AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಂಬಾಳೆಯ ಮತ್ತೊಂದು ಸಿನಿಮಾದ ಪ್ರೋಮೋ ಬಿಡುಗಡೆ

Raghu Thatha: ಹೊಂಬಾಳೆ ನಿರ್ಮಿಸಿರುವ ಬಿಗ್​ಬಜೆಟ್ ಸಿನಿಮಾ ‘ಸಲಾರ್’ ಬಿಡುಗಡೆಯ ಹೊಸ್ತಿಲಲ್ಲಿರುವಾಗಲೇ ಹೊಂಬಾಳೆ ನಿರ್ಮಿಸಿರುವ ಮತ್ತೊಂದು ಸಿನಿಮಾದ ಪ್ರೋಮೋ ಬಿಡುಗಡೆ ಆಗಿದೆ.

ಹೊಂಬಾಳೆಯ ಮತ್ತೊಂದು ಸಿನಿಮಾದ ಪ್ರೋಮೋ ಬಿಡುಗಡೆ
ರಘು ತಾತ
ಮಂಜುನಾಥ ಸಿ.
|

Updated on: Dec 19, 2023 | 6:42 PM

Share

ಹೊಂಬಾಳೆ (Hombale) ಕಡಿಮೆ ಅವಧಿಯಲ್ಲಿ ಭಾರತದ ಟಾಪ್ ನಿರ್ಮಾಣ ಸಂಸ್ಥೆಗಳಲ್ಲಿ ಒಂದೆಂಬ ಹೆಸರು ಗಳಿಸಿದೆ. ಹೊಂಬಾಳೆ ನಿರ್ಮಿಸುತ್ತಿರುವ ಸಿನಿಮಾಗಳ ಪ್ರಮಾಣ, ‘ಗಾತ್ರ’ದಲ್ಲಿ ಭಾರತದ ಇನ್ಯಾವುದೇ ನಿರ್ಮಾಣ ಸಂಸ್ಥೆ ಸದ್ಯಕ್ಕಂತೂ ಸಿನಿಮಾಗಳನ್ನು ನಿರ್ಮಿಸುತ್ತಿಲ್ಲ. ಕನ್ನಡ, ತೆಲುಗು, ತಮಿಳು, ಮಲಯಾಳಂ ಚಿತ್ರರಂಗಗಳಲ್ಲಿ ಅಲ್ಲಿನ ಸ್ಟಾರ್ ನಟ-ನಟಿಯರೊಟ್ಟಿಗೆ ಸಿನಿಮಾ ನಿರ್ಮಾಣವನ್ನು ಹೊಂಬಾಳೆ ಮಾಡುತ್ತಿದೆ. ಇದೀಗ ತಮ್ಮ ನಿರ್ಮಾಣ ಸಂಸ್ಥೆಯಿಂದ ನಿರ್ಮಾಣಗೊಂಡಿರುವ ಈ ವರೆಗಿನ ಅತಿ ದೊಡ್ಡ ಬಜೆಟ್​ನ ಸಿನಿಮಾ ‘ಸಲಾರ್’ನ ಬಿಡುಗಡೆಯಲ್ಲಿ ಬ್ಯುಸಿಯಾಗಿದೆ ಹೊಂಬಾಳೆ. ಅದರ ನಡುವೆ ತಮ್ಮ ಹೊಸ ಸಿನಿಮಾದ ಪ್ರೋಮೋ ಬಿಡುಗಡೆ ಮಾಡಿದೆ.

ಹೊಂಬಾಳೆ ನಿರ್ಮಾಣ ಮಾಡುತ್ತಿರುವ ಮೊದಲ ತಮಿಳು ಸಿನಿಮಾದ ಪ್ರೋಮೋ ಇದೀಗ ಬಿಡುಗಡೆ ಆಗಿದೆ. ತಮಿಳಿನಲ್ಲಿ ‘ರಘುತಾತ’ ಹೆಸರಿನ ಸಿನಿಮಾವನ್ನು ಹೊಂಬಾಳೆ ಫಿಲ್ಮ್ಸ್​ ನಿರ್ಮಾಣ ಮಾಡಿದೆ. ಈ ಸಿನಿಮಾವು ಮಹಿಳಾ ಪ್ರಧಾನ ಸಿನಿಮಾ ಆಗಿದ್ದು, ಕೀರ್ತಿ ಸುರೇಶ್ ನಾಯಕಿಯಾಗಿ ನಟಿಸಿದ್ದಾರೆ. ಸಿನಿಮಾದ ಪ್ರೋಮೋ ಇದೀಗ ಬಿಡುಗಡೆ ಆಗಿದ್ದು ಗಮನ ಸೆಳೆಯುತ್ತಿದೆ.

