AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜನೀಕಾಂತ್ ಬಳಿಕ ಚಿರಂಜೀವಿಗೆ ಸಿನಿಮಾ ನಿರ್ದೇಶಿಸಲಿರುವ ಕಾರ್ತಿಕ್ ಸುಬ್ಬರಾಜು

ಕಾರ್ತಿಕ್ ಸುಬ್ಬರಾಜು ದಕ್ಷಿಣದ ಪ್ರತಿಭಾವಂತ ನಿರ್ದೇಶಕರುಗಳಲ್ಲಿ ಒಬ್ಬರು. ಪೂರ್ಣ ಕಲಾತ್ಮಕ ಅಲ್ಲದ ಇತ್ತ ಪೂರ್ಣ ಮಾಸ್ ಕಮರ್ಶಿಯಲ್ ಸಹ ಅಲ್ಲದ ರೀತಿಯ ಸಿನಿಮಾಗಳನ್ನು ನಿರ್ದೇಶಿಸುವ ಕಾರ್ತಿಕ್, ಈಗಾಗಲೇ ‘ಪಿಜ್ಜಾ’, ರಜನೀಕಾಂತ್ ನಟನೆಯ ‘ಪೆಟ್ಟಾ’, ‘ಜಗಮೇ ತಂದಿರಂ’ ಇನ್ನೂ ಕೆಲವು ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. ಇದೀಗ ಲೋಕೇಶ್, ಮೊದಲ ಬಾರಿಗೆ ತಮಿಳಿನಿಂದ ಹೊರಗೆ ಬಂದು ಸಿನಿಮಾ ನಿರ್ದೇಶಿಸಲು ಮುಂದಾಗಿದ್ದು, ತೆಲುಗಿನ ಸ್ಟಾರ್ ನಟ ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಕತೆ ಹೇಳಿದ್ದಾರಂತೆ.

ರಜನೀಕಾಂತ್ ಬಳಿಕ ಚಿರಂಜೀವಿಗೆ ಸಿನಿಮಾ ನಿರ್ದೇಶಿಸಲಿರುವ ಕಾರ್ತಿಕ್ ಸುಬ್ಬರಾಜು
Karthik Chiranjeevi
ಮಂಜುನಾಥ ಸಿ.
|

Updated on: Oct 18, 2026 | 12:51 PM

Share

ಮುಖ್ಯಾಂಶಗಳು

  • ನಿರ್ದೇಶಕ ಕಾರ್ತಿಕ್ ಸುಬ್ಬರಾಜು ಹೊಸ ಸಿನಿಮಾ
  • ಮೆಗಾಸ್ಟಾರ್ ಚಿರಂಜೀವಿಗೆ ಕತೆ ಹೇಳಿರುವ ಕಾರ್ತಿಕ್
  • ಕಾರ್ತಿಕ್ ಕತೆ ಒಪ್ಪಿಕೊಳ್ತಾರಾ ಮೆಗಾಸ್ಟಾರ್ ಚಿರಂಜೀವಿ

ಕಾರ್ತಿಕ್ ಸುಬ್ಬರಾಜು ದಕ್ಷಿಣದ ಪ್ರತಿಭಾವಂತ ನಿರ್ದೇಶಕರುಗಳಲ್ಲಿ ಒಬ್ಬರು. ಪೂರ್ಣ ಕಲಾತ್ಮಕ ಅಲ್ಲದ ಇತ್ತ ಪೂರ್ಣ ಮಾಸ್ ಕಮರ್ಶಿಯಲ್ ಸಹ ಅಲ್ಲದ ರೀತಿಯ ಸಿನಿಮಾಗಳನ್ನು ನಿರ್ದೇಶಿಸುವ ಕಾರ್ತಿಕ್, ಈಗಾಗಲೇ ‘ಪಿಜ್ಜಾ’, ರಜನೀಕಾಂತ್ ನಟನೆಯ ‘ಪೆಟ್ಟಾ’, ‘ಜಗಮೇ ತಂದಿರಂ’ ಇನ್ನೂ ಕೆಲವು ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. ಇದೀಗ ಲೋಕೇಶ್, ಮೊದಲ ಬಾರಿಗೆ ತಮಿಳಿನಿಂದ ಹೊರಗೆ ಬಂದು ಸಿನಿಮಾ ನಿರ್ದೇಶಿಸಲು ಮುಂದಾಗಿದ್ದು, ತೆಲುಗಿನ ಸ್ಟಾರ್ ನಟ ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಕತೆ ಹೇಳಿದ್ದಾರಂತೆ.

