AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಫೋಟೋದಲ್ಲಿರುವ ಸ್ಟಾರ್ ನಟಿ ಯಾರು ಎಂದು ಗುರುತಿಸುತ್ತೀರಾ?

ಈ ಫೋಟೋಗಳನ್ನು ಅಭಿಮಾನಿಗಳು ಸಂಪೂರ್ಣವಾಗಿ ಇಷ್ಟಪಟ್ಟಿದ್ದಾರೆ. ‘ಬಾಲ್ಯದಲ್ಲಿಯೂ ನೀವು ಕ್ಯೂಟ್ ಆಗಿ ಕಾಣಿಸುತ್ತಿದ್ದಿರಿ. ಈಗಂತೂ ಕೇಳೋದೇ ಬೇಡ’ ಎಂದು ಕೆಲವರು ಬರೆದುಕೊಂಡಿದ್ದಾರೆ.

ಈ ಫೋಟೋದಲ್ಲಿರುವ ಸ್ಟಾರ್ ನಟಿ ಯಾರು ಎಂದು ಗುರುತಿಸುತ್ತೀರಾ?
ರಾಜೇಶ್ ದುಗ್ಗುಮನೆ
|

Updated on: Mar 11, 2023 | 8:07 AM

Share

ಸೆಲೆಬ್ರಿಟಿಗಳು ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್ ಆಗಿರೋಕೆ ಪ್ರಯತ್ನಿಸುತ್ತಾರೆ. ವಿವಿಧ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಕೆಲವೊಮ್ಮೆ ಬಾಲ್ಯದ ಫೋಟೋಗಳನ್ನು ಅವರು ಪೋಸ್ಟ್ ಮಾಡುತ್ತಾರೆ. ನೆಚ್ಚಿನ ಸೆಲೆಬ್ರಿಟಿಯ ಬಾಲ್ಯದ ಚಿತ್ರ (Childhood Photo)  ನೋಡೋಕೆ ಅಭಿಮಾನಿಗಳಿಗೂ ಕುತೂಹಲ ಇರುತ್ತದೆ. ಈಗ ದಕ್ಷಿಣ ಭಾರತದ ನಟಿಯ ಬಾಲ್ಯದ​ ಫೋಟೋ ಒಂದು ಸೋಶಿಯಲ್ ಮೀಡಿಯಾದಲ್ಲಿ (Social Media)  ವೈರಲ್ ಆಗಿದೆ. ಅವರ ಅಭಿಮಾನಿಗಳು ಇದನ್ನು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಇದು ಯಾರ ಫೋಟೋ ಎಂದು ಗುರುತಿಸುವಂತೆ ಕೆಲವರು ಸವಾಲು ಹಾಕಿದ್ದಾರೆ.

ಹಾಗಾದರೆ ಫೋಟೋದಲ್ಲಿರುವ ನಟಿ ಯಾರು? ಅವರೇ ಕೀರ್ತಿ ಸುರೇಶ್. ಅವರ ಸಹೋದರಿ ರೇವತಿ ಸುರೇಶ್​ಗೆ ಹುಟ್ಟುಹಬ್ಬದ ಸಂಭ್ರಮ. ಈ ವಿಶೇಷ ದಿನದಂದು ಕೀರ್ತಿ ಅವರು ಬಾಲ್ಯದ ನೆನಪನ್ನು ತೆರೆದಿಟ್ಟಿದ್ದಾರೆ. ರೇವತಿ ಜೊತೆ ಕಳೆದ ಕ್ಷಣಗಳು ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿವೆ. ಅದನ್ನು ಅವರು ಈಗ ಪೋಸ್ಟ್ ಮಾಡಿದ್ದಾರೆ. ಫೋಟೋ ಸ್ಟುಡಿಯೋ ಮೊದಲಾದ ಕಡೆಗಳಲ್ಲಿ ಕೀರ್ತಿ ಹಾಗೂ ರೇವತಿ ಒಟ್ಟಿಗೆ ನಿಂತಿರುವ ಫೋಟೋಗಳು ಇವೆ.

