ಸ್ವಂತ ತಂಗಿಯ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ನಟಿ ಕಾರುಣ್ಯ ರಾಮ್

Karunya Ram movie: ನಟಿ ಕಾರುಣ್ಯ ರಾಮ್ ಅವರು ಇದೀಗ ಸ್ವಂತ ತಂಗಿಯ ವಿರುದ್ಧವೇ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಕಾರುಣ್ಯ ರಾಮ್ ಅವರು ತಮ್ಮ ಸಹೋದರಿ ಸಮೃದ್ಧಿ ರಾಮ್ ವಿರುದ್ಧ ಆರ್​​ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತಮ್ಮ ಸಹೋದರಿ, ಮನೆಯಲ್ಲಿರುವ ಹಣ, ಚಿನ್ನವನ್ನೆಲ್ಲ ದುರುಪಯೋಗ ಪಡಿಸಿಕೊಂಡು, ಮನೆ ಬಿಟ್ಟು ಹೋಗಿದ್ದಾರೆ ಎಂದು ದೂರು ನೀಡಿದ್ದಾರೆ ನಟ.

ಸ್ವಂತ ತಂಗಿಯ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ನಟಿ ಕಾರುಣ್ಯ ರಾಮ್
Karunya Samrudhi

Updated on: Jan 15, 2026 | 8:43 AM

ಕನ್ನಡ ಸಿನಿಮಾ (Kannada Cinema) ಮತ್ತು ಕಿರುತೆರೆ ಎರಡರಲ್ಲೂ ಕೆಲಸ ಮಾಡಿ ಜನಪ್ರಿಯತೆ ಪಡೆದಿರುವ ನಟಿ ಕಾರುಣ್ಯ ರಾಮ್ ಅವರು ಇದೀಗ ಸ್ವಂತ ತಂಗಿಯ ವಿರುದ್ಧವೇ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಕಾರುಣ್ಯ ರಾಮ್ ಅವರು ತಮ್ಮ ಸಹೋದರಿ ಸಮೃದ್ಧಿ ರಾಮ್ ವಿರುದ್ಧ ಆರ್​​ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತಮ್ಮ ಸಹೋದರಿ, ಮನೆಯಲ್ಲಿರುವ ಹಣ, ಚಿನ್ನವನ್ನೆಲ್ಲ ದುರುಪಯೋಗ ಪಡಿಸಿಕೊಂಡು, ಮನೆ ಬಿಟ್ಟು ಹೋಗಿದ್ದಾರೆ ಎಂದು ದೂರು ನೀಡಿದ್ದಾರೆ ನಟ.

ಆಗಿರುವುದಿಷ್ಟು, ಕಾರುಣ್ಯಾ ರಾಮ್ ಸಹೋದರಿ ಸಮೃದ್ಧಿ ರಾಮ್ ಅವರು ಮೇಕಪ್ ಕಲಾವಿದೆ ಆಗಿದ್ದರು, ಬಳಿಕ ಕೆಲವು ಧಾರಾವಾಹಿಗಳಲ್ಲಿ ಸಹ ನಟಿಸಿದರು ಆದರೆ ನಟನೆ ಅವರ ಕೈ ಹಿಡಿಯಲಿಲ್ಲ. ಕೊನೆಗೆ ಉದ್ಯಮವೊಂದನ್ನು ಪ್ರಾರಂಭ ಮಾಡಿದ್ದರು. ಇದೀಗ ನಟಿ ಕಾರುಣ್ಯ ರಾಮ್ ನೀಡಿರುವ ದೂರಿನಂತೆ, ಅವರ ಸಹೋದರಿ ಸಮೃದ್ಧಿ ರಾಮ್ ಅವರು ಬೆಟ್ಟಿಂಗ್ ಗೀಳಿಗೆ ಬಿದ್ದಿದ್ದು, ಬೆಟ್ಟಿಂಗ್​​ನಿಂದಾಗಿ ಸುಮಾರು 25 ಲಕ್ಷ ರೂಪಾಯಿ ಹಣ ಕಳೆದುಕೊಂಡಿದ್ದಾರೆ.

