ಫೆಮಿನಾ ಮಿಸ್ ಇಂಡಿಯಾ ಪಟ್ಟ ಗೆದ್ದ ಕಾರವಾರ ಶಾಸಕನ ಮಗಳು ಸಾಧ್ವಿ ಸತೀಶ್ ಸೈಲ್​

ಕಾರವಾರ ಶಾಸಕ ಸತೀಶ್ ಸೈಲ್ ಪುತ್ರಿ ಸಾಧ್ವಿ ಸೈಲ್ 61ನೇ ಫೆಮಿನಾ ಮಿಸ್ ಇಂಡಿಯಾ ಕಿರೀಟ ಗೆದ್ದಿದ್ದಾರೆ. 29 ಸ್ಪರ್ಧಿಗಳನ್ನು ಹಿಂದಿಕ್ಕಿ ಗೋವಾ ಪ್ರತಿನಿಧಿಸಿ ಜಯ ಗಳಿಸಿದ ಸಾಧ್ವಿ, 2026ರ ಮಿಸ್ ವರ್ಲ್ಡ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಕೆನಡಾದ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರ ಪದವೀಧರೆ ಸಾಧ್ವಿ, ಛಾಯಾಗ್ರಹಣ, ಬ್ಯಾಡ್ಮಿಂಟನ್ ಮತ್ತು ಜೇನುಸಾಕಣೆ ಸೇರಿದಂತೆ ವಿವಿಧ ಹವ್ಯಾಸಗಳನ್ನು ಹೊಂದಿದ್ದಾರೆ.

ಫೆಮಿನಾ ಮಿಸ್ ಇಂಡಿಯಾ ಪಟ್ಟ ಗೆದ್ದ ಕಾರವಾರ ಶಾಸಕನ ಮಗಳು ಸಾಧ್ವಿ ಸತೀಶ್ ಸೈಲ್​
ಸತೀಶ್​-ಸಾಧ್ವಿ

Updated on: Apr 20, 2026 | 11:12 AM

ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮಗಳು ಸಾಧ್ವಿ ಸೈಲ್ ಅವರು 61ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಗೆದ್ದು ಸಾಧನೆ ಮಾಡಿದ್ದಾರೆ. ಏಪ್ರಿಲ್ 18ರಂದು ಒಡಿಶಾದ ಭುವನೇಶ್ವರದಲ್ಲಿರುವ ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿಯಲ್ಲಿ ಫಿನಾಲೆ ನಡೆದಿದೆ. ಸಾಧ್ವಿ ಅವರು ಗೆದ್ದು ಕೀರಿಟವನ್ನು ತಮ್ಮದಾಗಿಸಿಕೊಂಡಿದ್ದಾರೆ. ಗೆದ್ದ ಬಳಿಕ ತಂದೆಯ ಜೊತೆ ವಿಡಿಯೋ ಕಾಲ್​​​ನಲ್ಲಿ ಮಾತನಾಡಿ ಸಾಧ್ವಿ ಖುಷಿಪಟ್ಟಿದ್ದಾರೆ.

ವಿವಿಧ ರಾಜ್ಯಗಳ ಸ್ಪರ್ಧಿಗಳು ಫಿನಾಲೆಯಲ್ಲಿ ಇದ್ದರು. ಒಟ್ಟೂ 29 ಮಂದಿಯನ್ನು ಹಿಂದಿಕ್ಕಿ ಗೋವಾ ಪ್ರತಿನಿಧಿಸಿದ್ದ ಸಾಧ್ವಿ ಗೆದ್ದಿದ್ದಾರೆ. ಮಹಾರಾಷ್ಟ್ರದ ರಾಜನಂದಿನಿ ಅವರು ಮೊದಲ ರನ್ನರ್ ಅಪ್ ಆದರೆ, ಜಮ್ಮು ಹಾಗೂ ಕಾಶ್ಮೀರದ ಶ್ರೀತಿ ಅದ್ವೈತಾ ಅವರು ಎರಡನೇ ರನ್ನರ್ ಅಪ್ ಆಗಿದ್ದಾರೆ. ಕಳೆದ ವರ್ಷದ ವಿನ್ನರ್ ನಿಕಿತಾ ಪೋರ್ವಾಲ್ ಅವರು ಸಾಧ್ವಿಗೆ ಕಿರೀಟ ತೊಡಿಸಿದರು. ಕರ್ನಾಟಕವನ್ನು ಪ್ರತಿನಿಧಿಸಿದ್ದ ಖುಷಿ ರಮೇಶ್‌ ಅವರು ಟಾಪ್ 15ರಲ್ಲಿ ಸ್ಥಾನ ಪಡೆಯಲಷ್ಟೇ ಶಕ್ತರಾದರು.

‘ನನಗೆ ಈ ಅವಕಾಶ ಸಿಕ್ಕಿದ್ದಕ್ಕೆ ನಾನು ತುಂಬಾ ಕೃತಜ್ಞಳಾಗಿದ್ದೇನೆ. ಇಲ್ಲಿ ಬಂದ ಪ್ರತಿಯೊಬ್ಬರೂ ವಿಜೇತರು. ಭಾರತವನ್ನು ಹೆಮ್ಮೆ ಪಡುವಂತೆ ಮಾಡುವುದು ನನ್ನ ಉದ್ದೇಶ’ ಎಂದು ಸಾಧ್ವಿ ಅವರು ಪ್ರತಿಕ್ರಿಯಿಸಿದ್ದಾರೆ. ಸಾಧ್ವಿ ಅವರು ಕೆನಡಾದ ಬ್ರಿಟಿಷ್ ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರ ಮತ್ತು ಅಂತರರಾಷ್ಟ್ರೀಯ ಸಂಬಂಧಗಳಲ್ಲಿ ಪದವಿ ಪಡೆದಿದ್ದಾರೆ.

ಇದನ್ನೂ ಓದಿ: ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್

ಸಾಧ್ವಿ ಅವರು ಸ್ಪರ್ಧೆಗೆ ಹೋಗುವುದಕ್ಕೂ ಮೊದಲು 10 ಕೆಜಿ ತೂಕ ಇಳಿಸಿಕೊಂಡಿದ್ದರು ಎಂಬುದು ವಿಶೇಷ. ಸಾಧ್ವಿ ವಿವಿಧ ರೀತಿಯ ಹವ್ಯಾಸ ಹೊಂದಿದ್ದಾರೆ. ಛಾಯಾಗ್ರಹಣ, ಬ್ಯಾಡ್ಮಿಂಟನ್, ಜೇನುಸಾಕಣೆ ಮೊದಲಾದವು ಅವರ ಫೇವರಿಟ್ ಹಾಬಿ. ಸಾಧ್ವಿ ಅವರು 2026ರ ಮಿಸ್‌ ವರ್ಲ್ಡ್‌ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ವಿಯಟ್ನಾಂನಲ್ಲಿ ಸ್ಪರ್ಧೆ ನಡೆಯಲಿದ್ದು, ಸೆಪ್ಟೆಂಬರ್ 5ರಂದು ಫಿನಾಲೆ ನಡೆಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Published On - 11:12 am, Mon, 20 April 26

ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us