ಇದನ್ನೂ ಓದಿ
Image
Keerthy Suresh: ಗುರುತೇ ಸಿಗದಷ್ಟು ಬದಲಾದ ಕೀರ್ತಿ ಸುರೇಶ್; ಡಿಗ್ಲಾಮ್ ಲುಕ್​ನಲ್ಲಿ ಗಮನ ಸೆಳೆದ ನಟಿ
Image
Keerthy Suresh: ಸಮುದ್ರ ತೀರದಲ್ಲಿ ಬೋಲ್ಡ್ ಆಗಿ ಪೋಸ್ ಕೊಟ್ಟ ಕೀರ್ತಿ ಸುರೇಶ್
Image
Keerthy Suresh: ತಮಿಳಿನಲ್ಲಿ ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಯ ಮೊದಲ ಚಿತ್ರಕ್ಕೆ ಕೀರ್ತಿ ಸುರೇಶ್​ ನಾಯಕಿ; ಪೋಸ್ಟರ್​ ರಿಲೀಸ್​

ಫ್ಯಾನ್ಸ್ ಏನ್ ಅಂದ್ರು?

ಈ ಫೋಟೋಗಳನ್ನು ಅಭಿಮಾನಿಗಳು ಸಂಪೂರ್ಣವಾಗಿ ಇಷ್ಟಪಟ್ಟಿದ್ದಾರೆ. ‘ಬಾಲ್ಯದಲ್ಲಿಯೂ ನೀವು ಕ್ಯೂಟ್ ಆಗಿ ಕಾಣಿಸುತ್ತಿದ್ದಿರಿ. ಈಗಂತೂ ಕೇಳೋದೇ ಬೇಡ’ ಎಂದು ಕೆಲವರು ಬರೆದುಕೊಂಡಿದ್ದಾರೆ. ಇನ್ನೂ ಕೆಲವರು ‘ಕೀರ್ತಿ ಅವರಂಥ ಸಹೋದರಿ ಪಡೆದ ರೇವತಿಯೇ ಧನ್ಯರು’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Keerthy Suresh: ಗುರುತೇ ಸಿಗದಷ್ಟು ಬದಲಾದ ಕೀರ್ತಿ ಸುರೇಶ್; ಡಿಗ್ಲಾಮ್ ಲುಕ್​ನಲ್ಲಿ ಗಮನ ಸೆಳೆದ ನಟಿ

ಸಿನಿಮಾಗಳಲ್ಲಿ ಕೀರ್ತಿ ಸುರೇಶ್ ಬ್ಯುಸಿ

ಕೀರ್ತಿ ಸುರೇಶ್ ಅವರು ಬಾಲ ಕಲಾವಿದೆಯಾಗಿ ಚಿತ್ರರಂಗದಲ್ಲಿ ತೊಡಗಿಕೊಂಡಿದ್ದರು. ನಂತರ ನಾಯಕಿ ಆಗಿ ಮಿಂಚಿದರು. ‘ಮಹಾನಟಿ’ ಚಿತ್ರದಿಂದ ಅವರ ಖ್ಯಾತಿ ಹೆಚ್ಚಾಯಿತು. ಆ ಬಳಿಕ ಅವರು ಸಾಲು ಸಾಲು ಸಿನಿಮಾಗಳಲ್ಲಿ ನಟಿಸಿದರೂ ಯಶಸ್ಸು ಕಾಣಲಿಲ್ಲ. 2022ರಲ್ಲಿ ರಿಲೀಸ್ ಆದ ಮಹೇಶ್ ಬಾಬು ನಟನೆಯ ‘ಸರ್ಕಾರು ವಾರಿ ಪಾಟ’ ಚಿತ್ರದಿಂದ ಕೀರ್ತಿ ಸುರೇಶ್​ ಗೆಲುವಿನ ಟ್ತ್ಯಾಕ್​ಗೆ ಮರಳಿದರು. ಸದ್ಯ ಅವರು ಆರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಪೈಕಿ ‘ದಸರಾ’ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ತೆಲುಗಿನಲ್ಲಿ ಸಿದ್ಧಗೊಳ್ಳುತ್ತಿರುವ ಈ ಚಿತ್ರಕ್ಕೆ ನಾನಿ ಹೀರೋ. ಈ ಚಿತ್ರದಲ್ಲಿ ಕೀರ್ತಿ ಸುರೇಶ್ ಅವರು ಡಿಗ್ಲಾಮ್ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು