ಶೀಘ್ರವೇ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಲಿದೆ ‘ಆಪರೇಷನ್ ಲಂಡನ್ ಕೆಫೆ’ ಸಿನಿಮಾ

ಕನ್ನಡ, ಮರಾಠಿ, ಹಿಂದಿ, ತಮಿಳು, ತೆಲುಗು, ಮಲಯಾಳಂ ಭಾಷೆಯಲ್ಲಿ ‘ಆಪರೇಷನ್ ಲಂಡನ್ ಕೆಫೆ’ ಸಿನಿಮಾ ರಿಲೀಸ್ ಆಗಲಿದೆ. ಸದ್ಯ ಈ ಚಿತ್ರಕ್ಕೆ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಪ್ರಗತಿಯಲ್ಲಿವೆ. ಆದಷ್ಟು ಬೇಗ ಸಿನಿಮಾ ರಿಲೀಸ್ ಮಾಡೋದಾಗಿ ನಿರ್ದೇಶಕ ಸಡಗರ ರಾಘವೇಂದ್ರ ಹೇಳಿಕೊಂಡಿದ್ದಾರೆ.

ಶೀಘ್ರವೇ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಲಿದೆ ‘ಆಪರೇಷನ್ ಲಂಡನ್ ಕೆಫೆ’ ಸಿನಿಮಾ
ಕವೀಶ್-ಮೇಘಾ

Updated on: Jun 05, 2024 | 10:39 AM

ಸದ್ಯ ಲೋಕಸಭಾ ಚುನಾವಣೆಯ ಕಾವು ಪೂರ್ಣಗೊಂಡಿದೆ. ಈಗ ಚಿತ್ರರಂಗದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಅನೇಕ ಸಿನಿಮಾಗಳು ರಿಲೀಸ್​ಗೆ ರೆಡಿ ಇವೆ. ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ (Megha Shetty) ಕಾಂಬಿನೇಷನ್​ನಲ್ಲಿ ರೆಡಿ ಆಗಿರೋ ‘ಆಪರೇಷನ್ ಲಂಡನ್ ಕೆಫೆ’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಸಿನಿಮಾ ಶೀಘ್ರವೇ ರಿಲೀಸ್ ಆಗಲಿದೆ. ಕನ್ನಡದ ಜೊತೆ ಇನ್ನೂ ಕೆಲವು ಭಾಷೆಗಳಲ್ಲಿ ಸಿನಿಮಾ ಬಿಡುಗಡೆ ಆಗಲಿದೆ. ಈ ಚಿತ್ರದಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆ ಎನ್ನಲಾಗಿದೆ.

ಕನ್ನಡ, ಮರಾಠಿ, ಹಿಂದಿ, ತಮಿಳು, ತೆಲುಗು, ಮಲಯಾಳಂ ಭಾಷೆಯಲ್ಲಿ ‘ಆಪರೇಷನ್ ಲಂಡನ್ ಕೆಫೆ’ ಸಿನಿಮಾ ರಿಲೀಸ್ ಆಗಲಿದೆ. ಸದ್ಯ ಈ ಚಿತ್ರಕ್ಕೆ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಪ್ರಗತಿಯಲ್ಲಿವೆ. ಇಂದು (ಜೂನ್ 5) ಕವೀಶ್ ಜನ್ಮದಿನ. ಈ ಸಂದರ್ಭದಲ್ಲಿ ಸಿನಿಮಾ ತಂಡ ಹೊಸ ಮಾಹಿತಿ ಹಂಚಿಕೊಂಡಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸಿ ಆದಷ್ಟು ಬೇಗ ಸಿನಿಮಾ ರಿಲೀಸ್ ಮಾಡೋದಾಗಿ ನಿರ್ದೇಶಕ ಸಡಗರ ರಾಘವೇಂದ್ರ ಹೇಳಿಕೊಂಡಿದ್ದಾರೆ.

