘ಪಾರ್ಟ್ನರ್’ ಸಿನಿಮಾ
Partner Movie Team
ಮದನ್​ ಕುಮಾರ್​
|

Updated on: Oct 07, 2026 | 9:20 PM

Share

ಹಾಡುಗಳ ಮೂಲಕ ‘ಪಾರ್ಟ್ನರ್’ ಸಿನಿಮಾ ನಿರೀಕ್ಷೆ ಮೂಡಿಸಿದೆ. ‘ಮಳೆ’, ‘ಧೈರ್ಯಂ’, ‘ದಿಲ್ ಪಸಂದ್’ ಖ್ಯಾತಿಯ ಶಿವತೇಜಸ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಸಿನಿಮಾ ಇದು. ಲವ್, ಫ್ಯಾಮಿಲಿ ಎಂಟರ್​ಟೇನರ್ ಸಿನಿಮಾ ಇದಾಗಿದ್ದು ಈಗಾಗಲೇ ‘ಅಮೋರಾ’ ಹಾಡು ವೈರಲ್ ಆಗಿದೆ. ಇದೀಗ ಮತ್ತೊಂದು ಹೊಸ ಹಾಡು ‘ಲವಲವಿಕೆ’ ಬಿಡುಗಡೆ ಆಗಿದೆ. ಬೃಂದಾ ಆಚಾರ್ಯ, ಕೃಷ್ಣ ಅಜಯ್ ರಾವ್ ಅವರು ಪ್ರಮುಖ ಪಾತ್ರದಲ್ಲಿ ನಟಿಸಿರುವ ಈ ಸಿನಿಮಾದಲ್ಲಿ ಈಗಿನ ಜೆನ್-ಝಿ ಜೀವನ ಶೈಲಿ, ಲವ್, ಬ್ರೇಕಪ್, ಲಿವ್-ಇನ್-ರಿಲೇಶನ್​ಶಿಪ್ ಸುತ್ತ ಸಾಗುವ ಕಥೆಯನ್ನು ಈ ಚಿತ್ರದ ಮೂಲಕ ತೋರಿಸಲಾಗುತ್ತಿದೆ.

ಕವಿರಾಜ್ ಅವರು ‘ಲವಲವಿಕೆ’ ಹಾಡನ್ನು ಬರೆದಿದ್ದಾರೆ. ಮುರಳಿ ಮಾಸ್ಟರ್ ಅವರು ನೃತ್ಯ ಸಂಯೋಜನೆ ಮಾಡಿದ್ದಾರೆ. ಕಾರ್ತಿಕ್, ರಮ್ಯ ಅಭ್ಯಂಕರ್ ಅವರು ಈ ಹಾಡಿಗೆ ಧ್ವನಿಯಾಗಿದ್ದಾರೆ. ನಕುಲ್ ಅಭ್ಯಂಕರ್ ಅವರ ಸಂಗೀತ ಸಂಯೋಜನೆಯಲ್ಲಿ ಈ ಹಾಡು ಮೂಡಿಬಂದಿದೆ. ಸುಜ್ಞಾನ್ ಅವರ ಕ್ಯಾಮೆರಾ ಕಣ್ಣಿನಲ್ಲಿ ಈ ಹಾಡು ಸುಂದರವಾಗಿ ಚಿತ್ರಿತವಾಗಿದೆ.

‘ಲವಲವಿಕೆ’ ಹಾಡನ್ನು ನಿರ್ಮಾಪಕರ ಆಧ್ಯಾತ್ಮಿಕ ಗುರುಗಳಾದ ರಂಗನಾಥ್ ಹಾಗೂ ಮಂಜುನಾಥ್ ಬಿಡುಗಡೆ ಮಾಡಿ ಶುಭ ಹಾರೈಸಿದರು. ಈ ವೇಳೆ ಮಾತನಾಡಿದ ಶಿವತೇಜಸ್, ‘ಸಿನಿಮಾ ಅಂದುಕೊಂಡದ್ದಕ್ಕಿಂತಲೂ ಚನ್ನಾಗಿ ಬಂದಿದೆ. ಚಿತ್ರದ ಈ ಹಾಡು ಕಲರ್​ಫುಲ್ ಆಗಿದೆ. ಪ್ರತಿ ಹಾಡನ್ನೂ ಒಂದೊಂದು ಕಲರ್ ಥೀಮ್​ನಲ್ಲಿ ಮಾಡಿದ್ದೇವೆ‌. ಪಾಂಡಿಚೇರಿ, ಬೆಂಗಳೂರಲ್ಲಿ ಚಿತ್ರೀಕರಣ ಮಾಡಿದ್ದೇವೆ’ ಎಂದರು.

‘ರಂಗಾಯಣ ರಘು ಮತ್ತು ಚಿತ್ಕಲಾ ಅವರು ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ. ಈಗಾಗಲೇ ‘ಪ್ರೇಮದ ಊರಲಿ’ ಸಿನಿಮಾದಿಂದ ಕನ್ನಡ ಚಿತ್ರರಂಗಕ್ಕೆ ಹೊಸ ಚೈತನ್ಯ ಮೂಡಿದೆ. ನಮ್ಮ ಸಿನಿಮಾದಲ್ಲಿ ಕೂಡ ಫ್ಯಾಮಿಲಿ ಸಬ್ಜೆಕ್ಟ್ ಇದೆ. ಪ್ರೇಮದ ಊರಲಿ ರೀತಿ ನಮ್ಮ ಸಿನಿಮಾ ಕೂಡ ಹಿಟ್ ಆಗುತ್ತದೆ’ ಎಂದು ನಿರ್ದೇಶಕ ಶಿವತೇಜಸ್ ಅವರು ಭರವಸೆ ವ್ಯಕ್ತಪಡಿಸಿದರು.

ಇದನ್ನೂ ಓದಿ: ‘ಪಾರ್ಟ್ನರ್’ ಚಿತ್ರದ ‘ಅಮೋರಾ’ ಹಾಡಿನಲ್ಲಿ ಕ್ಯೂಟ್ ಆಗಿ ಕಾಣಿಸಿಕೊಂಡ ಅಜಯ್ ರಾವ್, ಬೃಂದಾ

‘ಯಾವುದೇ ಮುಜುಗರ ಇಲ್ಲದೆ ಇಡೀ ಕುಟುಂಬಸಮೇತ ಕೂತು ನೋಡಬಹುದಾದ ಚಿತ್ರವಿದು’ ಎಂದು ನಿರ್ಮಾಪಕ ಹರೀಶ್ ದೇವಿತಂದ್ರೆ ಅವರು ಹೇಳಿದರು. ನಟ ಅಜಯ್ ರಾವ್ ಮಾತನಾಡಿ, ‘ನಿರ್ದೇಶಕರು ಹೇಳಿದ ಕಂಟೆಂಟ್ ನನಗೆ ತುಂಬಾ ಇಷ್ಟವಾಯಿತು. ನನ್ನ ಮನಸಿಗೆ ತುಂಬಾ ಹತ್ತಿರವಾದ ಸಿನಿಮಾ ಇದು. ಹಾಡುಗಳ ಹಾಗೇ ದೃಶ್ಯಗಳು ಕೂಡ ಕಲರ್​ಫುಲ್ ಆಗಿವೆ’ ಎಂದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