AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕರಾವಳಿ’ ಕಿರಿಕ್: ಪ್ರಜ್ವಲ್​ಗೆ ಸಂಭಾವನೆ ಬಾಕಿ ಉಳಿಸಿಕೊಂಡಿದ್ದೇಕೆ? ವಿವರಿಸಿದ ಚಿತ್ರತಂಡ

Karavali movie: ಪ್ರಜ್ವಲ್ ದೇವರಾಜ್ ಹೊರತಾಗಿಯೇ ಸಿನಿಮಾದ ಟ್ರೈಲರ್ ಬಿಡುಗಡೆ ಸಹ ಮಾಡಲಾಗಿದೆ. ಟ್ರೈಲರ್ ಬಿಡುಗಡೆ ವೇಳೆ ಪ್ರಜ್ವಲ್ ಅಭಿಮಾನಿಗಳು ಕಾರ್ಯಕ್ರಮಕ್ಕೆ ನುಗ್ಗಿ ಗಲಾಟೆ ಸಹ ಮಾಡಿದ್ದರು. ಘಟನೆಯ ಬಳಿಕ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಜ್ವಲ್ ಅಭಿಮಾನಿಗಳ ವಿರುದ್ಧ ದೂರು ಸಹ ದಾಖಲಾಗಿದೆ. ಇದರ ಜೊತೆಗೆ ಚಿತ್ರತಂಡವು ಪ್ರಜ್ವಲ್ ದೇವರಾಜ್ ಅವರ ಅಭಿಮಾನಿಗಳ ಆರೋಪಕ್ಕೆ ಪ್ರತಿಕ್ರಿಯೆ ನೀಡಿದೆ. ಪ್ರಜ್ವಲ್​​ ಅವರಿಗೆ ಬಾಕಿ ಹಣ ಉಳಿಸಿಕೊಳ್ಳಲು ಕಾರಣ ಏನೆಂಬುದನ್ನು ಸಹ ವಿವರಿಸಿದೆ.

‘ಕರಾವಳಿ’ ಕಿರಿಕ್: ಪ್ರಜ್ವಲ್​ಗೆ ಸಂಭಾವನೆ ಬಾಕಿ ಉಳಿಸಿಕೊಂಡಿದ್ದೇಕೆ? ವಿವರಿಸಿದ ಚಿತ್ರತಂಡ
Karavali Movie
ಮಂಜುನಾಥ ಸಿ.
|

Updated on:Jul 10, 2026 | 3:37 PM

Share

ಪ್ರಜ್ವಲ್ ದೇವರಾಜ್ (Prajwal Devaraj) ನಟನೆಯ ‘ಕರಾವಳಿ’ ಸಿನಿಮಾ ಬಿಡುಗಡೆಗೆ ಕೆಲವೇ ದಿನಗಳು ಇರುವಾಗ ಸಿನಿಮಾ ವಿವಾದಕ್ಕೆ ಸಿಲುಕಿಕೊಂಡಿದೆ. ನಾಯಕ ನಟ ಪ್ರಜ್ವಲ್ ದೇವರಾಜ್ ಮತ್ತು ಸಿನಿಮಾ ನಿರ್ದೇಶಕರ ನಡುವೆ ಭಿನ್ನಾಭಿಪ್ರಾಯ ಮೂಡಿದೆ. ಪ್ರಜ್ವಲ್ ದೇವರಾಜ್ ಹೊರತಾಗಿಯೇ ಸಿನಿಮಾದ ಟ್ರೈಲರ್ ಬಿಡುಗಡೆ ಸಹ ಮಾಡಲಾಗಿದೆ. ಟ್ರೈಲರ್ ಬಿಡುಗಡೆ ವೇಳೆ ಪ್ರಜ್ವಲ್ ಅಭಿಮಾನಿಗಳು ಕಾರ್ಯಕ್ರಮಕ್ಕೆ ನುಗ್ಗಿ ಗಲಾಟೆ ಸಹ ಮಾಡಿದ್ದರು. ಘಟನೆಯ ಬಳಿಕ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಜ್ವಲ್ ಅಭಿಮಾನಿಗಳ ವಿರುದ್ಧ ದೂರು ಸಹ ದಾಖಲಾಗಿದೆ. ಇದರ ಜೊತೆಗೆ ಚಿತ್ರತಂಡವು ಪ್ರಜ್ವಲ್ ದೇವರಾಜ್ ಅವರ ಅಭಿಮಾನಿಗಳ ಆರೋಪಕ್ಕೆ ಪ್ರತಿಕ್ರಿಯೆ ನೀಡಿದೆ. ಪ್ರಜ್ವಲ್​​ ಅವರಿಗೆ ಬಾಕಿ ಹಣ ಉಳಿಸಿಕೊಳ್ಳಲು ಕಾರಣ ಏನೆಂಬುದನ್ನು ಸಹ ವಿವರಿಸಿದೆ.

