AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ಸೀಕ್ವೆಲ್​ನೊಂದಿಗೆ ತೆರೆಮೇಲೆ ಬರೋಕೆ ರೆಡಿ ಆದ ನಟ ಕಾರ್ತಿ

‘ಸರ್ದಾರ್’ ಸಿನಿಮಾದ ಮೊದಲ ಭಾಗದಲ್ಲಿ ಕಾರ್ತಿ ದ್ವಿಪಾತ್ರದಲ್ಲಿ ಮಿಂಚಿದ್ದರು. ಈಗ ಸೀಕ್ವೆಲ್​​ನಲ್ಲಿ ಅವರ ಜೊತೆ ಮತ್ತೋರ್ವ ಸ್ಟಾರ್ ಹೀರೋ ಕೂಡ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಅವರು ಬೇರಾರೂ ಅಲ್ಲ ವಿಜಯ್ ಸೇತುಪತಿ. ಈ ವಿಚಾರ ಕೇಳಿ ಕಾರ್ತಿ ಹಾಗೂ ವಿಜಯ್ ಸೇತುಪತಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಮತ್ತೊಂದು ಸೀಕ್ವೆಲ್​ನೊಂದಿಗೆ ತೆರೆಮೇಲೆ ಬರೋಕೆ ರೆಡಿ ಆದ ನಟ ಕಾರ್ತಿ
ಕಾರ್ತಿ
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on:Aug 11, 2023 | 8:21 AM

Share

ವಿಭಿನ್ನ ಕಥೆಗಳನ್ನು ಆಯ್ದುಕೊಂಡು ಸಿನಿಮಾದಲ್ಲಿ ನಟಿಸುತ್ತಾರೆ ತಮಿಳು ನಟ ಕಾರ್ತಿ (Karthi). ಈ ಮೂಲಕ ಅವರು ಸಾಕಷ್ಟು ಜನಪ್ರಿಯತೆ ಪಡೆದಿದ್ದಾರೆ. ಸಹೋದರ ಸೂರ್ಯ ಅವರ ರೀತಿಯೇ ಕಾರ್ತಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡುತ್ತಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಕಾರ್ತಿಗೆ ಒಳ್ಳೆಯ ಕ್ರೇಜ್ ಇದೆ. ಇತ್ತೀಚೆಗೆ ಮಣಿರತ್ನಂ ನಿರ್ದೇಶನದ ‘ಪೊನ್ನಿಯಿನ್ ಸೆಲ್ವನ್’ ಚಿತ್ರದಲ್ಲಿ ಕಾರ್ತಿ ನಟಿಸಿದ್ದರು. ಎರಡು ಭಾಗಗಳಲ್ಲಿ ಬಂದ ಈ ಚಿತ್ರ ಯಶಸ್ಸು ಕಂಡಿದೆ. ಈ ಸಿನಿಮಾ ತಮಿಳುನಾಡು, ಕರ್ನಾಟಕ ಮೊದಲಾದ ಕಡೆಗಳಲ್ಲಿ ರಿಲೀಸ್ ಆಗಿತ್ತು. ಕಾರ್ತಿ ಅವರ ಅಭಿನಯ ಪ್ರೇಕ್ಷಕರ ಮನಗೆದ್ದಿತ್ತು. ಈಗ ಮತ್ತೊಂದು ಸೀಕ್ವೆಲ್​ನಲ್ಲಿ ನಟಿಸೋಕೆ ಅವರು ರೆಡಿ ಆಗಿದ್ದಾರೆ.

ಕಾರ್ತಿ ಅಭಿನಯದ ‘ಸರ್ದಾರ್’ ಸಿನಿಮಾದ ಸೀಕ್ವೆಲ್ ಸಿದ್ಧವಾಗುತ್ತಿದೆ. 2022ರಲ್ಲಿ ‘ಸರ್ದಾರ್’ ಸಿನಿಮಾ ತೆರೆಗೆ ಬಂತು. ಈ ಚಿತ್ರದಲ್ಲಿ ಅವರು ದ್ವಿಪಾತ್ರದಲ್ಲಿ ನಟಿಸಿದ್ದರು. ಈ ಸಿನಿಮಾ ತಮಿಳಿನ ಜೊತೆಗೆ ತೆಲುಗಿನಲ್ಲಿಯೂ ಯಶಸ್ವಿಯಾಯಿತು. ಈ ಚಿತ್ರ ನೂರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಈಗ ಚಿತ್ರದ ನಿರ್ಮಾಪಕ ಲಕ್ಷ್ಮಣ್ ಕುಮಾರ್ ಸೀಕ್ವೆಲ್ ರೆಡಿ ಮಾಡಲು ಯೋಜಿಸಿದ್ದಾರೆ. ಮತ್ತೊಮ್ಮೆ ಅದೇ ಮ್ಯಾಜಿಕ್ ರಿಪೀಟ್ ಮಾಡಲು ರೆಡಿಯಾಗುತ್ತಿದ್ದಾರೆ.