ಬೆಟ್ಟಿಂಗ್ ಆಡಿ ಕಳೆದುಕೊಂಡ ಹಣ ತುಂಬಲು ಖಾಸಗಿ ವ್ಯಕ್ತಿಗಳಿಂದ ಅಧಿಕ ಬಡ್ಡಿಗೆ ಸಾಲ ಪಡೆದುಕೊಂಡಿದ್ದಾರೆ. ಅಷ್ಟು ಮಾತ್ರವೇ ಅಲ್ಲದೆ, ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಹಣ ಮತ್ತು ಚಿನ್ನದ ಒಡವೆಗಳನ್ನು ಸಹ ಬಳಸಿ ಹಣ ಪಡೆದು ಬೆಟ್ಟಿಂಗ್ ಆಡಿ ಹಾಳು ಮಾಡಿದ್ದಾರೆ. ಮನೆಯವರು, ಹಣ ಮತ್ತು ಚಿನ್ನದ ಬಗ್ಗೆ ಪ್ರಶ್ನೆ ಮಾಡಿದಾಗ ಸಮೃದ್ಧಿ ಮನೆ ಬಿಟ್ಟು ಹೋಗಿದ್ದಾರೆ.

ಇದನ್ನೂ ಓದಿ:ಟೀಕೆ ತಾಳಲಾರದೆ ಇನ್​​ಸ್ಟಾ ಡಿಲೀಟ್ ಮಾಡಿದ ‘ಟಾಕ್ಸಿಕ್’ ಟೀಸರ್ ನಟಿ?

ಇದೀಗ ಸಮೃದ್ಧಿಗೆ ಸಾಲ ಕೊಟ್ಟವರು ಮನೆ ಬಳಿ ಬಂದು ಗಲಾಟೆ ಮಾಡುತ್ತಿದ್ದಾರೆ. ಅಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಸಹ ಏನೇ ಪೋಸ್ಟ್ ಹಾಕಿದರು ಅಶ್ಲೀಲ ಸಂದೇಶಗಳನ್ನು, ಬೆದರಿಕೆ ಸಂದೇಶಗಳನ್ನು ಕಳಿಸುತ್ತಿದ್ದಾರೆ ಎಂದು ಕಾರುಣ್ಯ ರಾಮ್ ಆರೋಪಿಸಿದ್ದಾರೆ. ಕಾರುಣ್ಯ ಅವರು ಸಹೋದರಿ ಸಮೃದ್ಧಿಯ ಜೊತೆಗೆ ಪ್ರತಿಭಾ, ರಕ್ಷಿತ್‌, ಪ್ರಜ್ವಲ್‌, ಸಾಗರ್‌ ಎಂಬುವರ ವಿರುದ್ಧವೂ ಆರ್​​ಆರ್​​ ನಗರ ಪೊಲೀಸರು ಕಾರುಣ್ಯ ರಾಮ್ ನೀಡಿರುವ ದೂರು ದಾಖಲಿಸಿಕೊಂಡಿದ್ದು ವಿಚಾರಣೆ ಆರಂಭಿಸಿದ್ದಾರೆ.

ಕಾರುಣ್ಯ ರಾಮ್ ಅವರು ‘ಪೆಟ್ರೊಮ್ಯಾಕ್ಸ್’, ‘ವಜ್ರಕಾಯ’, ‘ಗುಬ್ಬಿ ಮೇಲೆ ಬ್ರಹ್ಮಾಸ್ತ್ರ’, ‘ಎರಡನೇ ಮದುವೆ’ ಇನ್ನೂ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕಾರುಣ್ಯ ರಾಮ್ ಅವರ ಸಹೋದರಿ ಸಮೃದ್ಧಿ ರಾಮ್, ‘ರಾಜಾ ರಾಣಿ’ ‘ಮನೆ ದೇವ್ರು’ ಧಾರಾವಾಹಿಗಳಲ್ಲಿ ಸಹ ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