AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಣ್ಣಪ್ಪ’ ಜೊತೆ ಈ ವಾರ ಪೈಪೋಟಿಗೆ ಇಳಿದ ಸಿನಿಮಾಗಳು ಯಾವವು? ಇಲ್ಲಿದೆ ವಿವರ..

ಪ್ಯಾನ್ ಇಂಡಿಯಾ ಮಟ್ಟದಲ್ಲಿ ‘ಕಣ್ಣಪ್ಪ’ ಸಿನಿಮಾ ಬಿಡುಗಡೆ ಆಗುತ್ತಿವೆ. ಕನ್ನಡದಲ್ಲಿ ‘ಎಕ್ಸ್ ಆ್ಯಂಡ್ ವೈ’, ‘ಅವನಿರಬೇಕಿತ್ತು’ ಮುಂತಾದ ಸಿನಿಮಾಗಳು ರಿಲೀಸ್ ಆಗುತ್ತಿವೆ. ಹಿಂದಿಯಲ್ಲಿ ಹಾರರ್ ಕಥಾಹಂದರದ ‘ಮಾ’ ಚಿತ್ರ ತೆರೆಕಾಣುತ್ತಿದೆ. ಕಳೆದ ವಾರ ಬಿಡುಗಡೆ ಆಗಿ ಗಮನ ಸೆಳೆದ ಸಿನಿಮಾಗಳು ಕೂಡ ಪೈಪೋಟಿ ನೀಡುತ್ತಿವೆ.

‘ಕಣ್ಣಪ್ಪ’ ಜೊತೆ ಈ ವಾರ ಪೈಪೋಟಿಗೆ ಇಳಿದ ಸಿನಿಮಾಗಳು ಯಾವವು? ಇಲ್ಲಿದೆ ವಿವರ..
This Week Release
ಮದನ್​ ಕುಮಾರ್​
|

Updated on: Jun 26, 2025 | 6:28 PM

Share

ಶುಕ್ರವಾರ ಬಂದರೆ ಸಿನಿಪ್ರಿಯರಿಗೆ ಹಬ್ಬ. ಹೊಸ ಸಿನಿಮಾ (New  Film) ನೋಡಿ ಕಣ್ತುಂಬಿಕೊಳ್ಳುವ ಉತ್ಸಾಹ. ಸಿಕ್ಕಾಪಟ್ಟೆ ಪೈಪೋಟಿ ಇರುವ ಈ ಕಾಲದಲ್ಲಿ ಒಂದೇ ದಿನ ಹಲವು ಸಿನಿಮಾಗಳು ಬಿಡುಗಡೆ ಆಗುತ್ತವೆ. ಆ ಪೈಕಿ ಯಾವುದನ್ನು ನೋಡಬೇಕು ಎಂಬ ಗೊಂದಲ ಸಹಜ. ಈ ವಾರ (ಜೂನ್ 27) ಕೂಡ ಹಲವು ಸಿನಿಮಾಗಳು ತೆರೆ ಕಾಣುತ್ತಿವೆ. ಆ ಪೈಕಿ ‘ಕಣ್ಣಪ್ಪ’ ಸಿನಿಮಾ (Kannappa) ಪ್ರಮುಖವಾಗಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ಬಿಡುಗಡೆ ಆಗುತ್ತಿದೆ. ಸ್ಟಾರ್ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ. ‘ಕಣ್ಣಪ್ಪ’ ಸಿನಿಮಾಗೆ ಪೈಪೋಟಿ ನೀಡಲು ಇನ್ನೂ ಹಲವು ಸಿನಿಮಾಗಳು ತೆರೆಗೆ ಬರುತ್ತಿವೆ.

‘ಕಣ್ಣಪ್ಪ’ ಸಿನಿಮಾದಲ್ಲಿ ವಿಷ್ಣು ಮಂಚು ಹಾಗೂ ಮೋಹನ್ ಬಾಬು ಅವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಅಕ್ಷಯ್ ಕುಮಾರ್, ಪ್ರಭಾಸ್, ಮೋಹನ್​ಲಾಲ್ ಮುಂತಾದವರು ಈ ಚಿತ್ರದಲ್ಲಿ ಅತಿಥಿ ಪಾತ್ರಗಳನ್ನು ಮಾಡಿದ್ದಾರೆ. ಆ ಕಾರಣದಿಂದ ಹೈಪ್ ಜಾಸ್ತಿ ಆಗಿದೆ. ಶರತ್ ಕುಮಾರ್, ಕಾಜಲ್ ಅಗರ್​ವಾಲ್ ಮುಂತಾದ ಕಲಾವಿದರು ಕೂಡ ಪಾತ್ರವರ್ಗದಲ್ಲಿ ಇದ್ದಾರೆ. ತೆಲುಗು, ಕನ್ನಡ, ಹಿಂದಿ ಮುಂತಾದ ಭಾಷೆಗಳಲ್ಲಿ ಈ ಚಿತ್ರ ರಿಲೀಸ್ ಆಗುತ್ತಿದೆ.