ಪ್ರೋಮೋನಲ್ಲಿ, ಕೀರ್ತಿ ಸುರೇಶ್​ರ ಪೋಸ್ಟರ್​ ಅನ್ನು ಅಂಟಿಸಿಕೊಂಡಿರುವ ಆಟೋ ಒಂದು ಯಾವುದೋ ಹಳ್ಳಿಯೊಂದರಲ್ಲಿ ಹೋಗುತ್ತಿದೆ. ‘ಹೊಂಬಾಳೆ ನಿರ್ಮಿಸಿರುವ ‘ರಘು ತಾತ’ ಸಿನಿಮಾ ಬಿಡುಗಡೆ ಆಗುತ್ತಿದೆ ಮರೆಯಬೇಡಿ, ಮರೆತು ನಿರಾಶರಾಗಬೇಡಿ’ ಎಂಬ ಹಳೆಯ ಕಾಲದ ಮಾದರಿಯಲ್ಲಿ ಮೈಕ್​ನಲ್ಲಿ ಕೂಗಿಕೊಂಡು ಆಟೋ ಹೋಗುತ್ತಿದೆ. ಲಂಗಾ ದಾವಣಿ ತೊಟ್ಟ ಕೀರ್ತಿ ಸುರೇಶ್​ರ ಪೋಸ್ಟರ್​ ಸಹ ಗಮನ ಸೆಳೆಯುತ್ತಿದೆ.

ಇದನ್ನೂ ಓದಿ:ಕರ್ನಾಟಕದಲ್ಲಿ ‘ಸಲಾರ್’ ಅಡ್ವಾನ್ಸ್ ಬುಕಿಂಗ್ ಬಗ್ಗೆ ಮಾಹಿತಿ ಕೊಟ್ಟ ಹೊಂಬಾಳೆ

ಈ ಮೊದಲು ಬಿಡುಗಡೆ ಆಗಿದ್ದ ‘ರಘುತಾತ’ ಸಿನಿಮಾದ ಪೋಸ್ಟರ್, ಇದೊಂದು ಹೋರಾಟದ ಕತೆ ಎಂಬುದನ್ನು ಸ್ಪಷ್ಟವಾಗಿ ಹೇಳಿತ್ತು, ಲಭ್ಯವಿರುವ ಮಾಹತಿಯಂತೆ, ತನಗೆ ಸೇರಬೇಕಾದ ಭೂಮಿಗಾಗಿ ಯುವತಿ ನಡೆಸುವ ದಿಟ್ಟ ಹೋರಾಟದ ಕತೆಯನ್ನು ‘ರಘುತಾತ’ ಹೊಂದಿದೆ ಎನ್ನಲಾಗುತ್ತಿದೆ. ಸಿನಿಮಾದಲ್ಲಿ ಹಾಸ್ಯ, ಭಾವುಕ ಸನ್ನಿವೇಶಗಳ ಜೊತೆಗೆ ಹೋರಾಟದ ಕತೆಯೂ ಇರಲಿದೆ.

ಈ ಸಿನಿಮಾವನ್ನು ಹೆಸರಾಂತ ಯುವಬರಹಗಾರ ಸುಮನ್ ಕುಮಾರ್ ನಿರ್ದೇಶನ ಮಾಡಿದ್ದಾರೆ. ಹಿಂದಿಯ ಜನಪ್ರಿಯ ಶೋಗಳಾಗಿರುವ ‘ದಿ ಫ್ಯಾಮಿಲಿ ಮ್ಯಾನ್’, ‘ಗನ್ಸ್ ಆಂಡ್ ಗುಲಾಬ್ಸ್’, ‘ಗೇಮ್ ಓವರ್’, ‘ಫರ್ಜಿ’ ಬರಹಗಾರರ ತಂಡದ ಸದಸ್ಯರಾಗಿದ್ದಾರೆ ಸುಮನ್. ಇದೀಗ ‘ರಘುತಾತ’ ಸಿನಿಮಾದ ಚಿತ್ರಕತೆಯನ್ನು ತಾವೇ ರಚಿಸಿ ನಿರ್ದೇಶನ ಮಾಡುತ್ತಿದ್ದಾರೆ.

ಹೊಂಬಾಳೆ ಪ್ರಸ್ತುತ ಹಲವು ಸಿನಿಮಾಗಳ ಮೇಲೆ ಬಂಡವಾಳ ಹೂಡಿದೆ. ‘ಸಲಾರ್’ ಸಿನಿಮಾದ ಮೊದಲ ಭಾಗ ಬಿಡುಗಡೆ ಆಗಲಿದೆ. ಎರಡನೇ ಭಾಗ ಕೆಲವು ತಿಂಗಳ ಬಳಿಕ ಬಿಡುಗಡೆ ಆಗುತ್ತದೆ. ಕನ್ನಡದಲ್ಲಿ ಶ್ರೀಮುರಳಿ ನಟನೆಯ ‘ಬಘೀರ’, ಯುವ ರಾಜ್​ಕುಮಾರ್ ನಟನೆಯ ‘ಯುವ’, ರಿಷಬ್ ಶೆಟ್ಟಿ ನಟಿಸಿ ನಿರ್ದೇಶನ ಮಾಡುತ್ತಿರುವ ‘ಕಾಂತಾರ’, ರಕ್ಷಿತ್ ಶೆಟ್ಟಿ ನಟಿಸಿ ನಿರ್ದೇಶನ ಮಾಡುತ್ತಿರುವ ‘ರಿಚರ್ಡ್ ಆಂಟೊನಿ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ತಮಿಳಿನಲ್ಲಿ ‘ರಘುತಾತ’ ಮಲಯಾಳಂನಲ್ಲಿ ಪೃಥ್ವಿರಾಜ್ ಸುಕುಮಾರನ್ ನಟನೆಯ ‘ಮೈಖಲ್’ ಹೆಸರಿನ ಸಿನಿಮಾಕ್ಕೆ ಬಂಡವಾಳ ಹೂಡಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು