
ಬಾಲಿವುಡ್ ನಟಿ ಕರೀನಾ ಕಪೂರ್ ಖಾನ್ (Kareena Kapoor Khan) ಅವರಿಗೆ ಈಗ 44 ವರ್ಷ ವಯಸ್ಸು. ಎರಡು ಮಕ್ಕಳ ತಾಯಿ ಅವರು. ಚಿತ್ರರಂಗಕ್ಕೆ ಕಾಲಿಟ್ಟು 25 ವರ್ಷಗಳು ಕಳೆದಿವೆ. ಹಾಗಿದ್ದರೂ ಕೂಡ ಅವರಿಗೆ ಇಂದಿಗೂ ಅಷ್ಟೇ ಬೇಡಿಕೆ ಇದೆ. ಬಾಲಿವುಡ್ ಮಾತ್ರವಲ್ಲದೇ ದಕ್ಷಿಣ ಭಾರತದ ಚಿತ್ರರಂಗದಲ್ಲೂ ಕರೀನಾ ಕಪೂರ್ ಅವರಿಗೆ ಬೇಡಿಕೆ ಸೃಷ್ಟಿ ಆಗಿದೆ. ಪ್ರಭಾಸ್ (Prabhas) ನಟನೆಯ ‘ದಿ ರಾಜಾ ಸಾಬ್’ (The Raja Saab) ಸಿನಿಮಾದಲ್ಲಿ ಸಹ ಕರೀನಾ ಕಪೂರ್ ಅವರು ನಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಬಗ್ಗೆ ಚಿತ್ರತಂಡದವರು ಕರೀನಾ ಕಪೂರ್ ಜೊತೆ ಈಗಾಗಲೇ ಒಂದು ಸತ್ತಿನ ಮಾತುಕಥೆ ಮಾಡಿದ್ದಾರೆ ಎಂದು ಸುದ್ದಿ ಆಗಿದೆ.
‘ದಿ ರಾಜಾ ಸಾಬ್’ ಸಿನಿಮಾದ ಬಹುತೇಕ ಕೆಲಸಗಳು ಮುಕ್ತಾಯ ಆಗಿವೆ. ಈಗಾಗಲೇ ಈ ಸಿನಿಮಾದ ಟೀಸರ್ ಬಿಡುಗಡೆಯಾಗಿ ಗಮನ ಸೆಳೆದಿದೆ. ಇದು ಹಾರರ್ ಸಿನಿಮಾ. ಪ್ರಭಾಸ್ ಅವರು ಇದೇ ಮೊದಲ ಬಾರಿಗೆ ಹಾರರ್ ಕಥೆಯನ್ನು ಆಯ್ಕೆ ಮಾಡಿಕೊಂಡಿರುವುದರಿಂದ ನಿರೀಕ್ಷೆ ಜೋರಾಗಿದೆ. ಇದೇ ಸಿನಿಮಾದಲ್ಲಿ ಕರೀನಾ ಕಪೂರ್ ಕೂಡ ನಟಿಸುವ ಸಾಧ್ಯತೆ ಇದೆ.
ಈ ಸಿನಿಮಾದಲ್ಲಿ ಒಂದು ಸ್ಪೆಷಲ್ ಸಾಂಗ್ ಇರಬೇಕು ಎಂದು ಚಿತ್ರತಂಡ ನಿರ್ಧರಿಸಿದೆಯಂತೆ. ಅದರಲ್ಲಿ ಡ್ಯಾನ್ಸ್ ಮಾಡಲು ಕರೀನಾ ಕಪೂರ್ ಅವರಿಗೆ ಆಫರ್ ನೀಡಲಾಗಿದೆ. ಕರೀನಾ ಒಪ್ಪಿಕೊಂಡರೆ ಅವರಿಗೆ ದುಬಾರಿ ಸಂಭಾವನೆ ನೀಡಲು ನಿರ್ಮಾಪಕರು ಸಿದ್ಧರಿದ್ದಾರೆ. ಕರೀನಾ ಕಡೆಯಿಂದ ಅಂತಿಮ ನಿರ್ಧಾರ ಏನು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.
ಮಾರುತಿ ಅವರು ‘ದಿ ರಾಜಾ ಸಾಬ್’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಮೂಲಕ ಟಿಜಿ ವಿಶ್ವಪ್ರಸಾದ್ ಅವರು ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಪ್ರಭಾಸ್ ಜೊತೆ ಸಂಜಯ್ ದತ್, ನಿಧಿ ಅಗರ್ವಾಲ್, ಮಾಳವಿಕಾ ಮೋಹನನ್ ಮುಂತಾದವರು ಕೂಡ ‘ದಿ ರಾಜಾ ಸಾಬ್’ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.
ಇದನ್ನೂ ಓದಿ: ‘ಕರೀನಾ ಕಪೂರ್ ಸಹವಾಸ ಮಾಡಬೇಡ’: ಸೈಫ್ಗೆ ಎಚ್ಚರಿಕೆ ನೀಡಿದ್ದ ಅಕ್ಷಯ್ ಕುಮಾರ್
ಈ ಮೊದಲು ಕೂಡ ಕರೀನಾ ಕಪೂರ್ ಖಾನ್ ಬಗ್ಗೆ ಕೆಲವು ಗಾಸಿಪ್ ಕೇಳಿಬಂದಿತ್ತು. ಪ್ರಭಾಸ್ ಮತ್ತು ನಿರ್ದೇಶಕ ಸಂದೀಪ್ ರೆಡ್ಡಿ ವಂಗ ಅವರ ಕಾಂಬಿನೇಷನ್ನಲ್ಲಿ ಮೂಡಿಬರಲಿರುವ ‘ಸ್ಪಿರಿಟ್’ ಸಿನಿಮಾದಲ್ಲಿ ಕರೀನಾ ನಟಿಸುತ್ತಾರೆ ಎನ್ನಲಾಗಿತ್ತು. ಆದರೆ ಅದು ನಿಜವಾಗಲಿಲ್ಲ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.