AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ದೌರ್ಜನ್ಯ ಎಸಗಿದ ಹಾಲಿವುಡ್​ ನಟನಿಗೆ ಮೂರು ವರ್ಷ ಜೈಲು ಶಿಕ್ಷೆ

2017ರಲ್ಲಿ ಸ್ಕಾಟ್​ಲ್ಯಾಂಡ್​ನ ಗ್ಲಾಸ್​ಗೋವ್​ನ ಅಪಾರ್ಟ್​ಮೆಂಟ್​ ಒಂದರಲ್ಲಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಮಹಿಳೆ ದೂರು ದಾಖಲು ಮಾಡಿದ್ದರು.

ಲೈಂಗಿಕ ದೌರ್ಜನ್ಯ ಎಸಗಿದ ಹಾಲಿವುಡ್​ ನಟನಿಗೆ ಮೂರು ವರ್ಷ ಜೈಲು ಶಿಕ್ಷೆ
ಕೆವಿನ್
ರಾಜೇಶ್ ದುಗ್ಗುಮನೆ
|

Updated on: May 16, 2021 | 8:33 PM

Share

ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಹಾಲಿವುಡ್​ ಯುವ ನಟ ಕೆವಿನ್​ ಗತ್ರಿ ಅವರಿಗೆ ಕೋರ್ಟ್​ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದೆ ಎಂದು ಬಿಬಿಸಿ ವರದಿ ಮಾಡಿದೆ. ‘ಫೆಂಟಾಸ್ಟಿಕ್​ ಬೀಸ್ಟ್’​ ಸೇರಿ ಸಾಕಷ್ಟು ಸಿನಿಮಾಗಳಲ್ಲಿ ಕೆವಿನ್ ನಟಿಸಿದ್ದಾರೆ. ಸದ್ಯ ಇವರಿಗೆ ಜೈಲು ಶಿಕ್ಷೆ ಆಗಿರುವುದು ದೊಡ್ಡಮಟ್ಟದಲ್ಲಿ ಚರ್ಚೆ ಆಗಿದೆ.

2017ರಲ್ಲಿ ಸ್ಕಾಟ್​ಲ್ಯಾಂಡ್​ನ ಗ್ಲಾಸ್​ಗೋವ್​ನ ಅಪಾರ್ಟ್​ಮೆಂಟ್​ ಒಂದರಲ್ಲಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಮಹಿಳೆ ದೂರು ದಾಖಲು ಮಾಡಿದ್ದರು. ಆದರೆ, ಕೆವಿನ್ ಈ ಆರೋಪವನ್ನು ಅಲ್ಲಗಳೆದಿದ್ದರು. ಮಹಿಳೆಗೆ ಅನಾರೋಗ್ಯ ಉಂಟಾಗಿತ್ತು. ಹೀಗಾಗಿ ನಾನು ಅವರಿಗೆ ಸಹಾಯ ಮಾಡಿದ್ದೆ. ಆದರೆ, ಅವರು ಅದನ್ನು ತಪ್ಪಾಗಿ ಅರ್ಥೈಸಿದ್ದಾರೆ ಎಂದು ಹೇಳಿದ್ದರು. ಈ ಮೂಲಕ ಅವರು ತಮ್ಮ ಮೇಲಿನ ಆರೋಪವನ್ನು ಸಂಪೂರ್ಣವಾಗಿ ಅಲ್ಲಗಳೆದಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸಿದ್ದರು. ಈ ವೇಳೆ ಕೆವಿನ್​ ಡಿಎನ್​ಎ ಮಹಿಳೆಯ ಒಳ ಉಡುಪಿನಲ್ಲಿ ಸಿಕ್ಕಿತ್ತು. ಕೋರ್ಟ್​ನಲ್ಲಿ ನಾಲ್ಕು ದಿನಗಳ ವಿಚಾರಣೆ ಪೂರ್ಣಗೊಂಡಿದೆ. ಈ ವೇಳೆ ಕೆವಿನ್​ ತಪ್ಪು ಮಾಡಿದ್ದಾರೆ ಎಂಬುದಕ್ಕೆ ಸಾಕ್ಷ್ಯ ಸಿಕ್ಕಿದೆ. ಹೀಗಾಗಿ, ಕೋರ್ಟ್ ಕೆವಿನ್​ಗೆ​ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದೆ.

ನಟ ಸ್ಕಾಟ್​ ರೇಡ್​ ಅವರ ಅಪಾರ್ಟ್​ಮೆಂಟ್​ನಲ್ಲಿ ಈ ಘಟನೆ ನಡೆದಿದೆ. 29 ವರ್ಷದ ಯುವತಿ ಸ್ಕಾಟ್​ ಅವರನ್ನು ಭೇಟಿ ಮಾಡಲು ಬಂದಿದ್ದರು. ಆದರೆ, ಯುವತಿಗೆ ಅನಾರೋಗ್ಯ ಕಾಡಿದ್ದರಿಂದ ಸ್ಕಾಟ್​ ಮನೆಯಲ್ಲೇ ಮಲಗಿದ್ದರು. ಅದೇ ಅಪಾರ್ಟ್​ಮೆಂಟ್​ನಲ್ಲಿದ್ದ ಕೆವಿನ್​​ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು. ಈ ಎಲ್ಲವೂ ಈಗ ಸಾಬೀತಾಗಿದ್ದರಿಂದ ಕೋರ್ಟ್​ ಶಿಕ್ಷೆ ವಿಧಿಸಿದೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ; ಅತ್ಯಾಚಾರ ಎಸಗಿ ಕೊಂದಿರುವ ಶಂಕೆ

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!