‘ಆಪರೇಷನ್ ಲಂಡನ್ ಕೆಫೆ’ ಚಿತ್ರದಲ್ಲಿ ದೊಡ್ಡ ತಾರಾ ಬಳಗ ಇದೆ. ಕವೀಶ್ ಶೆಟ್ಟಿ, ಮೇಘಾ ಶೆಟ್ಟಿ ಜೊತೆ ಮರಾಠಿಯ ಶಿವಾನಿ ಸುರ್ವೆ, ಪ್ರಸಾದ್ ಕಾಂಡೇಕರ್, ವಿರಾಟ್ ಮಡಕೆ ನಟಿಸಿದ್ದಾರೆ. ಕನ್ನಡದ ಕಲಾವಿದರಾದ ಅರ್ಜುನ್ ಕಾಪಿಕಾಡ್, ಬಿ ಸುರೇಶ್, ಧರ್ಮೇಂದ್ರ ಅರಸ್, ಕೃಷ್ಣ ಹೆಬ್ಬಾಳೆ, ನೀನಾಸಂ ಅಶ್ವಥ್ ಮೊದಲಾದವರು ಅಭಿನಯಿಸಿದ್ದಾರೆ.

ಈಗತಾನೇ ಗುರುತಿಸಿಕೊಳ್ಳುತ್ತಿರುವ ಪ್ರಾನ್ಶು ಝಾ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಡಿ. ನಾಗಾರ್ಜುನ್ ಛಾಯಾಗ್ರಹಣ ಚಿತ್ರಕ್ಕೆ ಇದೆ. ಅನುಭವಿ ಸಿನಿಮಾಟೋಗ್ರಾಫರ್ ಸುಂದರನಾಥ ಸುವರ್ಣ ಅವರ ಜೊತೆಯಲ್ಲಿ ಇವರು ಕೆಲಸ ಮಾಡಿದ್ದರು. ವರದರಾಜ್ ಕಾಮತ್ ಕಲಾ ನಿರ್ದೇಶನ ಚಿತ್ರಕ್ಕಿದೆ. ಕೆ. ಎಂ. ಪ್ರಕಾಶ್ ಸಂಕಲನದ ಜೊತೆಯಲ್ಲಿ ನಾಗೇಂದ್ರ ಪ್ರಸಾದ್, ಕವಿರಾಜ್ ಮತ್ತು ಸಡಗರ ರಾಘವೇಂದ್ರ ಸಾಹಿತ್ಯ ಬರೆದಿದ್ದಾರೆ. ವಿಕ್ರಂ ಮೊರ್, ಅರ್ಜುನ್ ಮತ್ತು ಮಾಸ್ ಮಾದ ಸಾಹಸ ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ:  ಬರಲಿದೆ ಮೇಘಾ ಶೆಟ್ಟಿ ಸಿನಿಮಾ; ಶೂಟಿಂಗ್​ ಮುಗಿಸಿದ ‘ಆಪರೇಷನ್ ಲಂಡನ್ ಕೆಫೆ’

ಇಂಡಿಯನ್ ಫಿಲ್ಮ್​ ಫ್ಯಾಕ್ಟರಿ ಮತ್ತು ದೀಪಕ್ ರಾಣೆ ಫಿಲ್ಮ್​ ಬ್ಯಾನರ್ ಅಡಿಯಲ್ಲಿ ಅದ್ದೂರಿಯಾಗಿ ಈ ಸಿನಿಮಾ ನಿರ್ಮಾಣಗೊಳ್ಳುತ್ತಿದೆ. ಈ ಚಿತ್ರವನ್ನು ಉಡುಪಿಯ ವಿಜಯ್ ಕುಮಾರ್ ಶೆಟ್ಟಿ ಹವರಾಲ್, ದೀಪಕ್ ರಾಣೆ ರಮೇಶ್ ಕೊಠಾರಿ, ಮತ್ತು ವಿಜಯ್ ಪ್ರಕಾಶ್ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us