BC Patil: ‘ಕೆಲವು ತಪ್ಪು ನಿರ್ಧಾರಗಳಿಂದ ಹೊಡೆತ ಬಿದ್ದಿದೆ’; ಬಿಜೆಪಿ ಸೋಲಿಗೆ ಕಾರಣ ತಿಳಿಸಿದ ಬಿ.ಸಿ. ಪಾಟೀಲ್​

Karnataka Assembly Elections: ‘ಜನರ ತೀರ್ಮಾನಕ್ಕೆ ನಾನು ತಲೆಬಾಗುತ್ತೇನೆ. ನಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ನಿಲ್ಲಬಾರದು. ಈಗಿನ ಶಾಸಕರು ಆ ಕಾರ್ಯ ಮುಂದುವರಿಸಿಕೊಂಡು ಹೋಗಲಿ’ ಎಂದು ಬಿ.ಸಿ. ಪಾಟೀಲ್​ ಹೇಳಿದ್ದಾರೆ.

BC Patil: ‘ಕೆಲವು ತಪ್ಪು ನಿರ್ಧಾರಗಳಿಂದ ಹೊಡೆತ ಬಿದ್ದಿದೆ’; ಬಿಜೆಪಿ ಸೋಲಿಗೆ ಕಾರಣ ತಿಳಿಸಿದ ಬಿ.ಸಿ. ಪಾಟೀಲ್​
ಬಿ.ಸಿ. ಪಾಟೀಲ್
Follow us
ಮದನ್​ ಕುಮಾರ್​
|

Updated on: May 14, 2023 | 2:30 PM

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ (Karnataka Assembly Elections) ಬಿಜೆಪಿಗೆ ಸೋಲುಂಟಾಗಿದೆ. ಕೇವಲ 66 ಸ್ಥಾನಗಳನ್ನು ಗೆಲ್ಲುವಲ್ಲಿ ಭಾರತೀಯ ಜನತಾ ಪಾರ್ಟಿ ತೃಪ್ತಿಪಟ್ಟುಕೊಂಡಿದೆ. ಭಾರಿ ಭರವಸೆ ಹೊಂದಿದ್ದ ಘಟಾನುಘಟಿ ನಾಯಕರು ಕೂಡ ಸೋಲು ಕಂಡಿದ್ದಾರೆ. ರಾಜ್ಯ ಮತ್ತು ಕೇಂದ್ರದಲ್ಲಿ ಅಧಿಕಾರದಲ್ಲಿ ಇದ್ದಾಗಿಯೂ ಕೂಡ ಬಿಜೆಪಿ (BJP) ಈ ರೀತಿ ಹಿನ್ನಡೆ ಅನುಭವಿಸುತ್ತದೆ ಎಂದು ಕಾರ್ಯಕರ್ತರು ನಿರೀಕ್ಷಿಸಿರಲಿಲ್ಲ. ಒಟ್ಟಿನಲ್ಲಿ ಬಿಜೆಪಿಗೆ ಈ ಸೋಲು ದೊಡ್ಡ ಆಘಾತ ನೀಡಿದೆ. ಈಗ ಸೋಲಿನ ಬಗ್ಗೆ ಅನೇಕರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ನಟ, ರಾಜಕಾರಣಿ ಬಿ.ಸಿ. ಪಾಟೀಲ್​ (BC Patil) ಕೂಡ ಈ ಬಗ್ಗೆ ಮಾತನಾಡಿದ್ದಾರೆ. ಹಿರೇಕೆರೂರಿನಲ್ಲಿ ಮಾತನಾಡಿದ ಅವರು ‘ಕೆಲವು ತಪ್ಪು ನಿರ್ಧಾರಗಳಿಂದ ಹೊಡೆತ ಬಿದ್ದಿವೆ’ ಎಂದಿದ್ದಾರೆ.

‘ಕಾಂಗ್ರೆಸ್​ನವರದ್ದು ಬೋಗಸ್​ ಗ್ಯಾರಂಟಿ ಅಂತ ನಂತರ ಗೊತ್ತಾಗತ್ತೆ’:

‘ಬಂಜಾರ ಸಮುದಾಯದವರು ದೊಡ್ಡ ಪ್ರತಿಭಟನೆ ಮಾಡಿದ್ದರು. ಸದಾಶಿವ ಆಯೋಗವನ್ನು ಜಾರಿಗೆ ತಂದಿದ್ದು ಹರಿಜನರಿಗೆ ಅನುಕೂಲ ಆಗಿದ್ದು ಅವರಿಗೆ ಅರ್ಥ ಆಗಲಿಲ್ಲ. ರೇಷನ್​ ಕಾರ್ಡ್​ಗೆ ಜನರು ಮರುಳಾದರು. ಕಾಂಗ್ರೆಸ್​ನವರು ಗ್ಯಾರಂಟಿ ಕಾರ್ಡ್​ ಪ್ರಿಂಟ್​ ಮಾಡಿ ಜನರ ಕೈಗೆ ನೀಡಿದರು. ಅದು ಬೋಗಸ್​ ಎಂಬುದು ಜನರಿಗೆ ಮುಂದೆ ಗೊತ್ತಾಗುತ್ತದೆ. ಆ ಗ್ಯಾರಂಟಿಗಳನ್ನು ಈಡೇರಿಸಲು ಸಾಧ್ಯವಿಲ್ಲ. ಆಗ ನಾವು ಬೀದಿಗೆ ಇಳಿದು ಹೋರಾಟ ಮಾಡಬೇಕಾಗುತ್ತದೆ’ ಎಂದು ಬಿಸಿ ಪಾಟೀಲ್​ ಹೇಳಿದ್ದಾರೆ.

ಇದನ್ನೂ ಓದಿ: ಮರು ಎಣಿಕೆ ಮಾಡಿದರಾದರೂ ಬಿಜೆಪಿ ಅಭ್ಯರ್ಥಿ ಕೋರ್ಟ್​ ಮೊರೆ: ಯಾವ ಕ್ಷೇತ್ರ? ಏನಾಯ್ತು? ಈ ಸ್ಟೋರಿ ನೋಡಿ

‘ಜನರು ನನಗೆ ಈ ಹಿಂದೆ ಆಶೀರ್ವಾದ ಮಾಡಿದ್ದರು. ಒಂದು ತೃಪ್ತಿ ಇದೆ. ನಾನು ಸೋತರೂ ಕೂಡ ತಾಲೂಕಿನ ಜನರ ಋಣ ತೀರಿಸಿದ್ದೇನೆ. ಎಲ್ಲ ಕೆರೆಗಳನ್ನು ತುಂಬಿಸುವಂತಹ ಯೋಜನೆಗಳನ್ನು ಮಾಡಿದ್ದೇವೆ. ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದೇವೆ. ಸಂಪೂರ್ಣ ಮೂಲಸೌಕರ್ಯವನ್ನು ಒದಗಿಸಿ ತಾಲೂಕಿಗೆ ಹೊಸ ರೂಪ ನೀಡಿದ್ದೇನೆ. ಮನುಷ್ಯನಿಗೆ ತೃಪ್ತಿ ಇರಬೇಕು. ನಾವು ಮಾಡಿದ ಕೆಲಸದ ಬಗ್ಗೆ ಅಪಪ್ರಚಾರ ಮಾಡಿದ್ದಕ್ಕೆ ಕೆಲವರು ಮತ ಹಾಕದೇ ಇರಬಹುದು. 69 ಸಾವಿರ ಜನರು ನನ್ನ ಪರವಾಗಿ ನಿಂತಿದ್ದಾರೆ. ನಾವು ಮಾಡಿದ ಅಭಿವೃದ್ಧಿಯನ್ನು ಈಗಿನ ಶಾಸಕರು ಮುಂದುವರಿಸಿಕೊಂಡು ಹೋಗಲಿ ಎಂಬುದು ನನ್ನ ಆಶಯ’ ಎಂದು ಬಿ.ಸಿ. ಪಾಟೀಲ್​ ಹೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಮುಕ್ತ ಭಾರತ ಮಾಡುತ್ತೇವೆ ಎಂದಿತ್ತು ಬಿಜೆಪಿ, ಈಗ ಅದೇ ದಕ್ಷಿಣ ಭಾರತದಿಂದ ಮುಕ್ತವಾಗಿದೆ: ಮಲ್ಲಿಕಾರ್ಜುನ ಖರ್ಗೆ

‘ಕ್ಷೇತ್ರದಲ್ಲಿ ಅಭಿವೃದ್ಧಿ ನಿಲ್ಲಬಾರದು. ಈಗಿನ ಶಾಸಕ ಯುಬಿ ಬಣಕಾರ್​ ಅವರಿಗೆ ಜನರು ಆಶೀರ್ವಾದ ಮಾಡಿದ್ದಾರೆ. ಅವರ ಪಕ್ಷ ಆಡಳಿತಕ್ಕೆ ಬಂದಿದೆ. ಅವರು ಎಲ್ಲ ಕೆಲಸವನ್ನು ಮುಂದುವರಿಸಿಕೊಂಡು ಹೋಗುತ್ತಾರೆ ಅಂತ ನಾನು ನಂಬಿದ್ದೇನೆ. ಜನರ ತೀರ್ಮಾನಕ್ಕೆ ನಾನು ತಲೆಬಾಗುತ್ತೇನೆ’ ಎಂದಿದ್ದಾರೆ ಬಿ.ಸಿ. ಪಾಟೀಲ್​.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