‘ಪರ್ಮಿಟ್ ರೂಮ್’ ಪಾಡ್‌ಕಾಸ್ಟ್‌ನಲ್ಲಿ ಮಾತನಾಡಿದ ಕಾರ್ತಿಕ್ ಸುಬ್ಬರಾಜ್, ಭವಿಷ್ಯದಲ್ಲಿ ಚಿರಂಜೀವಿ ಅವರೊಂದಿಗೆ ಕೆಲಸ ಮಾಡುವ ಆಶಯವಿದೆ ಎಂದು ಹೇಳಿದ್ದಾರೆ. ಈ ಕುರಿತು ಮಾತನಾಡಿರು ನಿರ್ದೇಶಕರು, ‘ನಾನು ಚಿರಂಜೀವಿ ಸರ್ ಅವರಿಗೆ ಒಂದು ಕಥೆ ಹೇಳಿದ್ದೇನೆ, ಆದರೆ ಸದ್ಯಕ್ಕೆ ಯಾವುದೇ ಅಂತಿಮ ನಿರ್ಧಾರವಾಗಿಲ್ಲ. ನಾನು ಅವರೊಂದಿಗೆ ಕೆಲಸ ಮಾಡುತ್ತೇನೆ ಎಂಬ ಭರವಸೆಯಿದೆ’ ಎಂದು ತಿಳಿಸಿದ್ದಾರೆ. ಕಾರ್ತಿಕ್ ಸುಬ್ಬರಾಜು ಬಹಳ ಒಳ್ಳೆಯ ಸಿನಿಮಾ ನಿರ್ದೇಶಕ ಕೆಲವಾರು ಪ್ರಶಸ್ತಿಗಳನ್ನೂ ಸಹ ಪಡೆದಿದ್ದಾರೆ. ಇದೀಗ ಚಿರಂಜೀವಿ ಅವರು ಕಾರ್ತಿಕ್ ಜೊತೆ ನಟಿಸಿದರೆ ಅದೊಂದು ಒಳ್ಳೆಯ ಸಿನಿಮಾ ಆಗುವುದು ಖಾತ್ರಿ.

ಮೆಗಾಸ್ಟಾರ್ ಚಿರಂಜೀವಿ ಅವರ ಸಿನಿಮಾ ಜರ್ನಿ ಗ್ರಾಫ್ ಕೋವಿಡ್ ಬಳಿಕ ಪಾತಾಳಕ್ಕೆ ಇಳಿದಿದೆ. ಕೋವಿಡ್ ಬಳಿಕ ಚಿರಂಜೀವಿ ನಟಿಸಿರುವ ಯಾವೊಂದು ಸಿನಿಮಾ ಸಹ ಹಿಟ್ ಆಗಿಲ್ಲ. ಪ್ರಸ್ತುತ ಅವರು ಬಾಬಿ ಕೊಲ್ಲಿ ನಿರ್ದೇಶನದ ‘ಕಾಕಾ’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ‘ವಿಶ್ವಂಭರ’ ಹೆಸರಿನ ಫ್ಯಾಂಟಸಿ ಥ್ರಿಲ್ಲರ್ ಸಿನಿಮಾನಲ್ಲೂ ಚಿರು ನಟಿಸಿದ್ದಾರೆ ಆದರೆ ಆ ಸಿನಿಮಾ ನಿಂತು ಹೋಗಿದೆ ಎನ್ನಲಾಗುತ್ತಿದೆ. ನಾನಿ ನಿರ್ಮಾಣ ಮಾಡಿ ಶ್ರೀಕಾಂತ್ ಒಡೆಲ ನಿರ್ದೇಶನ ಮಾಡುತ್ತಿರುವ ಸಿನಿಮಾನಲ್ಲೂ ಚಿರಂಜೀವಿ ನಟನೆ ಮಾಡಲಿದ್ದಾರೆ. ಈಗ ಕಾರ್ತಿಕ್ ಸಹ ಕತೆ ಹೇಳಿದ್ದು, ಕತೆಯನ್ನು ಚಿರಂಜೀವಿ ಒಪ್ಪಿಕೊಳ್ಳುತ್ತಾರಾ ಇಲ್ಲವೇ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ:ರಜನೀಕಾಂತ್ ಸಿನಿಮಾನಲ್ಲಿ ಶ್ರೀಲೀಲಾ, ಚಿತ್ರೀಕರಣದಲ್ಲಿ ಭಾಗಿ