‘ಸರ್ದಾರ್’ ಚಿತ್ರಕ್ಕೆ ಪಿಎಸ್​ ಮಿತ್ರನ್ ಅವರು ನಿರ್ದೇಶನ ಮಾಡಿದ್ದರು. ಈ ಚಿತ್ರದ ಕ್ಲೈಮ್ಯಾಕ್ಸ್‌ನಲ್ಲಿ ಸೀಕ್ವೆಲ್ ಬರಲಿದೆ ಎಂದು ಸುಳಿವು ನೀಡಿದ್ದರು. ಸ್ವಲ್ಪ ಗ್ಯಾಪ್‌ ತೆಗೆದುಕೊಂಡು ಸೀಕ್ವೆಲ್​​ನ ಚಿತ್ರೀಕರಿಸಲು ಪ್ಲ್ಯಾನ್ ರೂಪಿಸಲಾಗಿದೆ. ಈ ವಿಚಾರ ಕೇಳಿ ಕಾರ್ತಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

‘ಸರ್ದಾರ್’ ಸಿನಿಮಾದ ಮೊದಲ ಭಾಗದಲ್ಲಿ ಕಾರ್ತಿ ದ್ವಿಪಾತ್ರದಲ್ಲಿ ಮಿಂಚಿದ್ದರು. ಈಗ ಸೀಕ್ವೆಲ್​​ನಲ್ಲಿ ಅವರ ಜೊತೆ ಮತ್ತೋರ್ವ ಸ್ಟಾರ್ ಹೀರೋ ಕೂಡ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಅವರು ಬೇರಾರೂ ಅಲ್ಲ ವಿಜಯ್ ಸೇತುಪತಿ. ದಕ್ಷಿಣ ಭಾರತ ಹಾಗೂ ಉತ್ತರ ಭಾರತದಲ್ಲಿ ಬೇಡಿಕೆಯ ನಟನಾಗಿ ವಿಜಯ್ ಸೇತುಪತಿ ಮಿಂಚುತ್ತಿದ್ದಾರೆ. ‘ಸರ್ದಾರ್ 2’ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಅವರು ನಟಿಸಲು ರೆಡಿ ಆಗಿದ್ದಾರೆ. ಈ ಕಾರಣಕ್ಕೆ ‘ಸರ್ದಾರ್ 2’ ಮೇಲಿನ ನಿರೀಕ್ಷೆ ಹೆಚ್ಚಾಗಿದೆ.

ಇತ್ತೀಚೆಗೆ ಸೀಕ್ವೆಲ್ ಮಾಡುವ ಟ್ರೆಂಡ್ ಜೋರಾಗಿದೆ. ಹಲವು ಚಿತ್ರಗಳಿಗೆ ಸೀಕ್ವೆಲ್ ಬರುತ್ತಿದೆ. ಆ ಸಾಲಿಗೆ ‘ಸರ್ದಾರ್’ ಸಿನಿಮಾ ಕೂಡ ಸೇರ್ಪಡೆ ಆಗುತ್ತಿದೆ. ಕಥೆಯನ್ನು ಹೇಗೆ ಮುಂದುವರಿಸಲಾಗುತ್ತದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

ಇದನ್ನೂ ಓದಿ: 100 ಕೋಟಿ ರೂಪಾಯಿ ಗಳಿಸಿದ ‘ಸತ್ಯಪ್ರೇಮ್​ ಕಿ ಕಥಾ’: ಕಿಯಾರಾ ಅಡ್ವಾಣಿ, ಕಾರ್ತಿಕ್​ ಆರ್ಯನ್​ಗೆ ಮತ್ತೊಂದು ಗೆಲುವು

ಚಿತ್ರರಂಗದಲ್ಲಿ ಕಾರ್ತಿ ಭಿನ್ನವಾಗಿ ಗುರುತಿಸಿಕೊಂಡಿದ್ದಾರೆ. ಕಳೆದ ವರ್ಷ ಅವರು ಸಾಲು ಸಾಲು ಹಿಟ್ ನೀಡಿದ್ದಾರೆ. 2019ರಲ್ಲಿ ರಿಲೀಸ್ ಆದ ಅವರ ನಟನೆಯ ‘ಕೈದಿ’ ಸಿನಿಮಾಗೆ ಸೀಕ್ವೆಲ್​ ಸಿದ್ಧವಾಗುತ್ತಿದೆ. ಈ ಚಿತ್ರ ಅಧಿಕೃತವಾಗಿ ಘೋಷಣೆ ಆಗಿಲ್ಲ. ಈ ಚಿತ್ರವನ್ನು ಲೋಕೇಶ್ ಕನಗರಾಜ್ ಅವರು ನಿರ್ದೇಶನ ಮಾಡಲಿದ್ದಾರೆ. ‘ಜಪಾನ್’ ಸಿನಿಮಾದಲ್ಲಿ ಕಾರ್ತಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಭಿನ್ನ ಗೆಟಪ್ ತಾಳಿದ್ದಾರೆ. ಈ ಚಿತ್ರ ಟೀಸರ್ ಮೂಲಕ ಸಾಕಷ್ಟು ಗಮನ ಸೆಳೆದಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:00 am, Fri, 11 August 23

ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