ನಟಿ ಶೃತಿ ಹರಿಹರನ್ ಕೇಸ್: ಪ್ರಶಾಂತ್ ಸಂಬರಗಿಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್
ಬಹುಭಾಷಾ ನಟಿ ಶೃತಿ ಹರಿಹರನ್ ದಾಖಲಿಸಿದ್ದ ಕೇಸ್ಗೆ ಸಂಬಂಧಿಸಿದಂತೆ ಪ್ರಶಾಂತ್ ಸಂಬರಗಿಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಬಿಗ್ಬಾಸ್ (Bigg Boss) ಖ್ಯಾತಿಯ ಪ್ರಶಾಂತ್ ಸಂಬರಗಿ (Prashant Sambargi) ವಿರುದ್ಧ ಬಹುಭಾಷಾ ನಟಿ ಶೃತಿ ಹರಿಹರನ್ (Shruti Hariharan) ದಾಖಲಿಸಿದ್ದ ಪ್ರಕರಣಕ್ಕೆ ಹೈಕೋರ್ಟ್ (High court) ತಡೆ ನೀಡಿದೆ. ಮಿ ಟೂ ವಿವಾದದ ವೇಳೆ ಅವಹೇಳನಕಾರಿ ಹೇಳಿಕೆ. ಮಹಿಳೆಯ ಮಾನಹಾನಿ, ಬೆದರಿಕೆ ಸಂಬಂಧ ಶೃತಿ ಹರಿಹರನ್ ಅವರು ಪ್ರಶಾಂತ್ ಸಂಬರಗಿ ದೂರು ದೂರು ನೀಡಿದ್ದರು. ಈ ಪ್ರಕರಣವನ್ನು ಪ್ರಶ್ನಿಸಿ ಪ್ರಶಾಂತ್ ಸಂಬರಗಿ ಅವರು ಹೈಕೋರ್ಟ್‌ಗೆ ಅರ್ಜಿ ಅಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಏಕಸದಸ್ಯ ಪೀಠ ಹೈಕೋರ್ಟ್, ಇಂದು(ಡಿಸೆಂಬರ್ 16) ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.
ಇದನ್ನೂ ಓದಿ: KGF 2 ಹಾಡಿನ ದುರ್ಬಳಕೆ ಆರೋಪ: ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ನೀಡಿದ ಕರ್ನಾಟಕ ಹೈಕೋರ್ಟ್
ವಿಸ್ಮಯ ಸಿನಿಮಾ ಶೂಟಿಂಗ್ ವೇಳೆ ತಮ್ಮ ಮೇಲೆ ಲೈಂಗಿಕ ಕಿರುಕುಳ ಮಾಡಲಾಗಿದೆ ಎಂದು ಹೆಸರಾಂತ ನಟರೊಬ್ಬರ ಮೇಲೆ ನಟಿ ಶ್ರುತಿ ಹರಿಹರನ್ ಆರೋಪ ಮಾಡಿದ್ದರು. ಈ ಆರೋಪಕ್ಕೆ ಸಂಬಂಧಿಸಿದಂತೆ ನಟನ ಪರವಾಗಿ ಪ್ರಶಾಂತ್ ಸಂಬರಗಿ ನಾನಾ ಹೇಳಿಕೆಗಳನ್ನು ನೀಡಿದ್ದರು. ಮಾಧ್ಯಮಗಳ ಜೊತೆ ಈ ಪ್ರಕರಣದ ಬಗ್ಗೆ ಮಾತನಾಡುವಾಗ ಪ್ರಶಾಂತ್ ಸಂಬರಗಿ ತಮ್ಮ ಚಾರಿತ್ರ್ಯ ಹರಣ ಮಾಡುತ್ತಿದ್ದಾರೆ ಎಂದು ಆರೋಪಿಸಿ ನಟಿ ಶ್ರುತಿ ಹರಿಹರನ್ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 8ನೇ ಎಸಿಎಂಎಂ ಕೋರ್ಟ್ , ಪ್ರಶಾಂತ್ ಸಂಬರಗಿಗೆ ಸಮನ್ಸ್ ನೀಡಿತ್ತು.
ಇನ್ನು ಈ ಪ್ರಕರಣವನ್ನು ರದ್ದು ಕೋರಿ ಪ್ರಶಾಂತ್ ಸಂಬರಗಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಪೀಠ, ಸಂಬರಗಿ ವಿರುದ್ಧ ಪ್ರಕರಣಕ್ಕೆ ಮುಂದಿನ ವಿಚಾರಣೆವರೆಗೂ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಈ ವಿಚಾರಣೆಯನ್ನು 2023ರ ಫೆಬ್ರುವರಿ 1ಕ್ಕೆ ಮುಂದೂಡಿದೆ. ಅಲ್ಲದೇ ಈ ಬಗ್ಗೆ ಹೈಕೋರ್ಟ್, ನಟಿ ಶೃತಿ ಹರಿಹರನ್ಗೆ ನೋಟಿಸ್ ಸಹ ನೀಡಿದೆ.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