ಕಾರ್ತಿಕ್ ಸುಬ್ಬರಾಜು ತಮಿಳಿನ ಸ್ಟಾರ್ ನಿರ್ದೇಶಕ ಇತ್ತೀಚೆಗಷ್ಟೆ ಕಾರ್ತಿಕ್ ನಿರ್ದೇಶನ ಮಾಡಿರುವ ‘ಡೊರೊತಿ’ ಸಿನಿಮಾ ಬಿಡುಗಡೆ ಆಗಿದ್ದು, ಸಿನಿಮಾ ಸಾಕಷ್ಟು ವಿವಾದಗಳನ್ನು ಸಹ ಎಬ್ಬಿಸಿದೆ. ಸಿನಿಮಾನಲ್ಲಿ ಲಿಂಗ ಅಸಮಾನತೆ ಸೇರಿದಂತೆ ಎಲ್​​​ಜಿಬಿಟಿಕ್ಯು ಕುರಿತಾದ ವಿಷಯಗಳನ್ನು ಒಳಗೊಂಡಿದೆ. ಇದೇ ಕಾರಣಕ್ಕೆ ಕೆಲವರು ಸಿನಿಮಾ ಅನ್ನು ವಿರೋಧ ಮಾಡಿದ್ದರೆ ಇನ್ನು ಕೆಲವರು ಸಿನಿಮಾ ಅನ್ನು ಕೊಂಡಾಡಿದ್ದೂ ಸಹ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಸಂಸತ್ ಭವನದಲ್ಲಿ ಮಹನೀಯರ ಫೋಟೋ ಜತೆ ಟಿಪ್ಪು ಫೋಟೋ ಇಡಬೇಕು: ವಾಟಾಳ್ ನಾಗರಾಜ್
ಸಂಸತ್ ಭವನದಲ್ಲಿ ಮಹನೀಯರ ಫೋಟೋ ಜತೆ ಟಿಪ್ಪು ಫೋಟೋ ಇಡಬೇಕು: ವಾಟಾಳ್ ನಾಗರಾಜ್
ರಾಜ್​ ಸಂಬಂಧಿ ಮನೆಯಲ್ಲಿ ಸ್ಫೋಟ: ಸ್ಥಳ ಮಹಜರು ವೇಳೆ ಹೈಡ್ರಾಮಾ
ರಾಜ್​ ಸಂಬಂಧಿ ಮನೆಯಲ್ಲಿ ಸ್ಫೋಟ: ಸ್ಥಳ ಮಹಜರು ವೇಳೆ ಹೈಡ್ರಾಮಾ
ಎನ್​ಡಿಎ ಪರೀಕ್ಷೆಯಲ್ಲಿ ಐತಿಹಾಸಿಕ ಸಾಧನೆ ಮಾಡಿದ ಭದ್ರಾವತಿಯ ಶ್ರೇಯಾ
ಎನ್​ಡಿಎ ಪರೀಕ್ಷೆಯಲ್ಲಿ ಐತಿಹಾಸಿಕ ಸಾಧನೆ ಮಾಡಿದ ಭದ್ರಾವತಿಯ ಶ್ರೇಯಾ
ಬರ ಪರಿಹಾರದಲ್ಲಿ ವ್ಯತ್ಯಾಸ: ಆಕ್ರೋಶ; ಸರ್ಕಾರಕ್ಕೆ ಚೆಕ್ ಬರೆದ ಅನ್ನದಾತರು