ಹಿಂದಿಯಲ್ಲಿ ‘ಮಾ’ ಸಿನಿಮಾ ಬಿಡುಗಡೆ ಆಗುತ್ತಿದೆ. ಈ ಸಿನಿಮಾದಲ್ಲಿ ಕಾಜೋಲ್ ಅವರು ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಇದು ಹಾರರ್ ಸಿನಿಮಾ ಎಂಬುದು ವಿಶೇಷ. ಹಾಗಿದ್ದರೂ ಕೂಡ ಸೆನ್ಸಾರ್ ಮಂಡಳಿಯಿಂದ ‘ಯು/ಎ’ ಪ್ರಮಾಣ ಪತ್ರ ಪಡೆದಿದೆ. ಅಜಯ್ ದೇವಗನ್ ಅವರು ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಟ್ರೇಲರ್ ಮೂಲಕ ‘ಮಾ’ ಸಿನಿಮಾ ಗಮನ ಸೆಳೆದಿದೆ.

ಇದನ್ನೂ ಓದಿ
Image
ಸಿನಿಮಾಗಳನ್ನು ಬಿಟ್ಟು ವಾಚ್‌ಮ್ಯಾನ್ ಆದ ನಟ; ಈ ಪರಿಸ್ಥಿತಿ ಯಾರಿಗೂ ಬರಬಾರದು
Image
ದಕ್ಷಿಣದ ನಿರ್ಮಾಪಕರ ನೋಡಿ ಕಲಿಯಿರಿ: ಸ್ಟಾರ್ ನಟ ಟಾಂಗ್
Image
ಬಾಲಿವುಡ್ ಹೀರೋಗಳ ಬಣ್ಣ ಬಯಲು ಮಾಡಿದ ಸೋನು ಸೂದ್
Image
‘ಬಾಲಿವುಡ್ ಸಿನಿಮಾಗಳು ಭಾರತವನ್ನು ಕೆಟ್ಟದಾಗಿ ತೋರಿಸಿವೆ’; ರಿಷಬ್ ಶೆಟ್ಟಿ

ಕನ್ನಡದಲ್ಲಿ ‘ಅಥಣಿ’, ‘ಅವನಿರಬೇಕಿತ್ತು’, ‘ಬ್ಲಡಿ ಬಾಬು’, ‘ರಾಜರತ್ನಾಕರ’, ‘ತಿಮ್ಮನ ಮೊಟ್ಟೆಗಳು’, ‘ಎಕ್ಸ್ ಆ್ಯಂಡ್ ವೈ’ ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಈಗಾಗಲೇ ಬಿಡುಗಡೆ ಆಗಿರುವ ‘ಮಾದೇವ’, ‘ಎಡಗೈಯೇ ಅಪಘಾತಕ್ಕೆ ಕಾರಣ’, ‘ಸಂಜು ವೆಡ್ಸ್ ಗೀತಾ 2’ ಸಿನಿಮಾಗಳು ಕೂಡ ಪ್ರದರ್ಶನ ಆಗುತ್ತಿವೆ. ಬಾಕ್ಸ್ ಆಫೀಸ್​ನಲ್ಲಿ ಈ ಎಲ್ಲ ಸಿನಿಮಾಗಳ ನಡುವೆ ಪೈಪೋಟಿ ಇದೆ.

ಇದನ್ನೂ ಓದಿ: ‘ಕಣ್ಣಪ್ಪ’ ಸಿನಿಮಾಕ್ಕೆ ಪ್ರಭಾಸ್, ಅಕ್ಷಯ್ ಕುಮಾರ್, ಮೋಹನ್​ಲಾಲ್ ಪಡೆದ ಸಂಭಾವನೆ ಎಷ್ಟು?

ಹಾಲಿವುಡ್​ನಲ್ಲಿ ಬ್ರಾಡ್​ ಪಿಟ್ ನಟನೆಯ ‘ಎಫ್​ 1: ದಿ ಮೂವೀ’ ಕೂಡ ಇದೇ ವಾರ ತೆರೆಕಾಣುತ್ತಿದೆ. ಕಳೆದ ವಾರ ಬಿಡುಗಡೆ ಆಗಿ ಗಮನ ಸೆಳೆದಿರುವ ಹಿಂದಿಯ ‘ಸಿತಾರೆ ಜಮೀನ್ ಪರ್’, ತಮಿಳಿನ ‘ಕುಬೇರ’ ಸಿನಿಮಾಗಳು ಕೂಡ ಈ ವೀಕೆಂಡ್​​ನಲ್ಲಿ ಉತ್ತಮ ಪ್ರದರ್ಶನ ಕಾಣಲಿವೆ. ಹೊಸ ಸಿನಿಮಾಗಳಿಗೆ ಈ ಚಿತ್ರಗಳು ಪೈಪೋಟಿ ನೀಡುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?