ಸಂಚಾರಿ ವಿಜಯ್​ ಬಳಿಕ ಮತ್ತೋರ್ವ ನಟನಿಗೆ ರಸ್ತೆ ಅಪಘಾತ; ಆಸ್ಪತ್ರೆಗೆ ದಾಖಲು, ಐಸಿಯುನಲ್ಲಿ ಚಿಕಿತ್ಸೆ

Kathi Mahesh: ಕಾರು ಜಖಂ ಆಗಿರುವುದು ನೋಡಿದರೆ ಅಪಘಾತದ ತೀವ್ರತೆ ಹೇಗಿತ್ತು ಎಂಬುದು ಗೊತ್ತಾಗುತ್ತದೆ. ಹಾಗಾಗಿ ಮಹೇಶ್​ ಅವರಿಗೆ ಹೆಚ್ಚು ಗಾಯಗಳು ಆಗಿರಬಹುದು ಎಂಬ ಅನುಮಾನ ವ್ಯಕ್ತವಾಗುತ್ತಿದೆ.

ಸಂಚಾರಿ ವಿಜಯ್​ ಬಳಿಕ ಮತ್ತೋರ್ವ ನಟನಿಗೆ ರಸ್ತೆ ಅಪಘಾತ; ಆಸ್ಪತ್ರೆಗೆ ದಾಖಲು, ಐಸಿಯುನಲ್ಲಿ ಚಿಕಿತ್ಸೆ
ಅಪಘಾತಕ್ಕೆ ಒಳಗಾದ ಕತ್ತಿ ಮಹೇಶ್​ ಇನೊವಾ ಕಾರು
Follow us
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ

Updated on: Jun 26, 2021 | 4:57 PM

ನಟ ಸಂಚಾರಿ ವಿಜಯ್​ ಅವರು ಭೀಕರ ರಸ್ತೆ ಅಪಘಾತಕ್ಕೆ ಒಳಗಾದ ಶಾಕಿಂಗ್​ ಸುದ್ದಿ ಮಾಸುವ ಮುನ್ನವೇ ಮತ್ತೋರ್ವ ನಟನಿಗೆ ಅಪಘಾತ ಆಗಿದೆ. ಟಾಲಿವುಡ್​ ಸಿನಿಮಾಗಳಲ್ಲಿ ನಟಿಸಿರುವ ಕತ್ತಿ ಮಹೇಶ್​ ಅವರು ಚಿತ್ತೂರಿನಿಂದ ಹೈದರಾಬಾದ್​ಗೆ ಮರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಅವರು ಚಲಿಸುತ್ತಿದ್ದ ಇನೊವಾ ಕಾರು ಟ್ರಕ್​ವೊಂದಕ್ಕೆ ಡಿಕ್ಕಿ ಹೊಡಿದಿದೆ! ಸದ್ಯ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನಟನಾಗಿ ಮಾತ್ರವಲ್ಲದೆ, ವಿಮರ್ಶಕನಾಗಿ ಹಾಗೂ ಬಿಗ್​ ಬಾಸ್​ ತೆಲುಗು ಸೀಸನ್​ 1ರ ಸ್ಪರ್ಧಿಯಾಗಿಯೂ ಕತ್ತಿ ಮಹೇಶ್​ ಫೇಮಸ್​. ನೆಲ್ಲೂರಿನ ಹೊರವಲಯದ ಚಂದ್ರಶೇಖರಪುರಂ ಬಳಿ ಮಹೇಶ್​ ಚಲಿಸುತ್ತಿದ್ದ ಕಾರು ಶುಕ್ರವಾರ (ಏ.25) ಅಪಘಾತಕ್ಕೆ ಈಡಾಯಿತು. ಸರಿಯಾದ ಸಮಯಕ್ಕೆ ಕಾರಿನ ಏರ್​​ಬ್ಯಾಗ್​ ತೆರೆದುಕೊಂಡಿದ್ದರಿಂದ ಅವರಿಗೆ ಮಾರಣಾಂತಿಕ ಗಾಯಗಳಾಗುವುದು ತಪ್ಪಿದೆ ಎನ್ನಲಾಗಿದೆ. ಆದರೂ ಅವರಿಗೆ ಸದ್ಯಕ್ಕೆ ಪ್ರಜ್ಞೆ ಬಂದಿಲ್ಲ ಎಂದು ವರದಿ ಆಗಿದೆ.

ಮಹೇಶ್​ ಅವರ ಇನೊವಾ ಕಾರು ಜಖಂ ಆಗಿದೆ. ಸದ್ಯ ಆ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡುತ್ತಿವೆ. ಕಾರು ಜಖಂ ಆಗಿರುವುದು ನೋಡಿದರೆ ಅಪಘಾತದ ತೀವ್ರತೆ ಹೇಗಿತ್ತು ಎಂಬುದು ಗೊತ್ತಾಗುತ್ತದೆ. ಹಾಗಾಗಿ ಮಹೇಶ್​ ಅವರಿಗೆ ಹೆಚ್ಚು ಗಾಯಗಳಾಗಿರಬಹುದು ಎಂಬ ಅನುಮಾನ ವ್ಯಕ್ತವಾಗುತ್ತಿದೆ.

ಕಿರುಚಿತ್ರಗಳ ಮೂಲಕ ಮಹೇಶ್ ವೃತ್ತಿಜೀವನ ಆರಂಭಿಸಿದ್ದರು. ಸಿನಿಮಾ ವಿಮರ್ಶೆಯಲ್ಲಿ ವಿವಾದಾತ್ಮಕ ಅಭಿಪ್ರಾಯವನ್ನು ವ್ಯಕ್ತಪಡಿಸುವ ಮೂಲಕ ಮಹೇಶ್​ ಹೆಚ್ಚು ಖ್ಯಾತಿ ಪಡೆದುಕೊಂಡರು. ನೇನೆ ರಾಜು ನೇನೆ ಮಂತ್ರಿ, ಕ್ರ್ಯಾಕ್​, ಅಮ್ಮ ರಾಜ್ಯಂ ಲೋ ಕಡಪ ಬಿದ್ದಲು ಮುಂತಾದ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಈಗ ಅವರಿಗೆ ಅಪಘಾತ ಆಗಿರುವ ಸುದ್ದಿ ಕೇಳಿ ಅಭಿಮಾನಿಗಳಿಗೆ ಆತಂಕ ಆಗಿದೆ. ಮಹೇಶ್​ ಆರೋಗ್ಯದ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಸಿಗಬೇಕಿದೆ. ಆಸ್ಪತ್ರೆ ಬಿಡುಗಡೆ ಮಾಡಲಿರುವ ಹೆಲ್ತ್​ ಬುಲೆಟಿನ್​ಗಾಗಿ ನಿರೀಕ್ಷಿಸಲಾಗುತ್ತಿದೆ.

ಇದನ್ನೂ ಓದಿ:

ಸಂಚಾರಿ ವಿಜಯ್​ ರೀತಿಯಲ್ಲೇ ಅಪಘಾತದಲ್ಲಿ ಮೃತಪಟ್ಟ ಸ್ಯಾಂಡಲ್​ವುಡ್​ ಕಲಾವಿದರಿವರು

ಭೀಕರ ಅಪಘಾತದಲ್ಲಿ ಸುನೀಲ್​ ನಿಧನರಾದಾಗ ನಿಜವಾಗಿ ನಡೆದಿದ್ದು ಏನು? ಸಂಬಂಧಿ ಸಚಿನ್​ ತೆರೆದಿಟ್ಟ ಸತ್ಯ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