ನಟ ಪ್ರಜ್ವಲ್ ದೇವರಾಜ್ ಅವರಿಗೆ ಕೊಡಲು ಬಾಕಿ ಇದ್ದ ಹಣವನ್ನು ಘಟನೆ ನಡೆದ (ಟ್ರೈಲರ್ ಬಿಡುಡಗೆ ಕಾರ್ಯಕ್ರಮ ಗಲಾಟೆ) ಮರುದಿನವೇ ಅಧಿಕೃತವಾಗಿ ಪಾವತಿಸಲಾಗಿದೆ. ನಟ ಪ್ರಜ್ವಲ್ ದೇವರಾಜ್ ಅವರು ‘ಕರಾವಳಿ’ ಚಿತ್ರದಲ್ಲಿನ ಪಾತ್ರಕ್ಕಾಗಿ ಜಿಮ್ ಮಾಡಿ ಸಿಕ್ಸ್ ಪ್ಯಾಕ್ (Physical Transformation/6 packs) ಮಾಡುವುದಾಗಿ ಒಪ್ಪಿಕೊಂಡಿದ್ದರು ಮತ್ತು ಅದು ಕಥೆಗೆ ಬಹುಮುಖ್ಯ ಅಂಶವಾಗಿತ್ತು. ಅದೇ ಕಾರಣಕ್ಕಾಗಿ ಅಷ್ಟು ದೊಡ್ಡ ಮೊತ್ತವನ್ನು ಸಂಭಾವನೆಯಾಗಿ ಕೊಡಲು ನಿರ್ಮಾಣ ಸಂಸ್ಥೆ ಒಪ್ಪಿಕೊಂಡಿತ್ತು. ಆದರೆ ಮೇಲ್ನೋಟಕ್ಕೆ ದೈಹಿಕ ರೂಪಾಂತರ ಸಾಧ್ಯವಾಗದೇ ಇದ್ದಿದ್ದರಿಂದ ಉಳಿದ ಹಣವನ್ನು ಬಾಕಿಯಾಗಿ ಉಳಿಸಿಕೊಳ್ಳಲಾಗಿತ್ತು ಎಂದು ಚಿತ್ರತಂಡ ಇದೀಗ ಹೊರಡಿಸಿರುವ ಪ್ರಕಟಣೆಯಲ್ಲಿ ಹೇಳಿದೆ.

