ಜನ್ಮದಿನಕ್ಕೂ ಮುನ್ನ ಮಂಗಳೂರಿನ ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಕತ್ರಿನಾ ಕೈಫ್ ಭೇಟಿ
ಜುಲೈ 16ರಂದು ಕತ್ರಿನಾ ಕೈಫ್ ಅವರ ಜನ್ಮದಿನ. ಅವರು ಮಂಗಳೂರಿನ ಕೊರಗಜ್ಜನ ಸ್ಥಳಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಕತ್ರಿನಾ ಜೊತೆ ಸುನೀಲ್ ಶೆಟ್ಟಿ ಪುತ್ರ ಅಹಾನ್ ಶೆಟ್ಟಿ, ಪುತ್ರಿ ಆತಿಯಾ ಶೆಟ್ಟಿ ಹಾಗೂ ಅಳಿಯ ಕೆ.ಎಲ್. ರಾಹುಲ್ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಕೆ ಮಾಡಿದ್ದಾರೆ.
ನಟಿ ಕತ್ರಿನಾ ಕೈಫ್ ಅವರು ಮುಸ್ಲಿಂ. ಹಿಂದೂ ವ್ಯಕ್ತಿಯನ್ನು ಅವರು ವರಿಸಿದ್ದಾರೆ. ಈ ಕಾರಣಕ್ಕೆ ಅವರು ಹಿಂದೂ ಹಾಗೂ ಮುಸ್ಲಿಂ ಧರ್ಮ ಎರಡನ್ನೂ ಆಚರಿಸುತ್ತಾರೆ. ಅವರಿಗೆ ಹಿಂದೂ ದೇವರ ಬಗ್ಗೆಯೂ ಭಕ್ತಿ ಇದೆ. ಜುಲೈ 16ರಂದು ಅವರ ಜನ್ಮದಿನ. ಬರ್ತ್ಡೇಗೂ ಮುನ್ನ ಅವರು ಮಂಗಳೂರಿನ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ.
ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಬಾಲಿವುಡ್ ನಟಿ ಕತ್ರಿನಾ ಕೈಪ್ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಅವರು ಮಂಗಳೂರಿಗೆ ಭೇಟಿ ನೀಡಿರುವ ಫೋಟೋಗಳು ವೈರಲ್ ಆಗಿದೆ. ಕೊರಗಜ್ಜನ ಕುರಿತು ಬಾಲಿವುಡ್ಮಂದಿಗೆ ವಿಶೇಷ ನಂಬಿಕೆ ಸೃಷ್ಟಿ ಆಗಿದೆ. ಇದಕ್ಕೆ ಕಾರಣ ಆಗಿರೋದು ಬಾಲಿವುಡ್ನಲ್ಲಿ ಇರುವ ಕರಾವಳಿ ಮೂಲದ ಮಂದಿ. ಶಿಲ್ಪಾ ಶೆಟ್ಟಿ, ಸುನೀಲ್ ಶೆಟ್ಟಿ ಮೊದಲಾದವರು ಆಗಾಗ ಇಲ್ಲಿಗೆ ಆಗಮಿಸಿ ಪೂಜೆ ಸಲ್ಲಿಸುತ್ತಾರೆ. ಹೀಗಾಗಿ, ಬಾಲಿವುಡ್ನ ಉಳಿದವರಿಗೂ ಈ ಬಗ್ಗೆ ನಂಬಿಕೆ ಮೂಡಿದೆ.
ಕತ್ರಿನಾ ಕೈಫ್ ಜೊತೆ ಸುನೀಲ್ ಶೆಟ್ಟಿ ಫ್ಯಾಮಿಲಿ ಕೂಡ ಇಲ್ಲಿಗೆ ಆಗಮಿಸಿದೆ. ಸುನೀಲ್ ಶೆಟ್ಟಿ ಪುತ್ರ ಅಹಾನ್ ಶೆಟ್ಟಿ, ಪುತ್ರಿ ಆತಿಯಾ ಶೆಟ್ಟಿ ಹಾಗೂ ಅಳಿಯ ಕೆ.ಎಲ್. ರಾಹುಲ್ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಕೆ ಮಾಡಿದ್ದಾರೆ. ಸುನೀಲ್ ಶೆಟ್ಟಿ ಅವರು ಮಂಗಳೂರು ಮೂಲದವರು. ಅವರು ಆಗಾಗ ಇಲ್ಲಿಗೆ ಭೇಟಿ ನೀಡುತ್ತಾರೆ.
ಇದನ್ನೂ ಓದಿ: ವಿಕ್ಕಿ ಕೌಶಲ್ ಹಾಗೂ ಕತ್ರಿನಾ ಕೈಫ್ ಮಧ್ಯೆ ಯಾರು ಹೆಚ್ಚು ಶ್ರೀಮಂತ?
ಕತ್ರಿನಾ ಕೈಫ್ ಅವರು ಪ್ರೆಗ್ನೆಂಟ್ ಎನ್ನುವ ಸುದ್ದಿ ಇತ್ತೀಚೆಗೆ ಹರಿದಾಡಿದೆ. ಅವರು ನಟ ವಿಕ್ಕಿ ಕೌಶಲ್ ಅವರನ್ನು ವಿವಾಹ ಆಗಿ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಪ್ರೆಗ್ನೆಂಟ್ ವಿಚಾರ ಬಂದಾಗಲೆಲ್ಲ ಇವರು ಸ್ಪಷ್ಟನೆ ನೀಡುವ ಕೆಲಸ ಮಾಡುತ್ತಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.