ಬರ ಪರಿಹಾರದಲ್ಲಿ ವ್ಯತ್ಯಾಸ: ಆಕ್ರೋಶ; ಸರ್ಕಾರಕ್ಕೆ ಚೆಕ್ ಬರೆದ ಅನ್ನದಾತರು
ರೈಲಿನಡಿ ಬಿದ್ದು ಸಾಯುತ್ತಿದ್ದ ಮಹಿಳೆಯ ಜೀವ ಕಾಪಾಡಿದ ಆರ್​ಪಿಎಫ್​ ಸಿಬ್ಬಂದಿ
ರೈಲಿನಡಿ ಬಿದ್ದು ಸಾಯುತ್ತಿದ್ದ ಮಹಿಳೆಯ ಜೀವ ಕಾಪಾಡಿದ ಆರ್​ಪಿಎಫ್​ ಸಿಬ್ಬಂದಿ
ದರ್ಶನ್ ಜೈಲಿನಿಂದ ಬಿಡುಗಡೆಯಾಗಲಿ ಎಂದು ಹಾಸನಾಂಬೆಗೆ ಹರಕೆ ಹೊತ್ತ ಅಭಿಮಾನಿ
ದರ್ಶನ್ ಜೈಲಿನಿಂದ ಬಿಡುಗಡೆಯಾಗಲಿ ಎಂದು ಹಾಸನಾಂಬೆಗೆ ಹರಕೆ ಹೊತ್ತ ಅಭಿಮಾನಿ
ಕೆಎಸ್‌ಆರ್‌ಟಿಸಿ ಲಗೇಜ್ ಶುಲ್ಕ ಹೆಚ್ಚಳ: ಇಂದಿನಿಂದಲೇ ಹೊಸ ದರ ಜಾರಿ
ಕೆಎಸ್‌ಆರ್‌ಟಿಸಿ ಲಗೇಜ್ ಶುಲ್ಕ ಹೆಚ್ಚಳ: ಇಂದಿನಿಂದಲೇ ಹೊಸ ದರ ಜಾರಿ
ಬಿಗ್ ಬಾಸ್ ಕನ್ನಡ: ತಾಂಡವ್, ಗಗನ್ ಸ್ನೇಹದಲ್ಲಿ ಬಿರುಕು; ಇನ್ಮುಂದೆ ಬೇರೆ ಆಟ
ಬಿಗ್ ಬಾಸ್ ಕನ್ನಡ: ತಾಂಡವ್, ಗಗನ್ ಸ್ನೇಹದಲ್ಲಿ ಬಿರುಕು; ಇನ್ಮುಂದೆ ಬೇರೆ ಆಟ
ಮುಂಬೈನಲ್ಲಿ ಪಟಾಕಿ ಅಂಗಡಿಯಲ್ಲಿ ಸ್ಫೋಟ; 16 ವರ್ಷದ ಬಾಲಕ ಸಾವು
ಮುಂಬೈನಲ್ಲಿ ಪಟಾಕಿ ಅಂಗಡಿಯಲ್ಲಿ ಸ್ಫೋಟ; 16 ವರ್ಷದ ಬಾಲಕ ಸಾವು
7 ಮಂದಿ ಕೊಲೆ ಪ್ರಕರಣ: ಆರೋಪಿ ಇಂದುಶೇಖರ್​​ ವಿಚಾರಣೆ ಮತ್ತಷ್ಟು ತೀವ್ರ
7 ಮಂದಿ ಕೊಲೆ ಪ್ರಕರಣ: ಆರೋಪಿ ಇಂದುಶೇಖರ್​​ ವಿಚಾರಣೆ ಮತ್ತಷ್ಟು ತೀವ್ರ