ಇದನ್ನೂ ಓದಿ:‘ನಾವು ರೌಡಿಗಳಲ್ಲ, ಎಲ್ಲರಂತೆ ಮನುಷ್ಯರು’; ಪ್ರಜ್ವಲ್ ದೇವರಾಜ್ ಫ್ಯಾನ್ಸ್ ಅಳಲು

ನಟ ಪ್ರಜ್ವಲ್ ದೇವರಾಜ್, ಬಾಕಿ ಹಣವನ್ನು ಕೊಡದಿದ್ದರೆ ಡಬ್ಬಿಂಗ್ ಮಾಡುವುದಿಲ್ಲವೆಂದು ಖಡಾಖಂಡಿತವಾಗಿ ಹೇಳಿದ್ದರಿಂದ, ಅವರಿಗಾಗಿ ಎರಡು ತಿಂಗಳು ಕಾದ ನಂತರ, ಅನಿವಾರ್ಯವಾಗಿ ಬೇರೆಯವರಿಂದ ಡಬ್ಬಿಂಗ್ ಮಾಡಿಸಲಾಯಿತು. ಈ ಬಗ್ಗೆ ನಟ ಪ್ರಜ್ವಲ್ ದೇವರಾಜ್ ಅವರನ್ನು ಹಲವಾರು ಬಾರಿ ಸಂಪರ್ಕಿಸಲು ಪ್ರಯತ್ನಿಸಿದರೂ ಅವರು ಸಂಪರ್ಕಕ್ಕೆ ಸಿಕ್ಕಿರುವುದಿಲ್ಲ ಹಾಗೂ ಸಿನಿ ರಂಗದ ಪ್ರಮುಖರು ಮತ್ತು ನಿರ್ಮಾಪಕರಾದ ಕೆ ವಿ ಎನ್ ಸಂಸ್ಥೆಯ ಸುಪ್ರೀತ್ ರವರು, ನಿರ್ಮಾಪಕರಾದ ಜಾಕ್ ಮಂಜು ರವರು ಮತ್ತು ನಿರ್ಮಾಪಕರಾದ ಲೋಹಿತ್ (ಚಕ್ರವ್ಯೂಹ) ರವರೆಲ್ಲರೂ ಪ್ರತ್ಯೇಕವಾಗಿ ಅವರನ್ನು ಸಂಪರ್ಕಿಸಿ ಮಧ್ಯಸ್ಥಿಕೆಗೆ ಪ್ರಯತ್ನಿಸಿದರಾದರು ಅದು ವಿಫಲವಾಗಿ, ಬಾಕಿ ಹಣ ಪಾವತಿಯಾಗದೆ ‘ಕರಾವಳಿ’ ಚಿತ್ರದ ಯಾವುದೇ ಕೆಲಸಗಳನ್ನು ಭಾಗಿಯಾಗುವುದಿಲ್ಲವೆಂದು ಖಡಾಖಂಡಿತವಾಗಿ ತಿರಸ್ಕರಿಸಿದ್ದರು ಎಂದು ಚಿತ್ರತಂಡ ಹೇಳಿದೆ.

ಟ್ರೈಲರ್ ನಲ್ಲಿ ಅವರ ಧ್ವನಿ ಇಲ್ಲವೆನ್ನುವುದು ನಟ ಪ್ರಜ್ವಲ್ ದೇವರಾಜ್ ರವರಿಗೆ ತಿಳಿದಿತ್ತು ಮತ್ತು ಬೇರೆಯವರಿಂದ ಡಬ್ಬಿಂಗ್ ಮಾಡಿಸಿರುವ ವಿಚಾರವನ್ನು ಅವರ ಮ್ಯಾನೇಜರ್ ಮೂಲಕ ತಲುಪಿಸಲಾಗಿತ್ತು. ಇಷ್ಟಾಗಿಯೂ ಬಾಕಿ ಇರುವ ಹಣ ತಲುಪಿದ ಮೇಲೂ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಅಪರಿಚಿತ ಖಾತೆಗಳಿಂದ ಇಲ್ಲ-ಸಲ್ಲದನ್ನೆಲ್ಲಾ ಆರೋಪ ಮಾಡುತ್ತಾ ‘ಕರಾವಳಿ’ ಸಿನಿಮಾ, ನಿರ್ದೇಶಕರು ಮತ್ತು ನಿರ್ಮಾಣ ಸಂಸ್ಥೆಯ ಮೇಲೆ ಅಪಪ್ರಚಾರ ಮಾಡುತ್ತಿರುವವರ ಮೇಲೆ ತನಿಖೆ ನಡೆಸುವಂತೆ ಮೇಲ್ಕಂಡ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:35 pm, Fri, 10 July 26

Follow Us